ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಎದುರೇ ಹಾಸನ ಸೀಟಿಗಾಗಿ ಪ್ರಜ್ವಲ್ ರೇವಣ್ಣ ಅವರು ಪಟ್ಟು ಹಿಡಿದಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ಚುನಾವಣೆಗೆ ನಿಲ್ಲಲು ತಾತನ ಎದುರೇ ಬಿಗಿಪಟ್ಟು ಹಿಡಿದು ಕುಳಿತಿರುವ ಮೊಮ್ಮಗನ ಹಠಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಮಣಿಯದೇ, ಹಾಸನ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧಿಸಲು ಮಾಜಿ ಪ್ರಧಾನಿ ದೇವೇಗೌಡ ಅವರು ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರಜ್ವಲ್‍ಗೆ ದೇವೇಗೌಡರು ಮಂಡ್ಯ ಲೋಕಸಭಾ ಕ್ಷೇತ್ರವನ್ನು ತೋರಿಸಿದ್ದಾರಾ ಎಂಬ ಪ್ರಶ್ನೆಯೊಂದು ಎದ್ದಿದೆ. ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಹೋಗಲು ಹೆಚ್.ಡಿ.ದೇವೇಗೌಡರು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಆದ್ರೆ ಇತ್ತ ಹಾಸನ ಲೋಕಸಭಾ ಕ್ಷೇತ್ರದಲ್ಲೇ ನಾನು ಸ್ಪರ್ಧೆ ಮಾಡುವುದಾಗಿ ಪ್ರಜ್ವಲ್ ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲು ತಾತ, ಮೊಮ್ಮಗನ ನಡುಯೇ ಮಾತುಕತೆ ನಡೆಯುತ್ತಿದೆ.
ಹಾಗಾದ್ರೆ ಮಾಜಿ ಪ್ರಧಾನಿ ಹಾಸನ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡ್ತಾರಾ? ಮಂಡ್ಯದಲ್ಲಿ ದೇವೇಗೌಡರ ಕುಟುಂಬದವರಿಂದ್ಲೇ ಸ್ಪರ್ಧೆನಾ? ಅಥವಾ ಮಂಡ್ಯದವರಿಗೆ ಅವಕಾಶನಾ? ಎನ್ನುವ ಹಲವಾರು ಪ್ರಶ್ನೆಗಳು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತದೆ. ಒಟ್ಟಿನಲ್ಲಿ ಜೆಡಿಎಸ್‍ನಲ್ಲಿ ತಾತ, ಮೊಮ್ಮಗನ ಸ್ಪರ್ಧೆಯ ಲೆಕ್ಕಚಾರದ ಬಗ್ಗೆ ಚರ್ಚೆ ಜೋರಾಗಿದೆ.