– ಮತ್ತೆ 6 ದಿನ ಪೊಲೀಸ್ ಕಸ್ಟಡಿಗೆ ಪಡೆದ ಎಸ್‌ಐಟಿ
ಬೆಂಗಳೂರು: ಕೆ.ಆರ್ ನಗರ ಸಂತ್ರಸ್ತೆ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Special Court of Representatives) ವಜಾಗೊಳಿಸಿದೆ.
ಈಗಾಗಲೇ ಎರಡು ಪ್ರಕರಣಗಳಲ್ಲಿ ಪ್ರಜ್ವಲ್ ರೇವಣ್ಣರನ್ನ ವಶಕ್ಕೆ ಪಡೆದು ಎಸ್‌ಐಟಿ ವಿಚಾರಣೆ (SIT Enquiry) ನಡೆಸುತ್ತಿದೆ. ಇದೀಗ 3ನೇ ಪ್ರಕರಣದಲ್ಲೂ ಜಾಮೀನು (Bail) ಅರ್ಜಿ ವಜಾಗೊಂಡಿದೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ; ಮತ್ತೋರ್ವ ಆರೋಪಿ ಬಂಧನ
ಇತ್ತೀಚೆಗಷ್ಟೇ ಲೈಂಗಿಕ ಕಿರುಕುಳ ಪ್ರಕರಣದಲ್ಲಿ 42ನೇ ಎಸಿಎಂಎಂ ನ್ಯಾಯಾಲಯವು ಪ್ರಜ್ವಲ್ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಬುಧವಾರ ಸೈಬರ್ ಅಪರಾಧ ಠಾಣೆ FIR ಸಂಖ್ಯೆ.2/2024 ರಲ್ಲಿ ವಶಕ್ಕೆ ಪಡೆದಿದ್ದ ಎಸ್‌ಐಟಿ ಕೋರ್ಟ್ ಮುಂದೆ ಹಾಜರುಪಡಿಸಿತ್ತು. ಈ ವೇಳೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, 6 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಇದನ್ನೂ ಓದಿ: ಕುವೈತ್ ಅಗ್ನಿ ದುರಂತದಲ್ಲಿ 40 ಮಂದಿ ಭಾರತೀಯರ ದುರ್ಮರಣ – ಮೋದಿ ಸಂತಾಪ