ಹಾಸನ: ಮಾಜಿ ಪ್ರಧಾನಿ ದೇವೇಗೌಡರು ತುಮಕೂರು ಕ್ಷೇತ್ರದಲ್ಲಿ ಸೋಲನ್ನು ಕಂಡಿದ್ದಾರೆ. ಇದರಿಂದ ಮನಸ್ಸಿಗೆ ನೋವಾಗಿದೆ. ಹೀಗಾಗಿ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರು ಪ್ರಚಂಡ ಗೆಲುವನ್ನು ಸಾಧಿಸಿದ್ದರೂ ನಾವು ಸಂಭ್ರಮಾಚರಣೆ ಮಾಡಿಲ್ಲ ಎಂದು ಭವಾನಿ ರೇವಣ್ಣ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಾಸನದಲ್ಲಿ ಪ್ರಜ್ವಲ್ ಗೆದ್ದಿದ್ದರು ನಾವು ಸಂಭ್ರಮ ಪಟ್ಟಿಲ್ಲ. ದೇವೇಗೌಡರು ಸೋಲನ್ನು ಕಂಡಿರುವುದು ನಮಗೆ ನೋವಾಗಿದೆ. ಇದರಿಂದ ಕಾರ್ಯಕರ್ತರು ಕೂಡ ಬೇಸರಗೊಂಡಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಗೆಲುವನ್ನು ಸಂಭ್ರಮಿಸಲು ಪ್ರಜ್ವಲ್ ಹಾಗೂ ಕಾರ್ಯಕರ್ತರು ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ತುಮಕೂರಿನಲ್ಲಿ ಆದ ಸೋಲಿನಿಂದ ಎಲ್ಲರಿಗೂ ನೋವಾಗಿದೆ. ನಾವು ಯಾರೂ ಕೂಡ ಗೆಲುವನ್ನು ಆಚರಿಸಿಲ್ಲ ಎಂದರು. ಇದನ್ನೂ ಓದಿ:ಪ್ರಜ್ವಲ್ ರೇವಣ್ಣ ರಾಜೀನಾಮೆಗೆ ನಿರ್ಧಾರ!
Advertisement
Advertisement
ಇನ್ನೊಂದೆಡೆ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಪ್ರಜ್ವಲ್ ರೇವಣ್ಣ, ಯಾರೂ ಬೇಜಾರು ಮಾಡಿಕೊಳ್ಳಬೇಡಿ. ನಾನು ಒಂದು ನಿರ್ಧಾರಕ್ಕೆ ಬಂದಿದ್ದೇನೆ. ಅದನ್ನು ನಮ್ಮ ನಾಯಕರು ಎಷ್ಟರ ಮಟ್ಟಿಗೆ ಸ್ವೀಕರಿಸುತ್ತಾರೆ ಗೊತ್ತಿಲ್ಲ. ಯಾರಿಗೂ ಕೇಳದೆ ನಾನು ಇದನ್ನು ಮಾಡಿದೆ ಎಂದು ಹೇಳಬೇಡಿ. ಗೌಡರು ನಮ್ಮ ಪಕ್ಷದ ಬೇರು. ದೇವೇಗೌಡರ ಆಶೀರ್ವಾದದೊಂದಿಗೆ ನಾನು ರಾಜೀನಾಮೆ ಕೊಟ್ಟು ಗೌಡರಿಗೆ ಈ ಜಿಲ್ಲೆಯನ್ನು ಬಿಟ್ಟುಕೊಡುತ್ತೇನೆ. ಅವರ ಶಕ್ತಿ ರಾಜ್ಯಕ್ಕೆ ಬೇಕಿದೆ ಎಂದು ಹೇಳಿದ್ದಾರೆ.
Advertisement
Advertisement
ದೇವೇಗೌಡರನ್ನು ರಾಜಕೀಯದಲ್ಲಿ ಕಳೆದುಕೊಳ್ಳಲು ನಾನು ಇಷ್ಟಪಡುವುದಿಲ್ಲ. ನಾನು ಇಂದು ದೇವೇಗೌಡರನ್ನು ಭೇಟಿಯಾಗಿ ಅವರ ಮನವೊಲಿಸಿ ಜಿಲ್ಲೆಯಲ್ಲಿ ಮತ್ತೆ ಚುನಾವಣೆಗೆ ನಿಲ್ಲಿಸಬೇಕಿದೆ ಎಂದು ಹೇಳುವ ಮೂಲಕ ರಾಜೀನಾಮೆಗೆ ಇಂಗಿತ ವ್ಯಕ್ತಪಡಿಸಿದ್ದಾರೆ.
ಪ್ರಜ್ವಲ್ ಗೆಲುವು:
ಅಜ್ಜ ದೇವೇಗೌಡರು ತ್ಯಾಗ ಮಾಡಿದ್ದ ಕ್ಷೇತ್ರದಲ್ಲಿ ಮೊಮ್ಮಗ ಪ್ರಜ್ವಲ್ ರೇವಣ್ಣ ಗೆದ್ದಿದ್ದಾರೆ. ಪ್ರಜ್ವಲ್ ರೇವಣ್ಣ 1,42,123 ಮತಗಳ ಅಂತರದಿಂದ ಬಿಜೆಪಿಯ ಮಂಜು ಅವರನ್ನು ಸೋಲಿಸಿದ್ದಾರೆ. ಪ್ರಜ್ವಲ್ ರೇವಣ್ಣ ಅವರು 6,75,512 ಮತಗಳನ್ನು ಪಡೆದಿದ್ದರೆ, ಎ.ಮಂಜು 5,33,389 ಮತಗಳನ್ನು ಗಳಿಸಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 8 ವಿಧಾನ ಸಭಾ ಕ್ಷೇತ್ರಗಳಿವೆ. 16,29,587 ಮತದಾರರಿದ್ದು, ಅವರಲ್ಲಿ 12,73,219 ಮತದಾನ ಮಾಡಿದ್ದರು.
ದೇವೇಗೌಡ್ರಿಗೆ ಸೂಲು:
ಇತ್ತ ತುಮಕೂರಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಅಳೆದು-ತೂಗಿ ಕೊನೆಯದಾಗಿ ತುಮಕೂರು ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಸ್ಪರ್ಧಿಸಿದ್ದರು. ಆದರೆ ಇಂದಿನ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಅವರು ದೇವೇಗೌಡರ ವಿರುದ್ಧ 12,887 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು 5,96,231 ಮತಗಳನ್ನು ಪಡೆದಿದ್ದರೆ, ದೇವೇಗೌಡರು 5,83,344 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಬಸವರಾಜು ಅವರು 12,887 ಬಹುಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.