ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕರಾಗಿ ನಟಿಸಿರುವ ‘ಗಣ’ (Gana) ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಅವರು ಬರೆದಿರುವ ‘she is in love’ ಎಂಬ ರೊಮ್ಯಾಂಟಿಕ್ ಸಾಂಗ್ ಇತ್ತೀಚೆಗೆ ಬಿಡುಗಡೆಯಾಗಿದೆ. ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಹಾಡನ್ನು ವಿಜಯ ಪ್ರಕಾಶ್ ಇಂಪಾಗಿ ಹಾಡಿದ್ದಾರೆ.
Advertisement
ಮುರಳಿ ಮಾಸ್ಟರ್ ನೃತ್ಯ ಸಂಯೋಜಿಸಿರುವ ಈ ಹಾಡಿಗೆ ಪ್ರಜ್ವಲ್ ದೇವರಾಜ್ ಹಾಗೂ ಯಶ ಶಿವಕುಮಾರ್ (Yash Shivakumar) ಹೆಜ್ಜೆ ಹಾಕಿದ್ದಾರೆ. ಈ ಸುಮಧುರ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು ಸದ್ಯದಲ್ಲೇ ತೆರೆಗೆ ಬರಲಿದೆ.
Advertisement
Advertisement
ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಅವರು ನಿರ್ಮಿಸಿರುವ ಈ ಚಿತ್ರವನ್ನು ಹರಿಪ್ರಸಾದ್ ಜಕ್ಕ (Hariprasad Jakka) ನಿರ್ದೇಶಿಸಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ , ಸತೀಶ್ ಎ ಕಲಾ ನಿರ್ದೇಶನ ಹಾಗೂ ಡಿ.ಜೆ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಚಿಕ್ಕಬಳ್ಳಾಪುರ ಶ್ರೀನಿವಾಸ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.
Advertisement
ಪ್ರಜ್ವಲ್ ದೇವರಾಜ್, ಯಶಾ ಶಿವಕುಮಾರ್, ವೇದಿಕಾ ಕುಮಾರ್, ಕೃಷಿ ತಾಪಂಡ, ವಿಶಾಲ್ ಹೆಗಡೆ, ರವಿ ಕಾಳೆ, ಸಂಪತ್ ರಾಜ್, ಶಿವರಾಜ್ ಕೆ.ಆರ್ ಪೇಟೆ, ರಮೇಶ್ ಭಟ್ ಮುಂತಾದವರು ಗಣ ಚಿತ್ರದ ತಾರಾಬಳಗದಲ್ಲಿದ್ದಾರೆ.
Web Stories