ಶ್ರೀನಗರ ಕಿಟ್ಟಿ (Srinagar Kitty) ಮುಖ್ಯಭೂಮಿಕೆಯಲ್ಲಿ ಮೂಡಿ ಬರಲಿರುವ ಸಂಜು ವೆಡ್ಸ್ ಗೀತಾ 2 (Sanju Weds Geetha 2) ಸಿನಿಮಾದಲ್ಲಿ ಅಚ್ಚರಿಯ ತಾರಾಬಳಗ ಇರಲಿದೆಯಂತೆ ನಿರ್ದೇಶಕ ನಾಗಶೇಖರ್ (Nagashekhar) ತಿಳಿಸಿದ್ದಾರೆ. ಈ ಸಿನಿಮಾದಲ್ಲಿ ಕಿಟ್ಟಿ ನಾಯಕನಾದರೆ, ನಾಯಕಿಯ ಆಯ್ಕೆ ನಡೆಯಬೇಕಿದೆ. ಈಗಾಗಲೇ ರಚಿತಾ ರಾಮ್ ಅವರ ಜೊತೆ ಒಂದು ಸುತ್ತಿನ ಮಾತುಕತೆ ನಡೆದಿರುವುದರಿಂದ, ಬಹುತೇಕ ಅವರೇ ಖಚಿತ ಎಂದು ಹೇಳಲಾಗುತ್ತಿದೆ.
ಇನ್ನೂ ಅಚ್ಚರಿಯ ಸಂಗತಿ ಅಂದರೆ, ಈ ಸಿನಿಮಾದಲ್ಲಿ ದಕ್ಷಿಣದ ಖ್ಯಾತ ತಾರೆಗಳಾದ ಪ್ರಕಾಶ್ ರೈ (Prakash Rai) ಮತ್ತು ರಮ್ಯಾಕೃಷ್ಣ (Ramya Krishna) ಕೂಡ ಪ್ರಮುಖ ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ಯಾರು, ಯಾವ ಪಾತ್ರಗಳನ್ನು ಮಾಡಲಿದ್ದಾರೆ ಎಂದು ನಾಗಶೇಖರ್ ಹೇಳದೇ ಇದ್ದರೂ, ಇಬ್ಬರೂ ನಟಿಸುವುದು ಪಕ್ಕಾ ಎಂದಿದ್ದಾರೆ. ಈಗಾಗಲೇ ಹಾಡುಗಳಿಗೆ ಸಂಗೀತ ಸಂಯೋಜನೆಯ ಕೆಲಸ ಪ್ರಾರಂಭವಾಗಿದೆ. ಇದನ್ನೂ ಓದಿ:‘ಲೈಗರ್’ ನಟಿ ಜೊತೆ ಆದಿತ್ಯ ಕಪೂರ್ ಕಣ್ ಕಣ್ ಸಲಿಗೆ
ಈ ಸಿನಿಮಾದ ಕುರಿತು ಹತ್ತಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ ನಿರ್ದೇಶಕ ನಾಗಶೇಖರ್. ಸಂಜು ವೆಡ್ಸ್ ಗೀತಾ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ನಾಯಕನಾದರೆ, ರಮ್ಯಾ ನಾಯಕಿ. ಆದರೆ, ಸಂಜು ವೆಡ್ಸ್ ಗೀತಾ 2 ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಮುಂದುವರೆದರೆ, ರಮ್ಯಾ ನಾಯಕಿಯಾಗಿ ನಟಿಸುತ್ತಿಲ್ಲ. ಅದರ ಬದಲು ರಚಿತಾ ರಾಮ್ ಅವರಿಗೆ ಮಣೆ ಹಾಕಿದ್ದಾರಂತೆ ನಾಗಶೇಖರ್. ಆದರೆ, ರಚಿತಾ ಈವರೆಗೂ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ.
ಮೊದಲ ಭಾಗದ ಕಥೆಯನ್ನು ರಾಜ್ಯದ ಒಬ್ಬ ಪೊಲೀಸ್ ಅಧಿಕಾರಿ ಹೇಳಿದ್ದರು. ಅವರು ತನಿಖೆ ಮಾಡಿದ್ದ ಕೇಸ್ ಅನ್ನು ಆಧರಿಸಿದ ಸಿನಿಮಾ ಅದಾಗಿತ್ತು. ಪಾರ್ಟ್ 2 ಸಿನಿಮಾಗೆ ಕಥೆ ಹೇಳಿದ್ದು ಕನ್ನಡದ ಒಬ್ಬ ಸೂಪರ್ ಸ್ಟಾರ್ ಅಂತೆ. ಈ ಕುರಿತು ನಾಗಶೇಖರ್ ಮಾತನಾಡಿದ್ದಾರೆ. ಆದರೆ, ಆ ಸ್ಟಾರ್ ಯಾರು ಎನ್ನುವ ಕುತೂಹಲವನ್ನು ಅವರು ಬಿಟ್ಟುಕೊಟ್ಟಿಲ್ಲ. ಸ್ಟಾರ್ ನಟರೊಬ್ಬರು ಹೇಳಿದ ಕಥೆಯನ್ನೇ ಡೆವಲಪ್ ಮಾಡಿದ್ದೇನೆ ಎಂದಿದ್ದಾರೆ ನಾಗಶೇಖರ್.
Web Stories