– ವದಂತಿಗೆ ಕಿವಿಗೊಡಬೇಡಿ.. ಖುದ್ದು ಬಂದು ಇದಕ್ಕೆಲ್ಲ ಉತ್ತರಿಸುವೆ ಎಂದ ನಟ
ಧರ್ಮಸ್ಥಳ ಬುರುಡೆ (Dharmasthala Mass Burial Case) ಪ್ರಕರಣದಲ್ಲಿ ತಮ್ಮ ಹೆಸರು ಥಳಕು ಹಾಕಿಕೊಂಡಿರುವ ಬಗ್ಗೆ ನಟ ಪ್ರಕಾಶ್ ರಾಜ್ (Prakash Raj) ಸ್ಪಷ್ಟನೆ ನೀಡಿದ್ದಾರೆ.
ಎಕ್ಸ್ ಪೋಸ್ಟ್‌ನಲ್ಲಿ ಸ್ಪಷ್ಟನೆ ನೀಡಿರುವ ಪ್ರಕಾಶ್ ರಾಜ್, ಖುದ್ದು ನಾನೇ ಬಂದು ಇದಕ್ಕೆಲ್ಲ ಉತ್ತರಿಸುತ್ತೇನೆ. ಅಲ್ಲಿಯವರೆಗೂ ಯಾವುದೇ ವದಂತಿಗೆ ಕಿವಿಗೊಡಬೇಡಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದ ವಿರುದ್ಧ 200 ಕೋಟಿ ಷಡ್ಯಂತ್ರ – ಚಿನ್ನಯ್ಯನಿಗೆ ಕರೆ ಮಾಡಿ ಅಪ್ಪಿಕೊಳ್ಳುತ್ತೇನೆ ಎಂದಿದ್ದ ಪ್ರಕಾಶ್ ರಾಜ್
ಎಲ್ಲರಿಗು ನಮಸ್ಕಾರ.. ಮಾಧ್ಯಮಗಳಲ್ಲಿ… ಸಾಮಾಜಿಕ ಜಲತಾಣಗಳಲ್ಲಿ ಧರ್ಮಸ್ತಳ ಪ್ರಕರಣದ ಕುರಿತಂತೆ ನನ್ನ ಬಗ್ಗೆ ಕೆಲವು ಸುದ್ದಿ ಚರ್ಚಿಸಲ್ಪಡುತ್ತಿರುವು ನನ್ನ ಗಮನಕ್ಕೆ ಬಂದಿದೆ. ಇದು ಅತಿ ಸೂಕ್ಷ್ಮವಾದ .. ಮತ್ತು ಕೋಟ್ಯಾಂತರ ಭಕ್ತರ ನಂಬಿಕೆಗೆ ಧಕ್ಕೆ ತಂದಿರುವ ಪ್ರಕರಣವಾಗಿರುವುದರಿಂದ ..ಈ ರೀತಿಯ ಅನುಮಾನಗಳಿಗೆ ಉತ್ತರಿಸಬೇಕಾಗಿರುವುದು ನನ್ನ…
— Prakash Raj (@prakashraaj) June 12, 2026
ಪ್ರಕಾಶ್ ರಾಜ್ ಪೋಸ್ಟ್‌ನಲ್ಲಿ ಏನಿದೆ?
ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಹೆಸರು ಚರ್ಚೆಯಾಗುತ್ತಿರೋದು ಗಮನಕ್ಕೆ ಬಂದಿದೆ. ಇದು ಅತ್ಯಂತ ಸೂಕ್ಷ್ಮವಾದ ವಿಷಯ ಮತ್ತು ಲಕ್ಷಾಂತರ ಭಕ್ತರ ನಂಬಿಕೆಗೆ ನೋವುಂಟು ಮಾಡಬಹುದಾದ ವಿಚಾರ. ಹಾಗಾಗಿ, ಈ ಕುರಿತ ಅನುಮಾನಗಳಿಗೆ ಉತ್ತರಿಸುವುದು ನನ್ನ ಕರ್ತವ್ಯ.
ಸದ್ಯ ನಾನು ದೂರದೂರಿನಲ್ಲಿದ್ದೇನೆ. ಇನ್ನೆರಡು ದಿನಗಳಲ್ಲಿ ನಾನೇ ಸ್ವತಃ ಬಂದು ಮಾಧ್ಯಮ ಮಿತ್ರರ ಮುಖೇನ ಉತ್ತರಿಸುತ್ತೇನೆ. ಅಲ್ಲಿಯವರೆಗೆ ಗಾಳಿಮಾತುಗಳನ್ನು ಮತ್ತು ಕೆಲವು ದುರುಳರು ಈ ಸುದ್ದಿಗೆ ಕಟ್ಟಲೆತ್ನಿಸುತ್ತಿರುವ ರೆಕ್ಕೆ ಪುಕ್ಕಗಳನ್ನು ನಂಬದಿರಿ ಎಂದು ಜನರಲ್ಲಿ ನಟ ಪ್ರಕಾಶ್ ರಾಜ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ಮತ್ತೆ ಚುರುಕು – ಬಂಗ್ಲೆಗುಡೆ ಕಾಡಿಗೆ FSL ತಂಡ ಭೇಟಿ
