ಹುಬ್ಬಳ್ಳಿ: ರಾಜ್ಯ ಸರ್ಕಾರ ಪಂಚ ರಾಜ್ಯ ಮತ್ತು ಲೋಕಸಭೆ ಚುನಾವಣೆಗೆ (Lok Sabha Election) ಅನೈತಿಕ ಮಾರ್ಗದಿಂದ 1,000 ಕೋಟಿ ಹಣ ಸಂಗ್ರಹಕ್ಕೆ ಮುಂದಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಆರೋಪಿಸಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಐಟಿ ದಾಳಿ ಆಗಿದೆ. ಒಬ್ಬರ ಮನೆಯಲ್ಲಿ 42 ಕೋಟಿ ರೂ., ಇನ್ನೊಬ್ಬರ ಮನೆಯಲ್ಲಿ 45 ಕೋಟಿ ಹಣ ಸಿಕ್ಕಿದೆ. ಇದು ಕಾಂಗ್ರೆಸ್ ಮುಖಂಡರ ದುಡ್ಡು ಎಂದು ಸಂತೋಷ್ ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಮೊದಲನೇ ದುಡ್ಡು ಕಾಂಗ್ರೆಸ್‌ನ (Congress) ಭ್ರಷ್ಟಾಚಾರ ಹಣ ಅನ್ನೋದು ಜನಜನಿತ. ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರೇ ಕಾಂಗ್ರೆಸ್. ಇದು ಇಲ್ಲಿವರೆಗೂ ಆಗಿರೋದು. ಮುಂದೆ ಏನೇನು ಆಗುತ್ತೋ ನೋಡಬೇಕು ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ನಗದು ಅಭಿವೃದ್ಧಿ ಇಲಾಖೆ ಎಂದರೆ ಡಿಕೆಶಿಯದ್ದಾ – ಹೆಚ್‌ಡಿಕೆ ತಿರುಗೇಟು
Advertisement
Advertisement
ಇದು ಕಮಿಷನ್ ಹಣ ಎನ್ನುವ ಆರೋಪ ಇದೆ. ಇದರ ಸಮಗ್ರ ತನಿಖೆ ಆಗಬೇಕು. ಕಾಂಗ್ರೆಸ್ ಕರಾಳ ಮುಖ ಹೊರ ಬಂದಿದೆ. ಸತ್ಯಹರಿಶ್ಚಂದ್ರ ಎನ್ನುವ ಪೋಸ್ ಕೊಟ್ಟಿದ್ದರು. ಕಾಂಗ್ರೆಸ್ ಕೈವಾಡ ಇರೋದು ಸ್ಪಷ್ಟವಾಗಿದೆ. ಕಾಂಗ್ರೆಸ್ ನೈತಿಕ ಅಧಃಪತನಕ್ಕೆ ಇಳದಿದೆ. ಕಾಂಗ್ರೆಸ್ ಸರ್ಕಾರ ಅಲ್ಲ ಅದು. ಕಾಂಗ್ರೆಸ್ ಕಮಿಷನ್ ಸರ್ಕಾರ. ಜನರ ಬಗ್ಗೆ ಅರಿವಿಲ್ಲ, ಕಾಳಜಿ ಇಲ್ಲ. ಕಾನೂನುಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಿದವರು ಇದರಲ್ಲಿ ಇದ್ದಾರೆ ಎಂದು ಆರೋಪ ಮಾಡಿದ್ದಾರೆ.
Advertisement
Advertisement
ಈ ದಾಳಿ ಹಿಂದೆ ಅಕ್ರಮ ಹಣ ವರ್ಗಾವಣೆ ನಡದಿರುವ ಅನುಮಾನ ಇದೆ. ಕಾಂಗ್ರೆಸ್ ಮುಖಂಡರೇ ಇದರಲ್ಲಿ ಇರೋದು ಎಲ್ಲರಿಗೂ ಗೊತ್ತು. ಕಾನೂನಿನ ವಿರುದ್ಧ ಇರೋದು ಕಾಂಗ್ರೆಸ್ ಪಾರ್ಟಿ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಅಂಬಿಕಾಪತಿ, ಸಂತೋಷ್ ಕೃಷ್ಣಪ್ಪ ರಾಜ್ಯದ ನಂ 1, ನಂ 2 ಅವರ ಬೇನಾಮಿಗಳು: ಸಿಟಿ ರವಿ
Web Stories