ಧಾರವಾಡ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (B.S. Yediyurappa) ಅವರ ಮನೆ ಮೇಲೆ ನಡೆದ ದಾಳಿ ರಾಜಕೀಯ ಪ್ರೇರಿತವೂ ಇರಬಹುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಧಾರವಾಡದಲ್ಲಿ (Dharwad) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ರಾಜ್ಯ ಕಂಡ ಅತ್ಯಂತ ಮುತ್ಸದ್ದಿ ಹಾಗೂ ಹಿರಿಯ ರಾಜಕಾರಣಿ. ಅವರ ಮನೆಗೆ ಕಲ್ಲು ಹೊಡೆದಿರುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಗ್ಯಾಂಗ್‍ಸ್ಟರ್ ಅತೀಕ್‍ನನ್ನು ಕರೆದೊಯ್ಯುತ್ತಿದ್ದ ಪೊಲೀಸ್ ಬೆಂಗಾವಲು ವಾಹನಕ್ಕೆ ಹಸು ಡಿಕ್ಕಿ
Advertisement
Advertisement
ಸದಾಶಿವ ಆಯೋಗದ (Sadashiva ayoga) ವರದಿಯನ್ನು ಯಾರು ವಿರೋಧ ಮಾಡುತ್ತಾರೋ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai), ಕರೆದು ವೈಯಕ್ತಿಕವಾಗಿ ಹಾಗೂ ಸಾರ್ವಜನಿಕವಾಗಿ ತಿಳಿ ಹೇಳಿದ್ದಾರೆ. ಎಲ್ಲರಿಗೂ ಒಪ್ಪುವಂತ ರೀತಿಯಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸಂಬಂಧಿಸಿದವರೊಂದಿಗೆ ಮತ್ತೊಮ್ಮೆ ಮನವರಿಕೆ ಮಾಡಲಿದ್ದಾರೆ. ಯಾರೂ ಕೂಡ ಕಾನೂನು ಕೈಗೆ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.
Advertisement
Advertisement
ಈಗಾಗಲೇ ಅಧಿಕಾರಿಗಳು ಮತ್ತು ಪ್ರಮುಖರನ್ನು ಕರೆದು ಸದಾಶಿವ ಆಯೋಗದ ವರದಿ ಬಗ್ಗೆ ಸಿಎಂ ಮಾತನಾಡಿದ್ದಾರೆ. ಎಲ್ಲರೊಂದಿಗೂ ಚರ್ಚೆ ಮಾಡದ ಹೊರತು ವರದಿ ಜಾರಿಗೆ ತರಲು ಸಾಧ್ಯವಿಲ್ಲ. ಯಡಿಯೂರಪ್ಪನವರ ಮನೆ ಮೇಲೆ ನಡೆದ ದಾಳಿ ಬಗ್ಗೆ ನಾನು ಸಂಪೂರ್ಣ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಹಿಂದಿನ ಸರ್ಕಾರಗಳು ಸದಾಶಿವ ಆಯೋಗದ ವರದಿ ಅನುಷ್ಠಾನ ಮಾಡಿಲ್ಲ ಯಾಕೆ – ಹಾಲಪ್ಪ ಆಚಾರ್ ಪ್ರಶ್ನೆ