– ಗಾಂಧೀಜಿ ಅಹಿಂಸೆ ಮಾರ್ಗ ಇಂದಿನ ಕಾಂಗ್ರೆಸ್ಸಿಗರಿಗೆ ಬರೀ ಬಾಯಿಮಾತಾಗಿದೆ
ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ (B K Hariprasad) ಅವರು ‘ಗಾಂಧಿ-ಗೋಡ್ಸೆ-ಗೋವು’ ಎಂದೆಲ್ಲಾ ಸಮಾಜದಲ್ಲಿ ಶಾಂತಿ ಕದಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಬೇರೆಯವರಿಗೆ ನೈತಿಕತೆ ಪಾಠ ಮಾಡುವ ಮೊದಲು ಸಾಂವಿಧಾನಿಕ ಹುದ್ದೆಗಳಿಗೆ ಘನತೆ ಹಾಗೂ ಗೌರವ ತೋರುವುದನ್ನು ಕಲಿಯಲಿ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ(Pralhad Joshi) ತಿರುಗೇಟು ನೀಡಿದ್ದಾರೆ.
ಸಮಾಜದ ಶಾಂತಿ ಮತ್ತು ಸೌಹಾರ್ದತೆಯನ್ನು ಬಲಿ ಕೊಟ್ಟು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿರುವವರು ಬಿ.ಕೆ. ಹರಿಪ್ರಸಾದ್. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಒಂದೆಡೆ ಕಾನೂನು ಸುವ್ಯವಸ್ಥೆ ಹದಗೆಡುತ್ತಿದ್ದರೆ, ಮತ್ತೊಂದೆಡೆ ಪಕ್ಷದ ಹೊಸ ಅಧ್ಯಕ್ಷರು ಅಧಿಕಾರದ ಮದದಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸಲು ಯತ್ನಿಸುತ್ತಿದ್ದಾರೆ ಎಂದು ಜೋಶಿ ಕಿಡಿಕಾರಿದ್ದಾರೆ.
ಪ್ರಧಾನಿಯಾಗಲಿ, ಮುಖ್ಯಮಂತ್ರಿಯಾಗಲಿ, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೋಟ್ಯಂತರ ಜನರಿಂದ ಮತ ಪಡೆದು ಆಯ್ಕೆಯಾದವರು. ರಾಜಕೀಯ ಪಕ್ಷಗಳ ನಡುವೆ ಸೈದ್ಧಾಂತಿಕ ಭಿನ್ನಾಭಿಪ್ರಾಯ ಇರಬಹುದು. ಆದರೆ, ಸಾಂವಿಧಾನಿಕ ಹುದ್ದೆಗಳಿಗೆ ಹೋಲಿಕೆ ಮಾಡುವುದು ಸರಿಯಲ್ಲ ಎಂದು ಖಂಡಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರು ಹೈಕಮಾಂಡ್ ಓಲೈಸಿಕೊಳ್ಳಲು ‘ಗಾಂಧಿ-ಗೋಡ್ಸೆ-ಗೋವು’ ಎನ್ನುತ್ತ ಸಮಾಜದಲ್ಲಿ ಶಾಂತಿ ಕದಡುವ ಪ್ರಚೋದನಕಾರಿ ಮಾತುಗಳನ್ನು ಆಡುತ್ತಿದ್ದಾರೆ. ಇದು ಅತ್ಯಂತ ಕೀಳುಮಟ್ಟದ ರಾಜಕೀಯ ಹಾಗೂ ಸಂಸ್ಕೃತಿಹೀನತೆಯ ಪ್ರತೀಕ ಎಂದು ಸಚಿವರು ವಾಗ್ದಾಳಿ ನಡೆಸಿದ್ದಾರೆ.ಇದನ್ನೂ ಓದಿ: ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್ ವೇಯಲ್ಲಿ ರಿವರ್ಸ್ ತೆಗೆಯುತ್ತಿದ್ದ ಕಾರಿಗೆ SUV ಡಿಕ್ಕಿ – ನಾಲ್ವರು ಸಾವು, ವೀಡಿಯೋ ವೈರಲ್
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲ ಜನಕಲ್ಯಾಣವನ್ನು ಮರೆತು ಕೇವಲ ತುಷ್ಟೀಕರಣ, ಓಲೈಕೆ ರಾಜಕಾರಣ ಹಾಗೂ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಲೇ ಬಂದಿದೆ. ಇಂಥ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ರಾಜ್ಯದ ಜನ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಸಿದ್ದಾರೆ.
ಕಾಂಗ್ರೆಸ್ಸಿಗರಿಗೆ ಬರೀ ಬಾಯಿಮಾತಾದ ಅಹಿಂಸೆ ಮಾರ್ಗ:
ಮಹಾತ್ಮ ಗಾಂಧೀಜಿ ಅವರ ಅಹಿಂಸೆ ಮಾರ್ಗ ಎನ್ನುವುದು ಇಂದಿನ ಕಾಂಗ್ರೆಸ್ಸಿಗರಿಗೆ ಕೇವಲ ಬಾಯಿಮಾತಾಗಿದೆ. ವಾಸ್ತವದಲ್ಲಿ ಇವರು ನಕಲಿ ಗಾಂಧಿಗಳ ಜೊತೆಗೂಡಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಏನೆಲ್ಲಾ ಮಾಡುತ್ತಿದ್ದಾರೆ. ಇದು ರಾಜಕೀಯ ದ್ವೇಷದ ಪರಮಾವಧಿ ಎಂದು ವಾಗ್ದಾಳಿ ನಡೆಸಿದ್ದಾರೆ.ಇದನ್ನೂ ಓದಿ: ಚಿಕ್ಕಬಳ್ಳಾಪುರ ಹೋಂ ಸ್ಟೇನಲ್ಲಿ ಬೆಂಗಳೂರಿನ ಯುವತಿ ಸಾವು: ಇದು ಲವ್ ಜಿಹಾದ್ ಕೊಲೆ ಎಂದ ತಾಯಿ
ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ, ಸಿಖ್ ಹತ್ಯಾಕಾಂಡ ಸೇರಿದಂತೆ ಹಲವು ಕಹಿ ಘಟನೆಗಳನ್ನು ಹಾಗೂ ತಮ್ಮ ಆಡಳಿತ ವೈಫಲ್ಯಗಳನ್ನು ಮರೆತ ಕಾಂಗ್ರೆಸ್ ನಾಯಕರು ಸದಾ ಇಂತಹ ಪ್ರಚೋದನಾತ್ಮಕ ಮತ್ತು ವಿಭಜಕ ಹೇಳಿಕೆಗಳ ಮೊರೆ ಹೋಗುತ್ತಿದ್ದಾರೆ ಎಂದು ಸಚಿವ ಪ್ರಹ್ಲಾದ ಜೋಶಿ ಟೀಕಿಸಿದ್ದಾರೆ.
