ಹುಬ್ಬಳ್ಳಿ: ಪ್ರಿಯಾಂಕ್ ಖರ್ಗೆ ಅವರು ಇಡೀ ಮಹಿಳಾ ಕುಲಕ್ಕೆ ಅಪಮಾನ ಮಾಡಿದ್ದಾರೆ. ಯಾವ ಮಹಿಳೆಯೂ ಈ ಹೇಳಿಕೆಯನ್ನ ಸಹಿಸುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು.
ಪ್ರಿಯಾಂಕ್ ಖರ್ಗೆಯ ಲಂಚ, ಮಂಚ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದು ಅವರ ಕೀಳು ಅಭಿರುಚಿ ತೋರಿಸುತ್ತಿದೆ. ಮಹಿಳಾ ಸಮುದಾಯಕ್ಕೆ ಅವರು ಈ ಕೂಡಲೇ ಕ್ಷಮೆ ಕೇಳಬೇಕು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಸಾಕಷ್ಟು ಭ್ರಷ್ಟಾಚಾರವಾಗಿದೆ. ಮಲ್ಲಿಕಾರ್ಜುನ್ ಖರ್ಗೆ ಕೇಂದ್ರದ ಸಚಿವ ಇದ್ದಾಗ ಅನೇಕ ವಿಷಯಗಳಲ್ಲಿ ಭ್ರಷ್ಟಾಚಾರವಾಗಿದೆ. ಅವರಿಗೆ ನಾಚಿಕೆ, ಮಾನ, ಮರ್ಯಾದೆ ಇದ್ದಿದ್ರೆ ಭ್ರಷ್ಟಾಚಾರದ ಬಗ್ಗೆ ಮಾತನಾಡಬಾರದು ಎಂದು ವಾಗ್ದಾಳಿ ನಡೆಸಿದರು.
Advertisement
ನಾನು ‘ಲಂಚ ಮಂಚದ ಸರ್ಕಾರ’ ಎಂದಿದ್ದಕ್ಕೆ ಬಿಜೆಪಿಯವರಿಗೆ ಉರಿ ಬಿದ್ದಿದೆ! ಸತ್ಯ ಆ ಮಟ್ಟಿಗೆ ಕಹಿಯಾಗಿರುತ್ತದೆ!
ಬಿಜೆಪಿಯಲ್ಲಿ ಲಂಚ, ಮಂಚದ ಪುರಾಣವಿರದಿದ್ದರೆ ಒಬ್ಬ ಕೇಂದ್ರ ಸಚಿವರು, ಇನ್ನೊಬ್ಬ ರಾಜ್ಯ ಸಚಿವರು ರಾಜೀನಾಮೆ ನೀಡಿದ್ದೇಕೆ?
ಬಿಜೆಪಿ ಸಂಸದರು, ಮಂತ್ರಿಗಳು,ಶಾಸಕರು ಕೋರ್ಟಿನಲ್ಲಿ ಸಾಲು ಸಾಲು ತಡೆಯಾಜ್ಞೆ ತಂದಿದ್ದೇಕೆ?
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) August 12, 2022
Advertisement
ಹೊಸ ಸಂಸತ್ ನಿರ್ಮಾಣ ವಿಚಾರವಾಗಿ ಮಾತನಾಡಿದ ಅವರು, ಮುಂದಿನ ನೂರು ವರ್ಷಕ್ಕೆ ಸಂಸತ್ ಯಾವ ರೀತಿ ಇರಬೇಕು ಎಂಬ ಚಿಂತನೆಯಲ್ಲಿ ಸಂಸತ್ ನಿರ್ಮಾಣ ಮಾಡಲಾಗಿದೆ. ಜಗತ್ತಿನಲ್ಲೇ ಈ ರೀತಿಯ ಕಟ್ಟಡ ಎಲ್ಲಿಯೂ ನಿರ್ಮಾಣ ಮಾಡಿಲ್ಲ. ಜಗತ್ತಿಗೆ ಒಂದು ಉತ್ತಮ ನಿದರ್ಶನ ಈ ಸಂಸತ್ ಆಗಿದೆ ಎಂದರು. ಇದನ್ನೂ ಓದಿ: ಸರ್ಕಾರಿ ಕೆಲಸಕ್ಕೆ ಯುವತಿಯರು ಮಂಚ ಹತ್ತಬೇಕು – ಬಿಜೆಪಿ ಟೀಕಿಸೋ ಭರದಲ್ಲಿ ಪ್ರಿಯಾಂಕ್ ಖರ್ಗೆ ವಿವಾದ
Advertisement
Advertisement
ಇದೇ ಸಂದರ್ಭದಲ್ಲಿ ಇಂದಿನ ಹರ್ ಘರ್ ತಿರಂಗಾ ಅಭಿಯಾನ ಆರಂಭ ಹಿನ್ನಲೆಯಲ್ಲಿ ಹುಬ್ಬಳ್ಳಿ ಮಯೂರಿ ಎಸ್ಟೇಟ್ ನಲ್ಲಿರುವ ಜೋಶಿಯವರ ಮನೆಯಲ್ಲಿ ತಮ್ಮ ಪತ್ನಿ ಜೊತೆಗೆ ಮನೆ ಮುಂದೆ ತಿರಂಗಾ ಹಾರಿಸಿದರು. ಧ್ವಜಾರೋಹಣ ಮಾಡಿ ಘೋಷಣೆ ಕೂಗಿದರು. ಈ ಬಗ್ಗೆ ಮಾತನಾಡಿದ ಅವರು, ಇಂದಿನಿಂದ ಪ್ರಧಾನಿ ಮೋದಿಯವರು ತಿರಂಗಾ ಅಭಿಯಾನಕ್ಕೆ ಕರೆ ನೀಡಿದ್ದಾರೆ. ಈಗಾಗಲೇ ಒಂದು ಕೋಟಿ ಧ್ವಜ ಮಾರಾಟವಾಗಿವೆ. ರಾಷ್ಟ್ರ ಧ್ವಜದ ಮಹತ್ವವನ್ನ ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಭಾರತದ ವಿದ್ಯಾರ್ಥಿಗಳು ಸಾರಿದ್ದಾರೆ. ಇನ್ನೂ ಯಾರು ಧ್ವಜ ಹಾರಿಸಿಲ್ಲ ಇಂದಿನಿಂದ ತಮ್ಮ ಮನೆಗಳ ಮುಂದೆ ಹಾರಿಸಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಇಂದಿನಿಂದ ಮೂರು ದಿನಗಳ ಕಾಲ ಹರ್ ಘರ್ ತಿರಂಗಾ ಅಭಿಯಾನ