– ಸರ್ಕಾರ ಏನೋ ಸಂಚು ಮಾಡುತ್ತಿದೆ
ಹುಬ್ಬಳ್ಳಿ: ನಟ ದರ್ಶನ್ (Darshan) ಪ್ರಕರಣದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಮತ್ತು ರಾಜ್ಯಪಾಲರಿಗೆ ಪತ್ರ ಬರೆಯುವುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈಲಿನಲ್ಲಿ ಇರುವ ಕೊಲೆ ಆರೋಪಿ ದರ್ಶನ್‍ಗೆ ರಾಜಾತಿಥ್ಯ ನೀಡುತ್ತಿರವ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದರು. ದರ್ಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಗಂಭೀರತೆಯೇ ಇಲ್ಲ ಎಂದು ಕಿಡಿಕಾರಿದ್ದಾರೆ.
ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ಈಗ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿದ್ದಾರೆ. ಇಷ್ಟು ದಿನ ಸರ್ಕಾರ ಏನು ಕತ್ತೆ ಕಾಯುತ್ತಿತ್ತಾ? ಇದರಲ್ಲಿ ಕೆಲವು ರಾಜಕಾರಣಿಗಳ ಹಸ್ತಕ್ಷೇಪವೂ ಇದೆ ಎಂದು ಆರೋಪಿಸಿದ್ದಾರೆ.
ದರ್ಶನ್ ಪ್ರಕರಣದಲ್ಲಿ ಸಾಕ್ಷಿ ನಾಶ ಮಾಡಲು ಪ್ಲ್ಯಾನ್ ಮಾಡಿದಂತಿದೆ. ಇದನ್ನು ನೋಡಿದರೆ ಸರ್ಕಾರವೇ ದರ್ಶನ್ ರಕ್ಷಣೆಗೆ ನಿಂತಿದೆ ಅನಿಸುತ್ತದೆ. ಸರ್ಕಾರ ಏನೋ ಸಂಚು ಮಾಡುತ್ತಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.