ಹುಬ್ಬಳ್ಳಿ: ವೀಡಿಯೋಗಳನ್ನು ಯಾರು ವೈರಲ್ ಮಾಡಿದ್ದಾರೆ ಎನ್ನುವುದಕ್ಕಿಂತ ಸಾರ್ವಜನಿಕ ಜೀವನದಲ್ಲಿ ಹೇಗೆ ವರ್ತಿಸುತ್ತೇವೆ ಎಂಬುದು ಮುಖ್ಯ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi ) ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರ ಪೆನ್‍ಡ್ರೈವ್ ಪ್ರಕರಣ (Prajwal Revanna Pendrive Case) ಹಾಗೂ ರೇವಣ್ಣ (H.D Revanna) ಬಂಧನದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಪ್ರಕರಣದ ತನಿಖೆಯನ್ನು ಎಸ್‍ಐಟಿ ನಡೆಸುತ್ತಿದೆ. ಗಂಭೀರ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿರುವುದರಿಂದ ರೇವಣ್ಣ ಬಂಧನವಾಗಿದೆ. ಈ ರೀತಿಯ ಆಗಬಾರದಿತ್ತು. ಹಲವಾರು ಮಹಿಳೆಯರು ದೂರು ಕೊಟ್ಟಿದ್ದಾರೆ. ಪ್ರಜ್ವಲ್ ರೇವಣ್ಣ ಸಹ ಅರೆಸ್ಟ್ ಆಗಲೇಬೇಕು. ಪ್ರಕರಣದ ತನಿಖೆ ಸೂಕ್ತ ರೀತಿಯಲ್ಲಿ ಆಗಬೇಕು. ಈ ವಿಚಾರದಲ್ಲಿ ನಮ್ಮ ಪಕ್ಷದ ನಿಲವು ಸ್ಪಷ್ಟವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಆ ಯುವತಿ ನಂಬರ್‌ಗೆ ದಿನಕ್ಕೆರಡು ಬಾರಿ ಕರೆ ಮಾಡ್ತಿದ್ದಾರಂತೆ ಪ್ರಜ್ವಲ್ – ರಹಸ್ಯ ಸ್ಫೋಟ!
ರೇವಣ್ಣರಿಗೆ ಸಾಕಷ್ಟು ವಯಸ್ಸಾಗಿದೆ ಇದು ದುರ್ದೈವ. ಸಾರ್ವಜನಿಕ ಜೀವನದಲ್ಲಿ ಹೇಗೆ ವರ್ತನೆ ಮಾಡುತ್ತೇವೆ ಎಂಬುದು ಬಹಳ ಮುಖ್ಯ. ವೀಡಿಯೋ ರಿಲೀಸ್ ಆಗಿರುವುದು ಬೇಸರದ ವಿಚಾರ. ಈ ರೀತಿಯ ಘಟನೆ ಆಗಬಾರದಿತ್ತು. ವೀಡಿಯೋ ನನ್ನದಲ್ಲಾ ಎಂದರೆ ನಾವು ಎಫ್‍ಎಸ್‍ಎಲ್‍ಗೆ ಕಳುಹಿಸುತ್ತವೆ. ವೀಡಿಯೋ ಯಾರು ರಿಲೀಸ್ ಮಾಡಿದರು ಅನ್ನೋದು ಚರ್ಚೆ ವಿಷಯ ಅಲ್ಲ. ಮಹಿಳೆಯರ ಜೊತೆಗೆ ನಡೆದುಕೊಂಡಿರುವ ರೀತಿ ಸರಿಯಾದುದಲ್ಲ ಎಂದು ಅವರು ಹೇಳಿದ್ದಾರೆ.
ದಿಂಗಾಲೇಶ್ವರ ಶ್ರೀಗಳ ಆರೋಪದ ವಿಚಾರವಾಗಿ, ಹುಬ್ಬಳ್ಳಿ ಧಾರವಾಡದಲ್ಲಿ ಏನೇ ಆದರೂ ಅದಕ್ಕೆ ಜೋಶಿ ಕಾರಣ ಎನ್ನುವುದು ಕೆಲವರ ಮನಸ್ಥಿತಿ. ಸದ್ಯ ಕಾಂಗ್ರೆಸ್ ಸರ್ಕಾರ ಇದೆ. ನಮ್ಮ ಸರ್ಕಾರ ಇದ್ದಾಗಲೂ ಕೂಡ ನಾನು ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಕೈ ಹಾಕಿಲ್ಲ. ಈಗ ದಿಂಗಾಲೇಶ್ವರ ಶ್ರೀಗಳು ನಾನು ಕಾರ್ಯಕ್ರಮ ರದ್ದು ಮಾಡಿಸಿದೆ ಎನ್ನುತ್ತಿದ್ದಾರೆ ಎಂದರು. ಇದನ್ನೂ ಓದಿ: ಏನಿದು ಲುಕ್‌ಔಟ್ ನೋಟಿಸ್, ರೆಡ್ ಕಾರ್ನರ್, ಬ್ಲೂ ಕಾರ್ನರ್ ನೋಟಿಸ್? ಇವು ಹೇಗೆ ಕೆಲಸ ಮಾಡುತ್ತವೆ?