ಹುಬ್ಬಳ್ಳಿ: ಐ.ಎನ್.ಡಿ.ಐ.ಎ ಘಟಬಂಧನದ (I.N.D.I.A Alliance) ಅಸ್ತಿತ್ವ ಎಲ್ಲಿದೆ? ತೋರಿಸೋಕೆ ಮಾತ್ರ ಆ ಒಕ್ಕೂಟ ಇದೆ. ಮನೆಮುರುಕ ಘಟಬಂಧನದಲ್ಲಿ ಲೋಕಸಭಾ ಚುನಾವಣೆ ಸೋತರೆ ಗಾಂಧಿ ಕುಟುಂಬದ ಮೇಲೆ ಬರಬಾರದು ಎಂಬ ಕಾರಣಕ್ಕೆ ಮಲ್ಲಿಕಾರ್ಜುನ ಖರ್ಗೆಯವರನ್ನು (Mallikarjun Kharge) ಬಲಿ ಕೊಡುವ ಪ್ರಯತ್ನ ಇದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಆರೋಪಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ, ಉತ್ತರಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲಿ ಜಗಳ ಆಡುತ್ತಿದ್ದಾರೆ. ಕೇರಳದಲ್ಲಿ ಕಮ್ಯುನಿಸ್ಟ್ ಸರ್ಕಾರ ಇದೆ. ಕಮ್ಯುನಿಸ್ಟ್ ಸರ್ಕಾರ ನಮ್ಮ ಮೇಲೆ ಅತ್ಯಾಚಾರ ಮಾಡ್ತಾ ಇದೆ. ನಮ್ಮ ಕಾರ್ಯಕರ್ತರನ್ನು ಹೊಡಿತಾ ಇದ್ದಾರೆ ಎಂದು ಘಟಬಂಧನದಲ್ಲಿದ್ದವರೇ ಹೇಳಿಕೆ ನೀಡುತ್ತಿದ್ದಾರೆ. ಅವರಲ್ಲೇ ಹೊಂದಾಣಿಕೆ ಇಲ್ಲ. ಕಾಂಗ್ರೆಸ್‍ನವರು (Congress) ಯಾವ ಸ್ಥಿತಿಗೆ ಬಂದಿದ್ದಾರೆ ಎಂದರೆ, ಯುಪಿಯಲ್ಲಿ ಎರಡೇ ಟಿಕೆಟ್ ಕೊಡಲಿ ಮೈತ್ರಿ ಮಾಡಿಕೊಳ್ಳುತ್ತೀವಿ ಎನ್ನುತ್ತಾರೆ ಎಂದು ಕಾಂಗ್ರೆಸ್ ಪ್ರಮುಖರೊಬ್ಬರು ಹೇಳಿದ್ದರು. ಕಾಂಗ್ರೆಸ್ ಸೋಲೋದಂತೂ ಗ್ಯಾರಂಟಿ, ಇದನ್ನೇ ನಟ ಜಗ್ಗೇಶ್ ಅವರ ಭಾಷೆಯಲ್ಲಿ ಹೇಳೋದಾದ್ರೆ ಢಮಾರ್ ಆಗೋದು ಗ್ಯಾರಂಟಿ, ಅದಕ್ಕೆ ಇವರನ್ನು ಬಲಿ ಕೊಡುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: 60 ವರ್ಷಗಳಿಂದ ಮಾಡಿದ ಅನ್ಯಾಯಕ್ಕೆ ಕಾಂಗ್ರೆಸ್ಸಿಗರು ಈಗ ನ್ಯಾಯ ಕೇಳಲು ಹೊರಟಿದ್ದಾರೆ: ಮುನಿಸ್ವಾಮಿ ವ್ಯಂಗ್ಯ
Advertisement
Advertisement
ಇದೇ ವೇಳೆ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ವಿಚಾರವಾಗಿ ಸರ್ಕಾರದ ತುಷ್ಟೀಕರಣ ರಾಜಕಾರಣ ಇದರಲ್ಲಿ ಸ್ಪಷ್ಟವಾಗಿ ಎದ್ದು ಕಾಣಿಸುತ್ತಿದೆ. ಸಿದ್ದರಾಮಯ್ಯ ಅವರು ನೈತಿಕ ಪೊಲೀಸ್‍ಗಿರಿ ಬಗ್ಗೆ ದೊಡ್ಡ ದೊಡ್ಡದಾಗಿ ಮಾತನಾಡಿದ್ದರು. ಆ ಹುಡುಗಿ ಮೇಲೆ ಅತ್ಯಾಚಾರ ನಡೆದಿದೆ. ಅದಕ್ಕೆ ಕಂಪ್ಲೇಂಟ್ ಕೊಟ್ಟಿದ್ದಾಳೆ. ಸರ್ಕಾರ, ಪೊಲೀಸ್ ಹಾಗೂ ಗೃಹ ಮಂತ್ರಿಗಳ ಧೋರಣೆ ಮಾತ್ರ ನೈತಿಕ ಪೊಲೀಸಗಿರಿ. ಇದನ್ನೆಲ್ಲಾ ನೋಡಿದ್ರೆ ಸರ್ಕಾರ ಯಾರನ್ನೋ ರಕ್ಷಿಸಲು ಹೊರಟಿದೆ ಎನ್ನುವುದು ಸ್ಪಷ್ಟವಾಗಿ ಕಾಣುತ್ತಿದೆ. ದಕ್ಷ ಅಧಿಕಾರಿಗಳನ್ನು ನೇಮಿಸಿ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇದೇ ಅನ್ಯಜಾತಿಯವರು ಮಾಡಿದ್ದರೆ, ದೊಡ್ಡದಾಗುತ್ತಿತ್ತು. ಆಕೆ ನಮ್ಮ ಸಮುದಾಯದವರೇ ಮಾಡಿದ್ದಾರೆ ಎಂದು ಸ್ಪಷ್ಟವಾಗಿ ಹೇಳಿದ್ದಾಳೆ ಎಂದಿದ್ದಾರೆ.
Advertisement
Advertisement
ಈ ಪ್ರಕರಣದಲ್ಲಿ ತುಷ್ಟೀಕರಣ ರಾಜಕಾರಣದ ವಾಸನೆ ಇದೆ. ಅಪರಾಧಿಗಳು ಯಾವುದೇ ಜಾತಿಗೆ ಸೇರಿರಲಿ ಸರ್ಕಾರ ತಮ್ಮ ನಿಯತ್ತನ್ನು ಇದರಲ್ಲಿ ತೋರಿಸಲಿ ಎಂದು ಅವರು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಅನಂತ್‍ಕುಮಾರ್ ಹೆಗಡೆ ಹೇಳಿಕೆ ವೈಯಕ್ತಿಕವಾಗಿ ಬೇಸರ ತಂದಿದೆ: ಸೋಮಣ್ಣ