ಚಿಕ್ಕಮಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹಾಗೂ ಮುರುಗನ್ (Murugan) ಸಾವಿರಾರು ಜನರ ಮಧ್ಯೆ ಜನಸಾಮಾನ್ಯರಂತೆಯೇ ಓಡಾಡಿಕೊಂಡು ಮಲೆನಾಡಿನ ತಿಂಡಿಗಳನ್ನು ಸವಿದಿದ್ದಾರೆ.
ಚಿಕ್ಕಮಗಳೂರು (Chikkamagaluru) ನಗರದಲ್ಲಿ ನಡೆಯುತ್ತಿರುವ ಚಿಕ್ಕಮಗಳೂರು ಹಬ್ಬಕ್ಕೆ (Chikkamagaluru Festival) ಆಗಮಿಸಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಮುರುಗನ್ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವೇದಿಕೆ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಕೋರ್ಟ್ ಮುಂಭಾಗದ ರಸ್ತೆಯಲ್ಲಿ ಸುಮಾರು 1 ಕಿ.ಮೀ ನಷ್ಟು ಉದ್ದವಿರುವ ಫುಡ್ ಕೋರ್ಟ್‌ನಲ್ಲಿ ಸಾವಿರಾರು ಜನರ ಮಧ್ಯೆ ಜನಸಾಮಾನ್ಯರಂತೆ ಓಡಾಡಿದ್ದಾರೆ.
Advertisement
Advertisement
ಹೀಗೆ ಓಡಾಡುತ್ತಾ ರಸ್ತೆ ಯುದ್ದಕ್ಕೂ ಇರುವ ಅಂಗಡಿಗಳಲ್ಲಿ ಪುಳಿಯೋಗೊರೆ, ಮದ್ದೂರು ವಡೆ, ಹೋಳಿಗೆ, ಬಜ್ಜಿ, ಪೊಂಗಲ್, ಶಾವಿಗೆ ಬಾತ್ ರುಚಿಯನ್ನು ಸವಿದಿದ್ದಾರೆ. ಬಳಿಕ ಕಾಫಿನಾಡ ಕಾಫಿಯ ರುಚಿಯನ್ನೂ ಸವಿದಿದ್ದಾರೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಮುರುಗನ್ ಜೊತೆ ಶಾಸಕ ಸಿಟಿ ರವಿಯೂ ಇದ್ದು, ರಸ್ತೆ ಮಧ್ಯೆ ನಿಂತು ತಿಂಡಿಗಳನ್ನು ಸವಿಯುವ ಮೂಲಕ ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಇಬ್ಬರು ಶಂಕಿತ ಉಗ್ರರು ಅರೆಸ್ಟ್ ಕೇಸ್ – ಎನ್‌ಐಎಯಿಂದ ಚಾರ್ಜ್‌ಶೀಟ್ ಸಲ್ಲಿಕೆ
Advertisement
Advertisement
ಸಚಿವರು ಹಾಗೂ ಶಾಸಕರು ಸವಿದ ತಿಂಡಿ ತಿನಿಸುಗಳಿಗೆ ಹಣ ನೀಡಲು ಮುಂದಾದರೂ ಸಹ ಅಂಗಡಿಯವರು ಹಣವನ್ನು ಪಡೆಯಲು ನಿರಾಕರಿಸಿದ್ದಾರೆ. ಆಗ ಕೇಂದ್ರ ಸಚಿವರು ಹಾಗೂ ಶಾಸಕರು ಹಣವನ್ನು ತೆಗೆದುಕೊಳ್ಳಲೇಬೇಕು ಎಂದು ಹೇಳಿ ಅಂಗಡಿ ಮಾಲೀಕರಿಗೆ ನೀಡಿದ್ದಾರೆ.
ಈ ವೇಳೆ ಜಿಲ್ಲಾಧಿಕಾರಿ ಕೆಎನ್ ರಮೇಶ್, ಜಿಲ್ಲಾ ಪಂಚಾಯಿತಿ ಸಿಇಒ ಪ್ರಭು, ನಗರ ಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ ಉಪಸ್ಥಿತರಿದ್ದರು. ಇದನ್ನೂ ಓದಿ: World Economic Forum – ಭಾರತದ ಆರ್ಥಿಕ ಪ್ರಗತಿಯನ್ನು ಕೊಂಡಾಡಿದ ಮಾರ್ಟಿನ್ ವುಲ್ಫ್
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k