ಧಾರವಾಡ: ಅಲ್ಪಸಂಖ್ಯಾತರ ಮತ ಪಡೆಯಲು ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಆರ್‌ಎಸ್‍ಎಸ್‍ನ್ನು ಟೀಕೆ ಮಾಡುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
Advertisement
ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಮುಸ್ಲಿಂ ವಿರೋಧಿಗಳು ಅಲ್ಲ, ಯಾವ ಸಮುದಾಯದ ವಿರೋಧವೂ ನಮಗಿಲ್ಲ. ಆದರೆ ಅವರು ಮುಗ್ದ ಮುಸ್ಲಿಂರ ವೋಟ್ ಪಡೆಯಲು ಆರ್‍ಎಸ್‍ಎಸ್ ಬಿಜೆಪಿ ಬೈಯುತ್ತಾರೆ ಎಂದರು. ಇದನ್ನೂ ಓದಿ: ಗೊಂಬೆಗಳ ಮಧ್ಯೆ ಪುಟ್ಟ ಗೊಂಬೆಯಂತೆ ಕುಳಿತ ರಾಯನ್
Advertisement
Advertisement
ಬಿಜೆಪಿ, ಆರ್‌ಎಸ್‍ಎಸ್‍ನ್ನು ಭೂತದಂತೆ ತೋರಿಸುತ್ತಿದ್ದಾರೆ. ಅದಕ್ಕಾಗಿಯೇ ಸಿದ್ದರಾಮಯ್ಯ, ಎಚ್‍ಡಿಕೆ ಸ್ಪರ್ಧಿಗೆ ಬಿದ್ದಿದ್ದಾರೆ. ಇನ್ನು ಬೇರೆ ವೋಟ್ ಬ್ಯಾಂಕ್ ಎಲ್ಲ ಅವರದು ಕಡಿಮೆ ಆಗುತ್ತಿದೆ ಹೀಗಾಗಿ ಆ ರೀತಿ ಮಾತನಾಡುತ್ತಾರೆ ಎಂದು ಜೋಶಿ ಹೇಳಿದರು. ಜನಸಂಖ್ಯೆ ನಿಯಂತ್ರಣ ಬಗ್ಗೆ ಆರ್‌ಎಸ್‍ಎಸ್ ಪ್ರಮುಖ ಮೋಹನ್ ಭಾಗವತ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಭಾಗವತ್ ಹೇಳಿರುವ ವಿಚಾರ ಸತ್ಯವಾಗಿದೆ. ಇದಕ್ಕೆ ಸಂಬಂಧಿಸಿದ ಎಲ್ಲ ಸರ್ಕಾರಗಳು ಗಂಭೀರ ಚಿಂತನೆ ಮಾಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಬಗ್ಗೆ ಚಿಂತನೆ ಮಾಡಬೇಕು ಎಂದಿದ್ದಾರೆ. ಇದನ್ನೂ ಓದಿ: ಭಯ ಹುಟ್ಟಿಸಲು ಉಗ್ರರು ಹತ್ಯೆಯನ್ನು ಗುರಿಯಾಗಿಸಿಕೊಂಡಿದ್ದಾರೆ: ಮೋಹನ್ ಭಾಗವತ್