ಧಾರವಾಡ: ಈಗಾಗಲೇ ಕಾಂಗ್ರೆಸ್‌ನ ಅನೇಕ ಹಿರಿಯರು ಪಕ್ಷ ಬಿಟ್ಟು ಹೋಗಿದ್ದಾರೆ. ಇದಕ್ಕೆ ಆ ಪಕ್ಷದಲ್ಲಿ ನಾಯಕತ್ವದ ದುರಂಹಕಾರ ಪರಮಾವಧಿಯಿಂದ ಆಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದರು.
ಕಾಂಗ್ರೆಸ್ ಮುಖಂಡ ಗುಲಾಬ್ ನಬಿ ಆಜಾದ್ ಪಕ್ಷಕ್ಕೆ ರಾಜೀನಾಮೆ ನೀಡಿದ ವಿಚಾರವಾಗಿ ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಆಯಾ ನಾಯಕತ್ವದ ಅವಧಿ ಮುಗಿದಾಗ ಬಿಟ್ಟು ಕೊಡಬೇಕು. ಆದರೆ ಕಾಂಗ್ರೆಸ್‌ನಲ್ಲಿ ಅದು ಆಗುತ್ತಿಲ್ಲ. ಆ ಕಾರಣದಿಂದಾಗಿ ಗುಲಾಂ ನಬಿ ಆಜಾದ ಪಕ್ಷ ಬಿಟ್ಟಿದ್ದಾರೆ ಎಂದರು.
Advertisement
Advertisement
ಚಿತ್ರದುರ್ಗ ಸ್ವಾಮೀಜಿ ಮೇಲಿನ ಕೇಸ್ ವಿಚಾರವಾಗಿ ಮಾತನಾಡಿ, ಅವರ ಮೇಲೆ ಕೇಸ್ ಆಗಿದೆ. ಅದರ ತನಿಖೆ ನಡೆಯುತ್ತಿದೆ. ಹೀಗಾಗಿ ಹೆಚ್ಚು ಮಾತನಾಡುವ ಅಗತ್ಯ ಇಲ್ಲ. ಅವರು ನಾಡಿನ ಒಬ್ಬ ಪ್ರತಿಷ್ಠಿತ ಸ್ವಾಮೀಜಿ, ಸೂಕ್ತವಾದ, ನ್ಯಾಯಯುತವಾದ ತನಿಖೆಯಾಗಲಿ, ಅಲ್ಲಿಯವರೆಗೆ ಎಲ್ಲದ್ದಕ್ಕೂ ಪ್ರತಿಕ್ರಿಯೆ ಕೊಡಬೇಕಿಲ್ಲ ಎಂದು ತಿಳಿಸಿದರು.
Advertisement
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಬದಲಾಗುತ್ತಾರೆ ಎಂದು ಮಾಧ್ಯಮಗಳು ಹೇಳುತ್ತಿವೆ. ಸಾಮಾನ್ಯವಾಗಿ 3 ವರ್ಷ ಅವಧಿ ನಮ್ಮಲ್ಲಿ ಇರುತ್ತದೆ. ಆದರೆ 3 ವರ್ಷದ ಬಳಿಕ ಬದಲಾವಣೆ ಮಾಡಲೇಬೇಕು ಅಂತಿಲ್ಲ. ನಮ್ಮಲ್ಲಿ ಆ ಯಾವುದೇ ಚರ್ಚೆ ಆಗಿಲ್ಲ ಎಂದು ಹೇಳಿದರು. ಇದನ್ನೂ ಓದಿ: 3,700 ಕೆ.ಜಿ ಸ್ಫೋಟಕ, 10 ಸೆಕೆಂಡ್- 1,200 ಕೋಟಿಯ ದೈತ್ಯ ಅವಳಿ ಕಟ್ಟಡ ಉಡೀಸ್
Advertisement
ಯಡಿಯೂರಪ್ಪ ದೆಹಲಿ ಭೇಟಿ ವಿಚಾರವಾಗಿ ಮಾತನಾಡಿ, ಯಡಿಯೂರಪ್ಪ ಈಗ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯರು, ಅವರು ಪಕ್ಷದ ಹಿರಿಯರಲ್ಲೊಬ್ಬರು, ಈ ಹಿನ್ನೆಲೆ ಪ್ರಮುಖ ನಾಯಕರ ಭೇಟಿಗೆ ಹೋಗಿದ್ದರು ಎಂದರು. ಇದನ್ನೂ ಓದಿ: ರಾಷ್ಟ್ರಕ್ಕಾಗಿ ಖಾದಿ, ಆದ್ರೆ ರಾಷ್ಟ್ರಧ್ವಜಕ್ಕೆ ಚೈನೀಸ್ ಪಾಲಿಸ್ಟರ್ : ಮೋದಿ ವಿರುದ್ಧ ರಾಹುಲ್ ಟೀಕೆ