ಹುಬ್ಬಳ್ಳಿ: ರಾಜಕೀಯದಲ್ಲಿ ಕಾಂಗ್ರೆಸ್ ಅಂದರೆ ಹೊಡೆದಾಟ, ಬಡಿದಾಟ, ಬಡವರಿಗೆ ದ್ರೋಹ ಅಂತ ಡಿಕ್ಷನರಿ ಅರ್ಥ ಬರೆಯಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಟೀಕಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನಾವಿಕನಿಲ್ಲದ ದೋಣಿಯಾಗಿದೆ. ಅವರಿಗೆ ರೌಡಿಶೀಟರ್ ಬಗ್ಗೆ ಮಾತನಾಡಲು ಯಾವುದೇ ನೈತಿಕತೆಯಿಲ್ಲ. ಕಾಂಗ್ರೆಸ್ ನಲ್ಲಿ ಡಿಕೆಶಿ ಮತ್ತು ಮೊಹಮ್ಮದ್ ನಲಪಾಡ್ ಕಥೆ ಎಲ್ಲರಿಗೂ ಗೊತ್ತಿದೆ. ನಡು ರಸ್ತೆಯಲ್ಲಿ ಮರ್ಡರ್ ಮಾಡಲು ಯತ್ನಿಸಿದ ನಲಪಾಡ್ ಅಧ್ಯಕ್ಷರಾದರು. ಆದರೆ ರಕ್ಷಿತ್ ರಾಮಯ್ಯನ ದೂರಯಿಟ್ಟಿರು ಎಂದು ವ್ಯಂಗ್ಯವಾಡಿದರು.
Advertisement
Advertisement
ಜನಾರ್ದನ ರೆಡ್ಡಿ ಪಕ್ಷಕ್ಕೆ ಬರುವ ವಿಚಾರವಾಗಿ ಯಾವುದೇ ಮಾಹಿತಿ ಇಲ್ಲ. ಅವರು ಪಕ್ಷಕ್ಕೆ ಕರೆತರೋದು ಬಿಡೋದು ನಮ್ಮ ಪಕ್ಷದ ನಾಯಕರು ನೋಡಿಕೊಳ್ಳುತ್ತಾರೆ. ಸದ್ಯ ನನ್ನ ಪ್ರಕಾರ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕಲಾವಿದರೊಂದಿಗೆ ಡೋಲು ಬಾರಿಸಿದ ಮೋದಿ
Advertisement
Advertisement
ಮೋದಿ ರಾಜ್ಯಕ್ಕೆ ಬರುವ ವಿಚಾರವಾಗಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಈಗಾಗಲೇ ನಮ್ಮ ಪಕ್ಷ ಭರ್ಜರಿ ತಯಾರಿ ನಡೆಸಿದೆ. ಪ್ರಧಾನ ಮೋದಿ ಸೇರಿದಂತೆ ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಇನ್ನೂ ಮುಂದೆ ರಾಜ್ಯಕ್ಕೆ ಬರಲಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ , ಜೆಪಿ ನಡ್ಡಾ, ಅಮಿತ್ ಶಾ, ರಾಜನಾಥ್ ಸಿಂಗ್ ಅವರ ಪ್ರವಾಸ ನಿಗದಿಯಾಗಿದೆ. ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಿಮಾಚಲಕ್ಕೆ ಸಿಎಂ ಆಗಿ ಸುಖ್ವಿಂದರ್ ಸಿಂಗ್ ಸುಖು ಪ್ರಮಾಣವಚನ ಸ್ವೀಕಾರ