ಧಾರವಾಡ: ನನ್ನನ್ನು ರಾಷ್ಟ್ರೀಯ ಅಧ್ಯಕ್ಷ ಎನ್ನುತ್ತಿದ್ದಾರೆ, ಪುಣ್ಯಕ್ಕೆ ರಾಷ್ಟ್ರಪತಿ ಎಂದಿಲ್ಲ. ನಾನು ಧಾರವಾಡ (Dharwad) ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲ ಇಲ್ಲ. ನಾನು ಈಗಾಗಲೇ ಚುನಾವಣೆಯ ತಯಾರಿ ಮಾಡಿಕೊಂಡಿದ್ದೇನೆ. ಲೋಕಸಭಾ ಚುನಾವಣೆಗೆ ಈ ಕ್ಷೇತ್ರದಿಂದ ಜೋಶಿನೆ ಅಭ್ಯರ್ಥಿಯಲ್ಲದೇ ಇನ್ನೇನೂ? ಎಂದಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸೀಟುಗಳು ಖಚಿತ: ಭೂಪೇಂದ್ರ ಯಾದವ್
Advertisement
ಕ್ಷೇತ್ರದಲ್ಲಿ ಶಾಸಕರು, ನಗರ ಘಟಕದ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಚುನಾವಣೆ ಸಿದ್ಧತೆಯಲ್ಲಿದ್ದಾರೆ. ಇದರ ನಡುವೆ ಕೆಲವರು ನನ್ನನ್ನು ರಾಷ್ಟ್ರೀಯ ಅಧ್ಯಕ್ಷ ಎನ್ನುತ್ತಿದ್ದಾರೆ. ಪುಣ್ಯಕ್ಕೆ ರಾಷ್ಟ್ರಪತಿ ಆಗುತ್ತಾರೆ ಎಂದಿಲ್ಲ. ಜೋಶಿ ರಾಷ್ಟ್ರಪತಿ ಆಗುತ್ತಾರೆ, ಶೆಟ್ಟರ್ (Jagadish Shettar) ಅಭ್ಯರ್ಥಿ ಆಗುತ್ತಾರೆ ಎಂದು ಹೇಳುತ್ತಿಲ್ಲ ಎಂದಿದ್ದಾರೆ.
Advertisement
Advertisement
ಶೆಟ್ಟರ್ ಆರು ತಿಂಗಳ ಹಿಂದೆಯೇ ವಾಪಾಸ್ ಬರುತ್ತಾರೆ ಎಂದಿದ್ದೆ. ಅವರು ಬಂದಿದ್ದಕ್ಕೆ ನನಗೆ ಸಂತೋಷವಿದೆ. ಇದನ್ನು ವ್ಯಂಗ್ಯವಾಗಿ ಹೇಳುತ್ತಿಲ್ಲ. ಈ ಭಾಗದಲ್ಲಿ ಎಲ್ಲರೂ ಒಂದುಗೂಡಿ ಪಕ್ಷ ಬಲವರ್ಧನೆ ಮಾಡುತ್ತೇವೆ ಎಂದಿದ್ದಾರೆ.
Advertisement
ರಾಜ್ಯದಲ್ಲಿ ಕಾಂಗ್ರೆಸ್, ಸರ್ಕಾರವನ್ನು ಐದು ವರ್ಷ ನಡೆಸಬೇಕು. ಆದರೆ ಅವರಲ್ಲಿನ ಆಂತರಿಕ ಕಚ್ಚಾಟದಿಂದ ಅದು ಸರ್ಕಾರವನ್ನು ಸರಿಯಾಗಿ ನಡೆಸುತ್ತಿಲ್ಲ. ಈ ಬಗ್ಗೆ ಜನರಿಗೂ ಆಕ್ರೋಶವಿದೆ. ಇದರಿಂದಾಗಿ ನಮಗೆ ಅವಕಾಶ ಇದೆ ಎಂದಿದ್ದಾರೆ. ಇದನ್ನೂ ಓದಿ: ಮೋದಿ ಮತ್ತೆ ಪ್ರಧಾನಿಯಾಗಬೇಕು ಅನ್ನೋದನ್ನ ಶಾಮನೂರು ಸೂಕ್ಷ್ಮವಾಗಿ ಹೇಳಿದ್ದಾರೆ: ಸಿ.ಟಿ ರವಿ