– ಹಿಮಾಚಲ ಪ್ರದೇಶದ ತರಹ ಕರ್ನಾಟಕ ಆಗುತ್ತೆ: ಎಚ್ಚರಿಕೆ
ಹುಬ್ಬಳ್ಳಿ: ಕೇಂದ್ರದಿಂದ ಅಕ್ಕಿ ಕೊಡುತ್ತೇವೆ ಅಂದರೂ ರಾಜ್ಯ ಸರ್ಕಾರ ತೆಗೆದುಕೊಳ್ಳುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವಾಗ ಅಕ್ಕಿ ಕೊಡ್ತೀನಿ ಅಂದರೂ ತಗೋತಿಲ್ಲ. ಮುನಿಯಪ್ಪ ಅವರು ಬಂದು ಅಕ್ಕಿ ಕೊಡ್ತೀರಾ ಅಂತಾ ಕೇಳಿದ್ರು. ನಾವು ಎಸ್ ಅಂದೀವಿ. ಆದ್ರೆ ಸಿದ್ದರಾಮಯ್ಯ ಅನುಮತಿ ಕೊಟ್ಟಿಲ್ಲ. ಯಾಕೆ ಕೊಟ್ಟಿಲ್ಲ ಅನ್ನೋದನ್ನ ಮುನಿಯಪ್ಪ ಹೇಳಬೇಕು? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: Tumkur | ಗೌರಿ-ಗಣೇಶ ಹಬ್ಬ ಮುಗಿಸಿಕೊಂಡು ಬರುತ್ತಿದ್ದ ವೇಳೆ ಕಾರು ಅಪಘಾತ – ಐವರು ದಾರುಣ ಸಾವು!
Advertisement
Advertisement
ಇದೇ ವೇಳೆ ಕಾಂಗ್ರೆಸ್‌ನಲ್ಲಿ ಸಿಎಂ ವಿಚಾರಕ್ಕೆ ಕೋಲಾಹಲ ವಿಚಾರ ಕುರಿತು ಮಾತನಾಡಿ, ಸಿಎಂ ವಿಚಾರವಾಗಿ ಮೊದಲು ದೇಶಪಾಂಡೆ ನಾನ ರೆಡಿ ಅಂದರು. ಆಮೇಲೆ ಪರಮೇಶ್ವರ, ಡಿಕೆ ಶಿವಕುಮಾರ್ ಅಂತೂ ಮೊದಲೇ ಕಾಯ್ತಿದ್ದಾರೆ. ಎಂ.ಬಿ ಪಾಟೀಲ್, ಸತೀಶ್ ಜಾರಕಿಹೊಳಿ ಇನ್ನಷ್ಟು ದಿನಕ್ಕೆ ಪೋಸ್ಟರ್ ಹಾಕ್ತಾರೆ. ಕಾಂಗ್ರೆಸ್‌ನವರು ಮೊದಲು ತಮ್ಮ ಮನೆ ಸರಿ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಸೋಮವಾರ ಬಂಧನ ಅವಧಿ ಮುಕ್ತಾಯ – ಜಾಮೀನು ಅರ್ಜಿ ಸಲ್ಲಿಸಲು ದರ್ಶನ್ ತಯಾರಿ!
Advertisement
Advertisement
ಅಭಿವೃದ್ಧಿ ಬಗ್ಗೆ ಮಾತಾಡಿ ಅಂತ ಕೇಳಿದ್ದಾರೆ. ನಾನು ಇವಾಗ ದುಡ್ಡು ಕೊಡ್ರಪ್ಪಾ ಅಂತಾ ಕೇಳಬೇಕು. ಬರ ಪರಿಹಾರದ ದುಡ್ಡು ಕೊಟ್ಟಿಲ್ಲ. ಅನೇಕ ಕಾಂಗ್ರೆಸ್ ಶಾಸಕರು, ಅಧಿಕಾರಿಗಳು ನಮಗೆ ದುಡ್ಡು ಕೊಡಿಸಿ ಅಂತಾ ಕೇಳ್ತಿದ್ದಾರೆ. ರಸ್ತೆ ಎಲ್ಲ ಹಾಳಾಗಿವೆ, ಹುಬ್ಬಳ್ಳಿಯಲ್ಲೂ ರಸ್ತೆ ಸರಿ ಇಲ್ಲ, ಪಾಲಿಕೆಗೆ ದುಡ್ಡು ಕೊಡುತ್ತಿಲ್ಲ. ರಾಜ್ಯದಲ್ಲಿ ಆರ್ಥಿಕ ಅಸಮತಲೋತನ ಉಂಟಾಗಿದೆ. ಪ್ಲ್ಯಾನ್ ಇಲ್ಲದೇ ಅಸಮತೋಲನ ಉಂಟಾಗಿದೆ. ಹಿಮಾಚಲ ಪ್ರದೇಶದ ತರಹ ಕರ್ನಾಟಕ ಆಗುತ್ತೆ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಕ್ರಿಶ್ಚಿಯನ್ ಧರ್ಮದ ಉನ್ನತೀಕರಣಕ್ಕೆ ಸರ್ಕಾರದಿಂದ ಅಗತ್ಯ ಸಹಕಾರ – 5 ಕೋಟಿ ಅನುದಾನ ಘೋಷಿಸಿದ ಸಿಎಂ
ಮಹದಾಯಿ ರಾಜಕೀಯ ಜೋರು:
ಶಿಗ್ಗಾಂವಿ ಉಪ ಚುನಾವಣೆ ಸನಿಹದಲ್ಲಿ ಮಹದಾಯಿ ರಾಜಕೀಯ ಜೋರಾಗಿದೆ. ಇದರ ಮಧ್ಯೆ, ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ರೈತ ಮುಖಂಡರು, ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ, ಜುಲೈನಲ್ಲಿ ಮೀಟಿಂಗ್ ಇತ್ತು. ರಾಜ್ಯ ಸರ್ಕಾರ ಇದನ್ನು ನಮ್ಮ ಗಮನಕ್ಕೆ ತಂದಿರಲಿಲ್ಲ ಎಂದು ಜೋಶಿ ದೂಷಿಸಿದ್ದಾರೆ. ಮಹದಾಯಿ ವಿಚಾರದಲ್ಲಿ ರಾಜ್ಯಸರ್ಕಾರ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದೆ. ನಾವು ರಾಜ್ಯದ ಹಿತ ಕಾಪಾಡುವ ಕೆಲಸ ಮಾಡ್ತೀವಿ ಎಂದು ಜೋಶಿ ಹೇಳ್ಕೊಂಡಿದ್ದಾರೆ. ಸಂಸದ ಬೊಮ್ಮಾಯಿ ಕೂಡ, ಮಹದಾಯಿ ವಿಚಾರದಲ್ಲಿ ರಾಜ್ಯಕ್ಕೆ ಕಾಂಗ್ರೆಸ್‌ನಿಂದಲೇ ಹಿನ್ನಡೆ ಆಗಿದೆ ಎಂದು ಕಿಡಿಕಾರಿದ್ದಾರೆ.