ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಂಗೀಕರಿಸಿದ ‘ದ್ವೇಷ ಭಾಷಣ ಮಸೂದೆ’ (Hate Speech Bill) ಸಾರ್ವಜನಿಕರ ಬಾಯಿ ಮುಚ್ಚಿಸುವ ಆದೇಶವಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಕಿಡಿ ಕಾರಿದ್ದಾರೆ.
ರಾಜ್ಯ ಸರ್ಕಾರ ಈ ಮಸೂದೆ ಮೂಲಕ ಸಂವಿಧಾನದ 19ನೇ ವಿಧಿಯ ವಾಕ್ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಿದೆ. ಈ ಸರ್ಕಾರದ ಇಂತಹ ನೀತಿಗಳಿಂದಾಗಿ ಪ್ರತಿಕೂಲ ಪರಿಸ್ಥಿತಿಗಳಲ್ಲಿ ಪ್ರಜಾಪ್ರಭುತ್ವ ಉಳಿಯಲು ಸಾಧ್ಯವಿಲ್ಲದಂತಾಗಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಸಂತ್ತಿನ ಮೇಲ್ಮನೆಯಲ್ಲಿ ಮಧ್ಯರಾತ್ರಿ ಜಿ ರಾಮ್ ಜಿ ಮಸೂದೆ ಅಂಗೀಕಾರ; ವಿಪಕ್ಷಗಳ ಸಭಾತ್ಯಾಗ
ಬ್ರಿಟಿಷರ ಕಾಲದ ವಸಾಹತು ಶಾಹಿಗಳ ಅಸ್ಪಷ್ಟ ವ್ಯಾಖ್ಯಾನಗಳು, ವ್ಯಾಪಕ ಅಧಿಕಾರದ ದಾಹ ಮತ್ತು ಕಠಿಣ ಕ್ರಿಮಿನಲ್ ಶಿಕ್ಷೆ ಮೂಲಕ ಜನಪರ ಹೋರಾಟವನ್ನು ಹತ್ತಿಕ್ಕಲು ನೋಡಿದೆ. ಈ ಸರ್ಕಾರ ದಬ್ಬಾಳಿಕೆಗಾಗಿ ಇಂತಹ ಕಾನೂನುಗಳನ್ನು ಬಳಸಿಕೊಳ್ಳಲು ನೋಡುತ್ತಿದೆ. ಸಂವಿಧಾನದ ನಿಬಂಧನೆಗಳನ್ನು ಕಿಂಚಿತ್ತೂ ಗೌರವಿಸದೇ ಆಡಳಿತ ನಡೆಸುತ್ತಿದೆ ಎಂದು ಸಚಿವ ಜೋಶಿ ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಜೈಲು ಸಿಬ್ಬಂದಿಯಿಂದ ದಿಢೀರ್ ದಾಳಿ – ಮೊಬೈಲ್, ಸಿಮ್, ಇಯರ್ ಫೋನ್ ಪತ್ತೆ


