ಬೆಂಗಳೂರು: ಭಾರತ್ ಜೋಡೋ ಯಾತ್ರೆಯಿಂದ (Bharat Jodo) ನಾವು ವಿಚಲಿತರಾಗಿದ್ದೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ವ್ಯಂಗ್ಯವಾಡಿದ್ದಾರೆ.
`ಜೋಡೋ ಯಾತ್ರೆಯಿಂದ ಬಿಜೆಪಿ (BJP) ಭಯ ಬಿದ್ದಿದೆ’ ಎಂಬ ಕಾಂಗ್ರೆಸ್ (Congress) ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೌದು. ನಾವು ವಿಚಲಿತರಾಗಿದ್ದಕ್ಕೇ ಗೋವಾದಲ್ಲಿ ಕಾಂಗ್ರೆಸ್ (Congress) ಪಕ್ಷ ಬಿಟ್ಟು ಹೋಗ್ತಿದ್ದಾರೆ. ಭಾರತ್ ಜೋಡೊ (Bharat Jodo) ಆಗ್ತಿದ್ದಂತೆ ರಾಜಸ್ಥಾನದಲ್ಲೂ ಪಕ್ಷ ಬಿಟ್ಟು ಹೋಗಲು ತಯಾರಾಗಿದ್ದಾರೆ. ಜೋಡೋ ಅಂತ ಹೆಸರು ಕೊಟ್ಟು ಕಾಂಗ್ರೆಸ್ ತೋಡೋ ಯಾತ್ರೆ ನಡೆಯುತ್ತಿದೆ. ಅದನ್ನು ಮುಚ್ಚಿಕೊಳ್ಳಲು ಹೀಗೆ ಮಾತಾಡ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು.
Advertisement
Advertisement
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮಾತನಾಡಿ, ಸಿಎಂ ಬೊಮ್ಮಾಯಿ (Basavaraj Bommai) ದೆಹಲಿಗೆ ಬರ್ತೀನಿ ಅಂತ ಹೇಳಿದ್ದಾರೆ. ದೀಪಾವಳಿ (Diwali) ಮುಗಿದ ಮೇಲೆ ಸಿಎಂ ದೆಹಲಿಗೆ ಬಂದಾಗ ನಾನು ಸಿಎಂ ಚರ್ಚೆ ಮಾಡ್ತೀವಿ. ನಂತರ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಜೊತೆ ಮಾತಾನಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಪರಸ್ಪರ ಕಿತ್ತಾಡಿ ಮಕ್ಕಳೊಂದಿಗೆ ಬಾವಿಗೆ ಜಿಗಿದ ಓರಗಿತ್ತಿಯರು – ಗರ್ಭಿಣಿ ಸಾವು
Advertisement
Advertisement
ಯುವ ಸಮೂಹಕ್ಕೆ ಉದ್ಯೋಗಾವಕಾಶ ಕಲ್ಪಿಸುವ ಸಂಬಂಧ ಮಾತನಾಡಿದ ಅವರು, ಪ್ರಧಾನಿ ಮೋದಿ (Narendra Modi) ಈಗಾಗಲೇ ಎಲ್ಲವನ್ನೂ ಮಾತಾಡಿದ್ದಾರೆ. ಕರ್ನಾಟಕದಲ್ಲಿ 1,000 ನೇಮಕಾತಿ ಆದೇಶ ನೀಡಿದ್ದೇವೆ. ಮುಂದಿನ 12 ತಿಂಗಳು ಈ ಕಾರ್ಯಕ್ರಮ ನಡೆಯುತ್ತೆ. 10 ಲಕ್ಷ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ನಟ ಚೇತನ್ ಒಬ್ಬ ನಾಲಾಯಕ್, ಮುಸ್ಲಿಂ ಏಜೆಂಟ್: ಯತ್ನಾಳ್
ಕೋವಿಡ್, ಉಕ್ರೇನ್ ಯುದ್ಧ ಸೇರಿದಂತೆ ಅನೇಕ ಸಮಸ್ಯೆಗಳ ಮಧ್ಯೆ ಕೆಲಸ ಮಾಡ್ತಿದ್ದೇವೆ. ಈ ನಡುವೆಯೂ ನಮ್ಮ ದೇಶದ ಅರ್ಥ ವ್ಯವಸ್ಥೆ ಉತ್ತಮವಾಗಿದೆ. ವಿದ್ಯುತ್ ಉತ್ಪಾದನೆಯಲ್ಲಿ ನಾವು ಸ್ವಾವಲಂಬಿಗಳಾಗಿದ್ದೇವೆ. ಕಳೆದ 8 ಮೋದಿ ಸರ್ಕಾರದಲ್ಲಿ ಉತ್ತಮ ಕೆಲಸ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.