ಉಡುಪಿ: ಶ್ರೀಕೃಷ್ಣ ಮಠವನ್ನು ಸರ್ಕಾರದ ಅಧೀನಕ್ಕೆ ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ಆಲೋಚಿಸಿತ್ತು. ಆದರೆ ಶ್ರೀ ಕೃಷ್ಣ ಮಠಕ್ಕೆ ತೊಂದರೆಯಾದರೆ ಮೊದಲು ನಾನೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಅಂತ ಹೇಳಿದ್ದೆ ಎಂದು ಕಾಂಗ್ರೆಸ್ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
Advertisement
ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಅದಮಾರು ಪರ್ಯಾಯ ಸಮಾಪನ ಪ್ರಯುಕ್ತ ನಡೆಯುತ್ತಿರುವ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ಮಾತನಾಡಿದರು. ಈ ಸ್ಫೋಟಕ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಮತ್ತು ನಾಯಕರಿಗೆ ಮತ್ತೊಮ್ಮೆ ಇರಿಸುಮುರಿಸು ಆಗಿದೆ. ಇದನ್ನೂ ಓದಿ: ಪಕ್ಷ ಬೇರೆಯಾದ್ರೂ ಗುಣಕ್ಕೆ ಮತ್ಸರವಿಲ್ಲ- ಮೋದಿಯನ್ನು ಹೊಗಳಿದ ಪ್ರಮೋದ್ ಮಧ್ವರಾಜ್
Advertisement
Advertisement
ಮಧ್ವಾಚಾರ್ಯರು ಪ್ರತಿಷ್ಠಾಪಿಸಿದ ಮಠಕ್ಕೆ ಎಂಟುನೂರು ವರ್ಷಗಳ ಇತಿಹಾಸ ಇದೆ. ದೇಶವಿದೇಶಗಳಲ್ಲಿ ಭಕ್ತರನ್ನು ಹೊಂದಿರುವ ಮಠ, ಉಡುಪಿ ಜನರಿಗೊಂದು ಭಾಗ್ಯ. ನಮ್ಮದೇ ಸರ್ಕಾರ ಇದನ್ನು ವಶಪಡಿಸಲು ಮುಂದಾಗಿತ್ತು. ಆಗ ನಾನು ಮಠವನ್ನು ಮುಟ್ಟಿದರೆ ರಾಜೀನಾಮೆ ನೀಡುತ್ತೇನೆ ಎಂದು ಸಿದ್ದರಾಮಯ್ಯನವರಿಗೆ ಹೇಳಿ ಈ ವಿಚಾರಕ್ಕೆ ಫುಲ್ ಸ್ಟಾಪ್ ಹಾಕುವ ಮೂಲಕ ಶಾಸಕನಾಗಿ ಸಣ್ಣ ಸೇವೆ ಮಾಡಿದ್ದೇನೆ ಎಂಬ ತೃಪ್ತಿ ಇದೆ ಎಂದು ಹೇಳಿ ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಬೂಸ್ಟರ್ ಡೋಸ್ ಅಗತ್ಯತೆ ಬಗ್ಗೆ ಅಧ್ಯಯನ ನಡೆಸಲು ಮೋದಿ ಸೂಚನೆ
Advertisement
ಈ ವಿಷಯ ನನ್ನ ಒಳಗೇ ಇತ್ತು. ಇದನ್ನು ಹೇಳುವುದಿಲ್ಲ ಎಂದುಕೊಂಡಿದ್ದೆ. ಆದರೆ ಇವತ್ತು ಹೇಳಬೇಕಾಯಿತು ಎಂದು ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಜೊತೆ ಅಂತರ ಕಾಯ್ದುಕೊಂಡಿರುವ ಪ್ರಮೋದ್ ಮಧ್ವರಾಜ್, ಪದ್ಮ ಪ್ರಶಸ್ತಿ ನೀಡುವ ಸಂದರ್ಭ ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ್ದರು. ಆಗಲೂ ರಾಜಕೀಯ ವಲಯದಲ್ಲಿ ಚರ್ಚೆಗೆ ಈಡಾಗಿದ್ದರು. ಈಗ ಮತ್ತೆ ತಮ್ಮ ಕಾಂಗ್ರೆಸ್ ಸರ್ಕಾರದ ನಡೆಯನ್ನು ಕೆದಕುವ ಮೂಲಕ ಸುದ್ದಿಯಾಗಿದ್ದಾರೆ. ಇದನ್ನೂ ಓದಿ: ಟೋಕನೈಸೇಶನ್ ಜಾರಿ 6 ತಿಂಗಳು ವಿಳಂಬ: RBI