ಹಾವೇರಿ: ಶಿಗ್ಗಾಂವಿ ಪಟ್ಟಣದ ಆಂಜನೇಯ ದೇವಸ್ಥಾನದ ಆವರಣದಲ್ಲಿ ಮುಸ್ಲಿಂ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಖಂಡಿಸಿ ಈದ್ ಮಿಲಾದ್ ದಿನ (Haveri) ಬಂದ್‌ಗೆ ಕರೆ ನೀಡಲಾಗಿತ್ತು. ಈ ಬಂದ್‌ಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಬೆಂಬಲ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರಮೋದ್ ಮುತಾಲಿಕ್ ಅವರು ಇಂದಿನಿಂದ ಎರಡು ತಿಂಗಳ ಕಾಲ ಹಾವೇರಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಇನ್ನು ಶಿಗ್ಗಾಂವಿ ಬಂದ್ ವಿಚಾರವಾಗಿ ವಿಘ್ನೇಶ್ವರ ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರ ಸಂಘದ ಸದಸ್ಯರು ಸ್ಪಷ್ಟನೆ ನೀಡಿದ್ದಾರೆ. ತಮ್ಮ ಸಂಘದಿಂದ ಯಾವುದೇ ಬಂದ್‌ಗೆ ಕರೆ ನೀಡಿಲ್ಲ. ಯಾರಾದರೂ ಬಂದ್ ನಡೆಸಿದ್ದರೆ ಅದಕ್ಕೂ ತಮ್ಮ ಸಂಘಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ಅಸಮಾಧಾನ; ಸಿಎಂಗೆ ಪತ್ರ
ಈ ಬಗ್ಗೆ ಪೊಲೀಸ್ ಇಲಾಖೆ ಮನವಿ ಮಾಡಿದೆ ಎಂದು ಸಂಘದ ಸದಸ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಯಾದಗಿರಿ | ಭೀಮಾ ನದಿಯಲ್ಲಿ ಸ್ನಾನ ಮಾಡಲು ಹೋದ ಯುವಕ ನಾಪತ್ತೆ
