ಹಾಸನ: ಆಜಾನ್ ವಿಷಯದಲ್ಲಿ ಸರ್ಕಾರ ದೃಢ ನಿಲುವಿನೊಂದಿಗೆ ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ ಜೂನ್ 1ರಿಂದ ಎರಡನೇ ಸುತ್ತಿನ ಹೋರಾಟವನ್ನು ಶ್ರೀರಾಮ ಸೇನೆ ವತಿಯಿಂದ ಹಮ್ಮಿಕೊಳ್ಳಲಾಗುವುದು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದರು.
ಹಾಸನದಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಮಸೀದಿಗಳಲ್ಲಿ ಆಜಾನ್ ನಿಲ್ಲಿಸಬೇಕಾಗಿದೆ ಹಾಗೂ ನಿರ್ದಿಷ್ಟ ಪ್ರಮಾಣದ ಧ್ವನಿಯೊಂದಿಗೆ ಆಜಾನ್ ಮಾಡುವುದಕ್ಕೆ ಸೂಚನೆ ನೀಡಲಾಗಿದ್ದರೂ ಸಹ ಬಹುತೇಕ ಮಸೀದಿಗಳಲ್ಲಿ ಇದು ಪಾಲನೆ ಆಗುತ್ತಿಲ್ಲ. ಮುಖ್ಯಮಂತ್ರಿ ಹಾಗೂ ಗೃಹಮಂತ್ರಿ ಸಹ ಈ ಬಗ್ಗೆ ದೃಢ ನಿಲುವನ್ನು ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ. ಮುಂದಿನ ದಿನಗಳಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಂಡು ಆಜಾನ್ ನಿಲ್ಲಿಸದಿದ್ದರೆ ಜೂನ್ 1ರಿಂದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
Advertisement
Advertisement
ಪಠ್ಯದಲ್ಲಿ ಹೆಡ್ಗೆವಾರ್ ವಿಷಯ ಸೂಕ್ತ: ಪಠ್ಯ-ಪುಸ್ತಕಗಳಲ್ಲಿ ಆರ್‌ಎಸ್‍ಎಸ್ ಸಂಸ್ಥಾಪಕರಾದ ಹೆಡ್ಗೆವಾರ್ ಅವರ ವಿಷಯಗಳನ್ನು ಅಳವಡಿಸುವುದು ಸೂಕ್ತವಾಗಿದೆ. ಅವರು ಎಂದೂ ಸಹ ದೇಶವಿರೋಧಿ ಕೆಲಸ ಮಾಡಿಲ್ಲ. ಅಂಥವರ ಬಗ್ಗೆ ಪಠ್ಯ-ಪುಸ್ತಕದಲ್ಲಿ ಪ್ರಕಟಿಸುವುದಕ್ಕೆ ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳು ಯಾಕೆ ಮೀನಮೇಷ ಎಣಿಸುತ್ತಿದ್ದಾರೆ ತಿಳಿಯುತ್ತಿಲ್ಲ. ಯಾವುದೇ ಕಾರಣಕ್ಕೂ ಹೆಡ್ಗೆವಾರ್ ಅವರ ವಿಷಯಗಳನ್ನು ಪಠ್ಯ-ಪುಸ್ತಕದಲ್ಲಿ ಅಳವಡಿಸುವುದರಿಂದ ಹಿಂಜರಿಯಬಾರದು ಎಂದು ಒತ್ತಾಯಿಸಿದರು.
Advertisement
Advertisement
ಆರ್‌ಎಸ್‍ಎಸ್ ರಾಜಕೀಯೇತರ ದೇಶದ ನಂಬರ್ 1 ಸಂಘವಾಗಿದೆ. ಇದು ಭಯೋತ್ಪಾದಕರ ಸಂಘಟನೆಯಲ್ಲ. ದೇಶಭಕ್ತಿಯ ಸಂಘಟನೆಯಾಗಿದ್ದು, ಅದರ ಸಂಸ್ಥಾಪಕರಾದ ಹೆಡ್ಗೆವಾರ್ ಅವರ ವಿಷಯವನ್ನು ಪಠ್ಯದಲ್ಲಿ ಅಳವಡಿಸುವುದು ಸೂಕ್ತವಾಗಿದೆ. ಇದನ್ನೂ ಓದಿ: 12 ಜ್ಯೋತಿರ್ಲಿಂಗಗಳಲ್ಲಿ ಜ್ಞಾನವಾಪಿಯಲ್ಲಿ ಸಿಕ್ಕ ಶಿವಲಿಂಗವೂ ಒಂದು: ವಿಹೆಚ್‌ಪಿ
ಹಲವು ದಶಕ ದೇಶವನ್ನಾಳಿದ ಕಾಂಗ್ರೆಸ್ ಸರ್ಕಾರದಲ್ಲಿ ಆಡಳಿತ ನಡೆಸಿದ ಐದು ಮಂದಿ ಮುಸ್ಲಿಂ ಕೇಂದ್ರ ಶಿಕ್ಷಣ ಸಚಿವರು, ಕೇವಲ ಔರಂಗಜೇಬ್, ಟಿಪ್ಪು, ಬಾಬರ್‌ರಂತಹ ದೇಶವಿರೋಧಿ ವ್ಯಕ್ತಿಗಳ ವಿಷಯಗಳನ್ನು ಪಠ್ಯದಲ್ಲಿ ಅಳವಡಿಸುವ ಮೂಲಕ ಹಿಂದೂ ರಾಷ್ಟ್ರಕ್ಕೆ ತಪ್ಪು ಸಂದೇಶವನ್ನು ಸಾರುವಂತೆ ಮಾಡಿದರು. ಇದೀಗ ದೇಶಭಕ್ತರ ವಿಷಯಗಳನ್ನು ಪಠ್ಯದಲ್ಲಿ ಅಳವಡಿಸುವುದಕ್ಕೆ ವಿರೋಧ ವ್ಯಕ್ತಪಡಿಸುವುದು ಏಕೆ ಎಂದು ಪ್ರಶ್ನಿಸಿದರು.
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ತಲೆಯೆತ್ತಿರುವ ಅನಧಿಕೃತ ಚರ್ಚ್‍ಗಳನ್ನು ನೆಲಸಮಮಾಡಬೇಕು ಎಂಬುದಾಗಿ ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ಮನವಿ ಸಲ್ಲಿಸಿ ಈ ಬಗ್ಗೆ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಬೆಣ್ಣೆ ಹಳ್ಳದಲ್ಲಿ ಪ್ರವಾಹ – ನಾಲ್ವರು ಕಾರ್ಮಿಕರನ್ನ ರಕ್ಷಿಸಿದ ಅಗ್ನಿಶಾಮಕ ದಳ