ಧಾರವಾಡ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಹೇಳಿಕೆಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿರುಗೇಟು ನೀಡಿದರು.
ಧಾರವಾಡದಲ್ಲಿ ಮಾತನಾಡಿದ ಅವರು, ಈದ್ಗಾ ಮೈದಾನ ನಿಮ್ಮ ಆಸ್ತಿನೂ ಅಲ್ಲ, ನಿಮ್ಮ ಪಿತ್ರಾರ್ಜಿತ ಆಸ್ತಿನೂ ಅಲ್ಲ, ವಕ್ಫ್ ಬೋರ್ಡ್‍ಗೆ ಸೇರಿದ್ದೂ ಅಲ್ಲ, ಮುಸ್ಲಿಂ, ಹಿಂದೂಗಳಿಗೆ ಸೇರಿದ್ದೂ ಅಲ್ಲ. ಅದು ಸರ್ಕಾರದ ಜಾಗ, ಸರ್ಕಾರಿ ಜಾಗದಲ್ಲಿ ನೀವು ನಮಾಜ್ ಮಾಡುತ್ತಾ ಬಂದಿದ್ದೀರಿ. ವಿಧಿ ವಿಧಾನದ ಮೂಲಕ ವರ್ಷಕ್ಕೆ 2 ಬಾರಿ ನಮಾಜ್ ಮಾಡುತ್ತಾ ಬಂದಿದ್ದೀರಿ, ಹಾಗಾದರೆ ಗಣೇಶೋತ್ಸವಕ್ಕೆ ನಿಮ್ಮ ವಿರೋಧ ಯಾಕೆ ಎಂದು ಪ್ರಶ್ನಿಸಿದರು.
Advertisement
Advertisement
ಶಾಸಕ ಜಮೀರ್ ಅಹ್ಮದ್ ಅವರನ್ನು ತರಾಟೆಗೆ ತೆಗೆದುಕೊಂಡ ಅವರು, ನೀವು ಕೇವಲ ಮುಸ್ಲಿಂ ವೋಟಿನ ಮೇಲೆ ಗೆದ್ದಿಲ್ಲ, ನೀವು ಮುಸ್ಲಿಂರಿಂದ ಮಾತ್ರ ಗೆದ್ದಿಲ್ಲ, ನೀವು ಮುಸ್ಲಿಂ ಶಾಸಕರಲ್ಲ, ನೀವು ಚಾಮರಾಜಪೇಟೆ ಶಾಸಕ, ನಿಮಗೆ ಹಿಂದೂಗಳೂ ವೋಟು ಹಾಕಿದ್ದಾರೆ ನೆನೆಪಿಟ್ಟುಕೊಳ್ಳಿ ಎಂದ ಅವರು, ಇನ್ನೊಮ್ಮೆ ನಿಮ್ಮಿಂದ ಇಂತಹ ಹೇಳಿಕೆ ಬರಬಾರದು. ಈಗ ಹೇಳಿರುವ ಹೇಳಿಕೆಯನ್ನು ನೀವು ವಾಪಸ್ ಪಡೆಯಬೇಕು, ಹಿಂದೂಗಳಿಗೆ ಕ್ಷಮೆ ಕೇಳಬೇಕು ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಎಲೆಕ್ಟ್ರಿಕ್ ರಿಕ್ಷಾ ಚಾರ್ಜಿಂಗ್ ವೇಳೆ ವಿದ್ಯುತ್ ಶಾಕ್ – ವ್ಯಕ್ತಿ ಸಾವು
Advertisement
Advertisement
ಅದೇ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಮಾಡುತ್ತೇವೆ. ತಾಕತ್ತಿದ್ದರೆ ಅದನ್ನು ವಿರೋಧಿಸಿ. ನಿಮ್ಮ ಈ ಹೇಳಿಕೆಯಿಂದ ಅಶಾಂತಿ ಮತ್ತು ಗಲಭೆ ಸೃಷ್ಟಿ ಮಾಡುತ್ತಿದ್ದೀರಿ. ಮುಂಬರುವ ಚುನಾವಣೆಯಲ್ಲಿ ಜಮೀರ್‍ನನ್ನು ಹಿಂದೂಗಳು ಸೋಲಿಸಬೇಕು ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ ಅವಧಿಯಲ್ಲಿ ದೇಶ ಸೋತಿತ್ತು – ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಗೆದ್ದಿದೆ: ಸುನಿಲ್ ಕುಮಾರ್