ಹುಬ್ಬಳ್ಳಿ: ಮಾಜಿ ಸಿಎಂ ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶ ಮಾಡಿರುವುದು ತಪ್ಪಲ್ಲ, ಬಿಜೆಪಿಯವರು ಇಂತಹ ವಿಷಯ ಬಿಟ್ಟು ಸಾವರ್ಕರ್ ವಿಷಯದ ಬಗ್ಗೆ ಚರ್ಚೆ ಮಾಡಲಿ ಅಂತ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಂಸಾಹಾರ ಸೇವನೆ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ. ಹಿಂದೂಗಳಲ್ಲಿಯೂ ಸಾಕಷ್ಟು ಜನರು ಮಾಂಸಾಹಾರಿಗಳಿದ್ದಾರೆ. ಹಿಂದೂ ದೇವರಿಗೂ ಮಾಂಸಾಹಾರ ಪ್ರಸಾದ ಮಾಡ್ತಾರೆ ಅದರಲ್ಲೇನೂ ತಪ್ಪಿದೆ ಎಂದು ಪ್ರಶ್ನಿಸಿದರು.
Advertisement
Advertisement
ಸಿದ್ದರಾಮಯ್ಯ ಮಾಂಸಹಾರ ಸೇವನೇ ಮಾಡಿ ದೇವಸ್ಥಾನ ಪ್ರವೇಶಿಸಿರುವುದು ಚರ್ಚೆಯ ವಿಷಯವೇ ಅಲ್ಲ, ಆದರೆ ಬಿಜೆಪಿಯವರಿಗೆ ಚರ್ಚೆಗೆ ಬೇರೆ ವಿಷಯವೇ ಇಲ್ಲ. ಅದಕ್ಕೆ ಇಂತಹದ್ದೆಲ್ಲವನ್ನು ಮಾತನಾಡುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶ ಮಾಡಿರುವುದು ತಪ್ಪಲ್ಲ. ಬಿಜೆಪಿಯವರು ಇಂತಹ ವಿಷಯ ಬಿಟ್ಟು ಸಾವರ್ಕರ್ ವಿಷಯದ ಬಗ್ಗೆ ಚರ್ಚೆ ಮಾಡಲಿ ಎಂದು ತಿಳಿಸಿದರು.
Advertisement
Advertisement
ಈದ್ಗಾ ಮೈದಾನವೇನೂ ನಿಮ್ಮಪ್ಪನ ಸ್ವತ್ತಲ್ಲ, ಈದ್ಗಾ ಮೈದಾನ ಸಾರ್ವಜನಿಕ ಸ್ವತ್ತು. ಅಲ್ಲಿ ಬೇರೆಯವರಿಗೆ ಪ್ರಾರ್ಥನೆಗೆ ಅವಕಾಶ ನೀಡ್ತಾರೆ. ಆದರೆ ಗಣೆಶೋತ್ಸವ ಆಚರಣೆಗೆ ಯಾಕೆ ಅವಕಾಶ ನೀಡುತ್ತಿಲ್ಲ. ಅನುಮತಿ ಕೊಟ್ಟರೂ ಸರಿ ಕೊಡದಿದ್ದರೂ ಸರಿ ಗಣೆಶೋತ್ಸವ ಆಚರಣೆ ಮಾಡೇ ಮಾಡುತ್ತೇವೆ. ಪಾಲಿಕೆಗೆ ಇದು ಕೊನೆಯ ಗಡವು. ಈ ಗಡುವು ಮೀರಿದ್ರೆ ನಾವು ಗಣೇಶ ಆಚರಣೆ ಮಾಡೇ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಕೊರೊನಾ ವೇಳೆ ಜನರಿಂದ ಸುಲಿಗೆ – 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್
ಸಾವಿರಾರು ಕಾರ್ಯಕರ್ತರ ನೇತೃತ್ವದಲ್ಲಿ ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುತ್ತೇವೆ. ತಾಕತ್ ಇದ್ರೆ ಅದೇನ್ ಮಾಡ್ಕೋತಿರೋ ನಾವು ನೋಡ್ತೀವಿ ಎಂದು ಪಾಲಿಕೆ ಅಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯನವರ ಜನಪ್ರಿಯತೆ ನೋಡಿ ಉರಿ ಶುರುವಾಗಿದೆ: ಡಾ. ಎಚ್.ಸಿ. ಮಹದೇವಪ್ಪ