ಧಾರವಾಡ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪೇಟಾ ಹಾಗೂ ಹಿಜಬ್‍ಗೆ ಹೊಸಲಿಸುವಂತದ್ದು ಸರಿಯಲ್ಲ, ಮಾತನಾಡುವಾಗ ಕಾಮನಸೆನ್ಸ್ ಬೇಕು. ಸಂತರ ಪರಂಪರೆ ಪ್ರಶ್ನೆ ಮಾಡಿದ ಸಿದ್ದರಾಮಯ್ಯ ಕ್ಷಮೆ ಕೇಳಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ಮಾಡಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಕ್ಷಮೆ ಕೇಳುವಂತೆ ಆಗ್ರಹಿಸಿದರು. ಹಿಜಬ್ ಬಗ್ಗೆ ನ್ಯಾಯಾಲಯದ ತೀರ್ಪು ಬಂದಿದೆ. ಅದರ ಬಗ್ಗೆ ಮಾತನಾಡುವಾಗ ವಿಚಾರ ಮಾಡಬೇಕು. ಇದು ಅವಮಾನಕರ ಹೇಳಿಕೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
Advertisement
Advertisement
ಸಂತರ ಪರಂಪರೆ ಪ್ರಶ್ನೆ ಮಾಡಿದ್ದು ಅಪರಾಧ. ಇದು ಕೀಳು ಮಟ್ಟದ ಹೇಳಿಕೆಯಾಗಿದೆ. ಸಿಎಂ ಆದವರು ನೀವು, ಜವಾಬ್ದಾರಿ ಸ್ಥಾನದಲ್ಲಿ ಇದ್ದವರು. ಇದು ಹಿಂದೂ ಸಮಾಜ ಅಪಮಾನ ಮಾಡುವಂತದ್ದು. ಸಿದ್ಧರಾಮಯ್ಯನವರು ಕ್ಷಮೆ ಕೇಳಬೇಕು, ವಕೀಲರೂ ಆದವರು, ಕೋರ್ಟ್ ಹಿಜಬ್ ಬ್ಯಾನ್ ಮಾಡಿಲ್ಲ. ಕ್ಲಾಸ್ ರೂಮ್‍ನಲ್ಲಿ ಹಾಕಿಕೊಳ್ಳಲು ಅವಕಾಶ ನೀಡಿಲ್ಲ. ಸಿದ್ದರಾಮಯ್ಯ ರಾಜಕೀಯ ಅಂತ್ಯ ಬಂದಿದೆ, ಹಿಂದೂ ಸಮಾಜ ನಿಮ್ಮನ್ನು ಮೂಲೆಗುಂಪು ಮಾಡುತ್ತೆ ಎಂದು ಕಿಡಿಕಾರಿದರು. ಇದನ್ನೂ ಓದಿ: ನನಗೆ ವಯಸ್ಸಾಯ್ತು ಅಂತ ಕಾಲೆಳೆಯುತ್ತಾರೆ ಅದಕ್ಕೆ ವಾರಕ್ಕೊಮ್ಮೆ ಶೇವ್ ಮಾಡಿಸ್ತೀನಿ: ಸಿದ್ದರಾಮಯ್ಯ
Advertisement
ನಿಮಗೆ ಹಿಂದೂಗಳು ಮತ ಹಾಕುವುದಿಲ್ಲ, ಮುಸ್ಲಿಂ ರೇ ಕೋರ್ಟಗೆ ಹೋಗಿದ್ದು, ಅವರಿಗೆ ನ್ಯಾಯಾಲಯ ಸ್ಪಷ್ಟನೆ ಕೊಟ್ಟಿದೆ. ಮಠದ ಪರಂಪರೆಗೆ ಅವಮಾನ ಮಾಡಿದ್ದು ಸರಿಯಲ್ಲ ಎಂದು ಮುತಾಲಿಕ್ ಹೇಳಿದರು. ಇದನ್ನೂ ಓದಿ: ಗ್ರಾಮದ ಜಾತ್ರೆಯಲ್ಲಿ ನೃತ್ಯ ಮಾಡಿ ರಂಜಿಸಿದ ಸಿದ್ದರಾಮಯ್ಯ
Advertisement
ಸಿದ್ದರಾಮಯ್ಯ ಹೇಳಿದ್ದೇನು?: ಹಿಜಬ್ ವಿವಾದಕ್ಕೆ ಬಿಜೆಪಿಯೇ ಕಾರಣ. ಹಿಂದೂ ಹೆಣ್ಣು ಮಕ್ಕಳು ತಲೆಯ ಮೇಲೆ ಬಟ್ಟೆ ಹಾಕಿ ಕೊಳ್ಳಲ್ವಾ? ಹಾಗೆಯೇ ಮುಸ್ಲಿಂ ಹೆಣ್ಣು ಮಕ್ಕಳೂ ಒಂದು ದುಪ್ಪಟ್ಟ ಹಾಕಿ ಕೊಳ್ಳುತ್ತಾರೆ ಅಂದರೆ ಅದರಲ್ಲಿ ತಪ್ಪೇನಿದೆ?. ಸ್ವಾಮೀಜಿಗಳೂ ತಲೆಯ ಮೇಲೆ ಬಟ್ಟೆ ಹಾಕುತ್ತಾರೆ ಅದನ್ನು ನೀವು ಪ್ರಶ್ನೆ ಮಾಡುತ್ತೀರಾ? ಇಂತಹ ವಿವಾದಗಳನ್ನು ಸೃಷ್ಟಿಸಿ ಅದನ್ನು ಅರಗಿಸಿ ಕೊಳ್ಳುತ್ತೇವೆ ಎಂದು ಬಿಜೆಪಿ ಅಂದುಕೊಂಡಿದೆ. ಆದರೆ, ಜನ ಬುದ್ದಿವಂತರು. ಜನರಿಗೆ ಬಿಜೆಪಿಯ ತಂತ್ರ ಅರ್ಥವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸ್ವಾಮೀಜಿಯವರೂ ತಲೆಯ ಮೇಲೆ ಬಟ್ಟೆ ಹಾಕ್ತಾರೆ ಅದನ್ನೇಕೆ ಪ್ರಶ್ನಿಸುತ್ತೀರಾ?: ಹಿಜಬ್ ಬೆಂಬಲಿಸಿದ ಸಿದ್ದು
ಸಂಘ ಪರಿವಾರದವರು ಅಲ್ಪ ಸಂಖ್ಯಾತರನ್ನು ಕೊಲೆ ಮಾಡಿದರೆ ಅವರಿಗೆ ಕಡಿಮೆ ಪರಿಹಾರ ಹಣ ಕೊಡ್ತಾರೆ. ಅದೇ ಮುಸ್ಲಿಮರು ಹಿಂದೂಗಳನ್ನು ಕೊಲೆ ಮಾಡಿದರೆ ಜಾಸ್ತಿ ಪರಿಹಾರ ಕೊಡ್ತಾರೆ. ಇಂತಹ ತಾರತಮ್ಯ ಏಕೆ? ಇಂತಹ ವರ್ತನೆಯಿಂದ ಮತ ಕ್ರೂಢೀಕರಣ ಆಗುತ್ತದೆ ಎಂಬ ಬಿಜೆಪಿ ಲೆಕ್ಕಾಚಾರ ಉಲ್ಟಾ ಆಗುತ್ತೆ ನೋಡಿ ಎಂದು ಹೇಳಿದ್ದಾರೆ.