ಧಾರವಾಡ: ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆ ಹೊರತು, ಅದು ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ತಿಳಿಸಿದ್ದಾರೆ.
ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುತಾಲಿಕ್, ಸನಾತನ ಧರ್ಮ (Sanatan Dharma) ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂಬ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ (Udhayanidhi Stalin) ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.
Advertisement
Advertisement
ಉದಯನಿಧಿ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಸನಾತನ ಧರ್ಮವನ್ನ ಡೆಂಗ್ಯೂ, ಮಲೇರಿಯಾದಂತೆ ನಾಶ ಮಾಡಬೇಕು ಎಂದು ಹೇಳುವುದು ಜಾತಿಗಳ ಮಧ್ಯೆ ವೈಷಮ್ಯ ಮೂಡಿಸುತ್ತದೆ. ಇದನ್ನು ನಾವು ಖಂಡಿಸುತ್ತೇವೆ. ಉದಯನಿಧಿ ಇನ್ನೂ ಬಚ್ಚ, ಇನ್ನೂ ಕಣ್ಣೇ ಬಿಟ್ಟಿಲ್ಲ, ಆದ್ರೆ ಅತ್ಯಂತ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
Advertisement
ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆಯೇ ಹೊರತು, ಅದು ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ. ಸನಾತನ ಧರ್ಮ ಗಂಧದ ಮರ ಇದ್ದಂತೆ. ಅದನ್ನು ನಾಶ ಮಾಡಲು ಹೋದಷ್ಟೂ ಸುಗಂಧ ಹರಡುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್ ವಿರುದ್ಧ ಆಕ್ರೋಶ; ಆನ್‌ಲೈನ್ ಮೂಲಕ ದೂರು ದಾಖಲಿಸಲು ಮುಂದಾದ ಹಿಂದೂ ಸಂಘಟನೆಗಳು
Advertisement
ಪೆರಿಯಾರ್‌ನಿಂದ ಹಿಡಿದು ಇಲ್ಲಿಯವರೆಗೂ ನಾಸ್ತಿಕವಾದ ಮಾಡುತ್ತಾ ಬಂದಿದ್ದಾರೆ. ಇವರ ಈ ಹೇಳಿಕೆಯಿಂದ ದೊಡ್ಡ ಅನಾಹುತ ಆಗುತ್ತದೆ. ನಿಮ್ಮ ರಾಜಕೀಯ ವ್ಯವಸ್ಥೆ ನಾಶವಾಗುತ್ತದೆ. ಅವರು ತಮ್ಮ ಹೇಳಿಕೆಯನ್ನ ವಾಪಸ್ ಪಡೆಯಬೇಕು. ಈ ಸಂಬಂಧ ಅವರ ವಿರುದ್ಧ ಧಾರವಾಡ, ಬೆಂಗಳೂರು ಹಾಗೂ ಕಲಬುರ್ಗಿ ಕೋರ್ಟ್‌ಗಳಲ್ಲಿ ಕೇಸ್ ದಾಖಲಿಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಅಶ್ಲೀಲ ವಿಡಿಯೋ ಹರಿಬಿಡುವ ಬೆದರಿಕೆ – ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು
ಉದಯನಿಧಿ ಸ್ಟಾಲಿನ್ ಹೇಳಿದ್ದೇನು?
ಲೇಖಕರ ಸಮಾವೇಶವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು. ಈ ಪರಿಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು.
Web Stories