ಧಾರವಾಡ: ಇಂದು ಬೆಳಗ್ಗೆ ಚಾಮರಾಜಪೇಟೆಯ (Chamrajpet) ಒಬ್ಬನ ಮಾಲೀಕತ್ವದಲ್ಲಿ ಇದ್ದ ನಾಲ್ಕು ಹಸುವಿನ ಕೆಚ್ಚಲು ಕೊಯ್ದಿದ್ದಾರೆ. ಇದು ನೀಚ ಕೃತ. ಇಸ್ಲಾಮಿಕ್ ಶಕ್ತಿಯ ಪ್ರದರ್ಶನ ಆಗುತ್ತಿದೆ, ರಾಕ್ಷಸ ಕೃತ್ಯಕ್ಕೆ ಇದು ಉದಾಹರಣೆ ಎಂದು ಶ್ರೀರಾಮ ಸೇನೆ (Sri Ram Sena) ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalk) ಕಿಡಿಕಾರಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮೀರ್ ಅಹ್ಮದ್ (Zameer Ahmed Khan) ಇದು ನಿಮ್ಮ ಕ್ಷೇತ್ರದಲ್ಲಿ ಆಗಿದೆ. ಇದನ್ನು ತಾವು ಗಂಭೀರವಾಗಿ ತೆಗೆದುಕೊಳ್ಳಬೇಕು. ಹಸು ಹಿಂದೂಗಳಿಗೆ ಅತ್ಯಂತ ಪೂಜ್ಯ ಪ್ರಾಣಿ. ಅದು ಬರೀ ಪ್ರಾಣಿ ಅಲ್ಲಾ, ಅದು ನಮಗೆ ಅನ್ನ ಹಾಕುತ್ತೆ, ಗೊಬ್ಬರ ಕೊಡುತ್ತೆ, ಔಷಧಿ ಕೊಡುತ್ತದೆ. ರೈತರ ಬೆನ್ನೆಲುಬು ಅದು. ಅದರ ಕೆಚ್ಚಲು ಕೊಯ್ದ ನೀಚರನ್ನು ಒದ್ದು ಒಳಗಡೆ ಹಾಕದಿದ್ದರೇ ಶ್ರೀರಾಮ ಸೇನೆಯಿಂದ ಜಮೀರ್ ವಿರುದ್ಧ ರಾಜ್ಯದಲ್ಲಿ ಹೋರಾಟ ಮಾಡುತ್ತೇವೆ, ಇದು ಎಚ್ಚರಿಕೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಜಾಮೀನಿಗೆ ಮೇಲ್ಮನವಿ ಬಳಿಕ ದರ್ಶನ್‌ಗೆ ಬೆಂಗಳೂರು ಪೊಲೀಸರಿಂದ ಮತ್ತೊಂದು ಶಾಕ್!
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಇದೆ. ಕಾನೂನು ಇದ್ದರೂ ಕಾಂಗ್ರೆಸ್‌ನ ಮುಸ್ಲಿಂ ತುಷ್ಟೀಕರಣ ಹಿನ್ನೆಲೆಯಲ್ಲಿ ನಿರಂತರ ಗೋಹತ್ಯೆ ಆಗುತ್ತಿದೆ. ನಿರಂತರ ಕಸಾಯಿ ಖಾನೆಗೆ ಹಸು ಹೋಗುತ್ತಿವೆ. ಇವತ್ತು ಅದನ್ನು ತಡೆಯಬೇಕು. ಇವತ್ತು ಆದ ಘಟನೆ ನೋಡಲು ಆಗುತ್ತಿಲ್ಲ. ಅದು ನಮ್ಮ ತಾಯಿ. ಜಮೀರ್‌ಗೆ ಮಾನಾ ಮರ್ಯಾದೆ ಇದ್ದರೇ ರಾಕ್ಷಸಿ ಕೃತ್ಯ ಮಾಡಿದವರನ್ನು ಒದ್ದು ಒಳಗೆ ಹಾಕಿ. ಇಲ್ಲದಿದ್ದರೇ ಹೋರಾಟಕ್ಕೆ ಸಿದ್ದ ಎಂದು ಸವಾಲು ಹಾಕುತ್ತೇನೆ ಎಂದು ಗುಡುಗಿದರು. ಇದನ್ನೂ ಓದಿ: ಗಂಡುಮಕ್ಕಳು ಮಾತ್ರ ಕೆಟ್ಟವರು, ಹುಡುಗಿಯರು ಏನೇ ಮಾಡಿದ್ರೂ ಲೆಕ್ಕಕ್ಕೆ ಬರಲ್ಲ – ಸಾಯುವ ಮುನ್ನ ಯುವಕ ಮಾಡಿದ್ದ ವೀಡಿಯೋ ವೈರಲ್
ಆಕಳಿನ ಕೆಚ್ಚಲು ಕೊಯ್ದದ್ದನ್ನು ನೋಡಿದರೆ ಮನುಷ್ಯ ನೋಡಿ ಸುಮ್ಮನೆ ಇರಲು ಆಗಲ್ಲ. ಇದನ್ನು ಖಂಡಿಸುತ್ತೇನೆ. ನಿಮ್ಮ ಒಳಗೆ ಇರುವ ಬಾಂಗ್ಲಾದೇಶದವರ ಕುಕೃತ್ಯಕ್ಕೆ ಉತ್ತರ ನೀವೇ ಕೊಡಬೇಕು. ನೀವೇ ಒದ್ದು ಒಳಗೆ ಹಾಕಬೇಕು. ಆ ಕ್ಷೇತ್ರದ ಸಚಿವರು ನೀವು, ಅದು ನಿಮ್ಮ ಜವಾಬ್ದಾರಿ. ಹಿಂದೂ ಜನ ನಿಮಗೆ ವೋಟು ಹಾಕಿದ್ದಾರೆ. ಆ ಹಿಂದೂಗಳಿಗೆ ನ್ಯಾಯ ಒದಗಿಸಬೇಕಾದರೆ ಅವರನ್ನು ಬಂಧಿಸಿ. ನಮ್ಮ ತೇಜಸ್ವಿಗೌಡ ಬೆಳಗ್ಗೆಯಿಂದ ಅಲ್ಲೇ ಇದ್ದಾರೆ. ಪೊಲೀಸರು ಇದನ್ನು ತಡೆಯಬೇಕು ಎಂದು ಹರಿಹಾಯ್ದರು. ಇದನ್ನೂ ಓದಿ: ಹುಟ್ಟುಹಬ್ಬದ ದಿನವೇ ಬಾಲಕ ಬಲಿ – ಟ್ರಕ್ ಚಕ್ರ ಹರಿದು ತಲೆ ಛಿದ್ರ