ಪಣಜಿ: ರಾಜ್ಯದ ಜನರಿಗೆ ಮೂರು ಎಲ್‍ಪಿಜಿ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲು 40ಕೋಟಿ ರೂ. ಮೊತ್ತವನ್ನು ನೀಡುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಘೋಷಿಸಿದರು.
ವಿಧಾನಸಭೆಯಲ್ಲಿ ಈ ಬಾರಿಯ ರಾಜ್ಯ ಬಜೆಟ್‍ನ್ನು ಮಂಡಿಸಿದ ಅವರು ರಾಜ್ಯದ ಮತ್ತು ಜನರ ಅಭಿವೃದ್ಧಿ ಹಾಗೂ ಸಮೃದ್ಧಿಗಾಗಿ ಈ ಬಜೆಟ್ ಆಗಿದೆ ಎಂದು ಹೇಳಿದರು.
Advertisement
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಂದು ಗೋವಾ ವಿಧಾನಸಭೆಯಲ್ಲಿ 2022-23ನೇ ಸಾಲಿನ ರಾಜ್ಯ ಬಜೆಟ್‍ನ್ನು ಮಂಡಿಸಿದ್ದಾರೆ. ಗೋವಾ ಜನತೆಗೆ, ರಾಜ್ಯದ ಅಭಿವೃದ್ಧಿಗೆ ಹಾಗೂ ರಾಜ್ಯದ ಏಳಿಗೆಗಾಗಿ ಇರುವ ಬಜೆಟ್ ಇದಾಗಿದೆ ಎಂದು ತಿಳಿಸಿದರು.
Advertisement
Presented the #StateBudget for the year 2022-23 in Goa Assembly today.
The Budget for the people of Goa, The Budget for development of the state, The Budget for the Prosperity of the State. pic.twitter.com/o78Pa1QPEj
— Dr. Pramod Sawant (@DrPramodPSawant) March 30, 2022
ಪಣಜಿ ಬಳಿಯ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ಎರಡನೇ ಬಾರಿಗೆ ಗೋವಾದಲ್ಲಿ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಗೋವಾ ರಾಜ್ಯಪಾಲ ಪಿಎಸ್ ಶ್ರೀಧರನ್ ಪಿಳ್ಳೈ ಅವರು ಪ್ರಮೋದ್ ಸಾವಂತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಮೋದ್ ಸಾವಂತ್ ಕೊಂಕಣಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇದನ್ನೂ ಓದಿ: ಎರಡನೇ ಬಾರಿ ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಪ್ರಮಾಣವಚನ
Advertisement
Advertisement
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ಅರ್ಲೇಕರ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡನಾವಿಸ್ ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಈ ಬಾರಿ ಮಾವಿನ ಹಣ್ಣು ಸವಿಯೋಕೆ ತುಸು ಕಾಯ್ಬೇಕು- ಅಕಾಲಿಕ ಮಳೆಗೆ ಬಾರದ ಫಸಲು, ಬೆಲೆ ಗಗನಕ್ಕೆ