2ನೇ ಬಾರಿಗೆ ಗೋವಾ ಸಿಎಂ ಆಗಿ ಪ್ರಮೋದ್ ಸಾವಂತ್ ಆಯ್ಕೆ

Public TV
2 Min Read
pramod sawant e1720420495840

ಪಣಜಿ: ಕರಾವಳಿ ರಾಜ್ಯದಲ್ಲಿ ಯಾರಿಗೆ ಮುಖ್ಯಮಂತ್ರಿ ಹುದ್ದೆ ಸಿಗುತ್ತದೆ ಎಂಬ ಕುತೂಹಲಕ್ಕೆ ಬಿಜೆಪಿ ಕೊನೆಗೂ ಅಂತ್ಯ ಹಾಡಿದೆ. ರಾಜ್ಯದಲ್ಲಿ ಸತತ ಮೂರು ಬಾರಿ ಬಿಜೆಪಿ ಗೆದ್ದಿದ್ದು, ಗೋವಾದ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅವರು ಸತತ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

goa cm

ಗೋವಾ ವಿಧಾನಸಭೆ ಚುನಾವಣೆ ವೇಳೆ ಪಕ್ಷದ ಹೈಕಮಾಂಡ್ ಕೇಂದ್ರ ವೀಕ್ಷಕರಾಗಿ ರಾಜ್ಯಕ್ಕೆ ನಿಯೋಜಿಸಲ್ಪಟ್ಟ ನರೇಂದ್ರ ಸಿಂಗ್ ತೋಮರ್ ಸೇರಿದಂತೆ ಹಲವು ಬಿಜೆಪಿ ಹಿರಿಯ ನಾಯಕರು ನಡೆಸಿದ ಸಭೆಯಲ್ಲಿ ಸಾವಂತ್ ಅವರನ್ನು ಸೋಮವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಎಂದು ಘೋಷಿಸಲಾಯಿತು. ಮುಂದಿನ ಐದು ವರ್ಷಗಳ ಕಾಲ ಪ್ರಮೋದ್ ಸಾವಂತ್ ಅವರು ಗೋವಾದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿರಲಿದ್ದಾರೆ. ಇದನ್ನೂ ಓದಿ: ರಷ್ಯಾ ಯುದ್ಧವನ್ನು 2ನೇ ಮಹಾಯುದ್ಧಕ್ಕೆ ಹೋಲಿಸಿದ ಝೆಲೆನ್ಸ್ಕಿ

ಸಭೆಯ ನಂತರ ಈ ವಿಚಾರವಾಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ನನ್ನ ಹೆಸರನ್ನು ಪ್ರಸ್ತಾಪಿಸಿದ ಪಕ್ಷಕ್ಕೆ, ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಕೇಂದ್ರ ನಾಯಕತ್ವಕ್ಕೆ ಮತ್ತು ನನ್ನನ್ನು ನಂಬಿದ ಶಾಸಕರಿಗೆ ನಾನು ಕೃತಜ್ಞನಾಗಿದ್ದೇನೆ. ರಾಜ್ಯದಲ್ಲಿ ಪ್ರಧಾನಿ ಮೋದಿಯವರ ಅಭಿವೃದ್ದಿಯ ಕಲ್ಪನೆಯನ್ನು ಅನುಷ್ಠಾನಗೊಳಿಸುತ್ತೇನೆ. ನಾವು ನಮ್ಮ ಎಲ್ಲಾ ಚುನಾವಣಾ ಭರವಸೆಗಳನ್ನು ಈಡೇರಿಸುತ್ತೇವೆ ಮತ್ತು ನಮ್ಮ ಪ್ರಣಾಳಿಕೆಯನ್ನು ಜಾರಿಗೆ ತರಲು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದಾರೆ.

ನರೇಂದ್ರ ಸಿಂಗ್ ತೋಮರ್ ಅವರ ಪ್ರಕಾರ ಸಭೆಯಲ್ಲಿ ಸಾವಂತ್ ನಾಯಕರ ಅವಿರೋಧ ಆಯ್ಕೆಯಾಗಿದ್ದಾರೆ. ಸಭೆ ನಂತರ ಮಾತನಾಡಿದ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಕೇಂದ್ರ ವೀಕ್ಷಕರಾಗಿ ಇಲ್ಲಿಗೆ ಬಂದಿದ್ದೇವೆ. ಗೋವಾದ ಚುನಾವಣಾ ಉಸ್ತುವಾರಿಯಾಗಿದ್ದ ದೇವೇಂದ್ರ ಫಡ್ನವೀಸ್, ಸಿ.ಟಿ.ರವಿ, ಸದಾನಂದ್ ತಾನವ್ಡೆ, ಶ್ರೀಪಾದ್ ನಾಯಕ್ ಮತ್ತು ಇತರರೊಂದಿಗೆ ಉಪಸ್ಥಿತರಿದ್ದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಚ್ಚಾತೈಲ ಬೆಲೆ ಮತ್ತೆ ಶೇ.3 ಏರಿಕೆ; ಮಾರುಕಟ್ಟೆಯಿಂದ ಹೊರಬೀಳಲಿದೆಯಾ ರಷ್ಯಾ ತೈಲ

Share This Article
Leave a Comment

Leave a Reply

Your email address will not be published. Required fields are marked *