– ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ರಾಜವಂಶಸ್ಥೆ ವಿರೋಧ
ಮೈಸೂರು: ಚಾಮುಂಡೇಶ್ವರಿ ದೇವಸ್ಥಾನ (Chamundeshwari Temple) ನಮ್ಮ ಆಸ್ತಿ. ಅದು ಸಂಸ್ಥಾನದ ಖಾಸಗಿ ಆಸ್ತಿಗಳ ಪಟ್ಟಿಯಲ್ಲಿ ಇದೆ ಎನ್ನುವ ಮೂಲಕ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರ (Chamundi Hill Development Authority) ರಚನೆಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ (Pramoda Devi Wadiyar) ವಿರೋಧ ವ್ಯಕ್ತಪಡಿಸಿದರು.
Advertisement
ಮೈಸೂರು (Mysuru) ಅರಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟದ ನಿರ್ವಹಣೆ ಸಂಬಂಧ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸರ್ಕಾರಕ್ಕೆ ಪತ್ರ ಬರೆದಿದ್ದರು. ನಿರ್ವಹಣೆ ಮಾಡಲು ಆಗೋದಿಲ್ಲ ಅಂತಾ ಬರೆದಿದ್ದರು. ಈಗ ನಾವು ನಿರ್ವಹಣೆ ಮಾಡೋ ಬಗ್ಗೆ ನಾನು ಹೆಚ್ಚೇನು ಮಾತಾಡೋದಿಲ್ಲ. ನ್ಯಾಯಾಲಯ, ಸರ್ಕಾರ ಈಗಲೂ ಗ್ರೀನ್ ಸಿಗ್ನಲ್ ಕೊಟ್ಟರೆ ಚಾಮುಂಡಿ ಬೆಟ್ಟವನ್ನ ನಾವೇ ನಿರ್ವಹಣೆ ಮಾಡ್ತೇವೆ. ಬೆಟ್ಟವನ್ನು ಬೆಟ್ಟವಾಗಿಯೇ ಉಳಿಸಿಕೋಳ್ಳಬೇಕು ಅನ್ನೋದು ನಮ್ಮ ವಾದ. ಸರ್ಕಾರಿ ಖರಾಬು ಅಂತಾ ಚಾಮುಂಡಿ ಬೆಟ್ಟವನ್ನು ಮಾಡಲು ಆಗೋದಿಲ್ಲ. ಕೇವಲ ಖರಾಬು ಅಂತಾ ಮಾತ್ರವೇ ಇದೆ. ಆದ್ರೆ ಸರ್ಕಾರಿ ಖರಾಬು, ಖರಾಬು ಅಂತಾ ಇಲ್ಲ. ನಾವು ಸರ್ಕಾರಕ್ಕೆ ಕೊಟ್ಟ ಪ್ರಾಪರ್ಟಿ ಬಿಟ್ಟು ಸರ್ಕಾರಕ್ಕೆ ಕೊಟ್ಟಿರೋ ಬಗ್ಗೆ ನಾವು ಇವಾಗ ಕ್ಲೈಮ್ ಮಾಡೋದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಅ.3 ರಂದು ಮೈಸೂರು ದಸರಾ ಉದ್ಘಾಟನೆ; ಅ.12 ಕ್ಕೆ ಜಂಬೂಸವಾರಿ – ಸಿಎಂ ಸಿದ್ದರಾಮಯ್ಯ
Advertisement
Advertisement
ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ. ಅದು ಸಂಸ್ಥಾನದ ಖಾಸಗಿ ಆಸ್ತಿಗಳ ಪಟ್ಟಿಯಲ್ಲಿ ಇದೆ. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ನಮ್ಮ ವಿರೋಧ ಇದೆ. ಸಂಸ್ಥಾನದ ಖಾಸಗಿ ಆಸ್ತಿಗಳ ಪಟ್ಟಿಯಲ್ಲಿ ಬೆಟ್ಟದ ಅರಮನೆ, ನಂದಿ, ಚಾಮುಂಡೇಶ್ವರಿ ಹಾಗೂ ಮಹಾಬಲೇಶ್ವರ ದೇವಸ್ಥಾನ, ದೇವಿಕೆರೆ ಸುತ್ತಮುತ್ತಲ ಪ್ರದೇಶ ಸೇರಿದೆ. ದೇವಸ್ಥಾನ ಸಂಬಂಧ 2001ರಲ್ಲಿ ಮುಜರಾಯಿ ಇಲಾಖೆ ಹೈಕೋರ್ಟ್ ಮೆಟ್ಟಿಲೇರಿದೆ. ಪ್ರಕರಣ ಕೋರ್ಟ್ನಲ್ಲಿ ಇರುವಾಗ ಪ್ರಾಧಿಕಾರ ರಚನೆ ಮಾಡುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
Advertisement
ಹೀಗಾಗಿ ಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಾಗಿದೆ. ಕೋರ್ಟ್ ಬರೀ ಸ್ಟೇಟಸ್ ಕೋ ಕೊಟ್ಟಿಲ್ಲ, ಪ್ರಾಧಿಕಾರವೇ ಜಾರಿಯಲ್ಲಿ ಇರೋದಿಲ್ಲ. 1950 ರಲ್ಲೇ ನಮ್ಮ ಸಂಸ್ಥಾನದಿಂದ ಖಾಸಗಿ ಆಸ್ತಿಗಳ ಪಟ್ಟಿ ಕೊಟ್ಟಿರೋದು. ಕೇಂದ್ರ ಸರ್ಕಾರ 1972 ರಲ್ಲಿ ಮಾಡಿರುವ ಆದೇಶದ ಪ್ರಕಾರ ಅವುಗಳನ್ನು ನಾವು ಅನುಭವಿಸಬಹುದು ಎಂದರು. ಇದನ್ನೂ ಓದಿ: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ – ಸಿಬಿಐ ವಿಚಾರಣೆ ಆದೇಶ ಕಾಯ್ದಿರಿಸಿದ ಹೈಕೋರ್ಟ್