ಚಿಕ್ಕಮಗಳೂರು: ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ಬಾಲ ರಾಮನ ಪ್ರಾಣಪ್ರತಿಷ್ಠಾ (Prana Pratishta) ಕಾರ್ಯಕ್ರಮಕ್ಕೆ ನಾಲ್ಕು ಶಂಕರ ಮಠಗಳು ವಿರೋಧ ವ್ಯಕ್ತಪಡಿಸಿವೆ ಎಂಬ ಸುದ್ದಿಗಳ ಬೆನ್ನಲ್ಲೇ ಶ್ರೀ ಶೃಂಗೇರಿ ಶಾರದಾ ಪೀಠ(Sri Sringeri Sharada Peetham) ಸ್ಪಷ್ಟನೆ ನೀಡಿದೆ.
ಜ.8 ರಂದೇ ಶೃಂಗೇರಿ ಮಠದ ಪರವಾಗಿ ಆಡಳಿತ ಅಧಿಕಾರಿ ಗೌರಿಶಂಕರ್ (V.R.Gowrishankar) ಅವರು ಆಸ್ತಿಕ ಜನರೆಲ್ಲರ ಗಮನಕ್ಕೆ ಒಂದು ಮುಖ್ಯವಾದ ವಿಷಯ ಎಂದು ಹೇಳಿ ಪ್ರಕಟಣೆ ನೀಡಿದ್ದರು.
Advertisement
ಕೆಲ ಧರ್ಮದ್ವೇಷಿಗಳು ಸಾಮಾಜಿಕ ಜಾಲತಾಣದಲ್ಲಿ ಶೃಂಗೇರಿ ಶಾರದಾಪೀಠ ಶ್ರೀ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಫೋಟೋದ ಜೊತೆಗೆ ಶ್ರೀಗಳು ಪ್ರಾಣಪ್ರತಿಷ್ಠಾ ಕಾರ್ಯಕ್ರಮವನ್ನು ವಿರೋಧಿಸುತ್ತಿದ್ದಾರೆ ಎಂಬ ಅರ್ಥ ಬರುವಂತೆ ಸಂದೇಶವನ್ನು ಹಾಕಿ ಪ್ರಚಾರ ಮಾಡುತ್ತಿದ್ದಾರೆ. ಆದರೆ ಶ್ರೀಗಳು ಆ ರೀತಿಯ ಯಾವುದೇ ಸಂದೇಶ ನೀಡಿಲ್ಲ. ಇದು ಕೇವಲ ಧರ್ಮದ್ವೇಷಿಗಳಾದ ಕೆಲವು ಮಾಡುತ್ತಿರುವ ಮಿಥ್ಯಾಪ್ರಚಾರ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Ayodhya Ram Mandir: ರಾಮಮಂದಿರಕ್ಕೆ ಹರಿದುಬಂದ ದೇಣಿಗೆ ಎಷ್ಟು? ಅತಿ ಹೆಚ್ಚು ದೇಣಿಗೆ ಕೊಟ್ಟವರ‍್ಯಾರು ಗೊತ್ತಾ?
Advertisement
Advertisement
ಮಾಧ್ಯಮ ಹೇಳಿಕೆಯಲ್ಲಿ ಏನಿದೆ?
ಆಸ್ತಿಕ ಜನರೆಲ್ಲರ ಗಮನಕ್ಕೆ ಒಂದು ಮುಖ್ಯವಾದ ವಿಷಯ. ಸುಮಾರು ಐದುನೂರು ವರ್ಷಗಳ ಸುದೀರ್ಘವಾದ ಹೋರಾಟದ ನಂತರ ಶ್ರೀರಾಮಚಂದ್ರನ ಅವತಾರ ಕ್ಷೇತ್ರವಾದ ಪವಿತ್ರ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನಿಗೆ ಭವ್ಯವಾದ ದೇವಸ್ಥಾನದ ನಿರ್ಮಾಣವು ನೆರವೇರಿ ಇದೇ ಶೋಭಕೃತ್ ಪುಷ್ಯ ಶುಕ್ಲ ದ್ವಾದಶಿಯಂದು ಪ್ರಾಣ ಪ್ರತಿಷ್ಠಾ ಮಹೋತ್ಸವವು ಅತ್ಯಂತ ವೈಭವೋಪೇತವಾಗಿ ಸಂಪನ್ನಗೊಳ್ಳಲಿದೆ. ಈ ವಿಷಯವು ಸಮಸ್ತ ಆಸ್ತಿಕಸ್ತೋಮಕ್ಕೂ ಅತ್ಯಂತಾನಂದದಾಯಕವಾಗಿದೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ಚಿನ್ನದ ಬಾಗಿಲು – ಇನ್ನು 3 ದಿನದಲ್ಲಿ 13 ಬಾಗಿಲು ಅಳವಡಿಕೆ
Advertisement
ಆದರೆ ಇಂತಹ ಸಂದರ್ಭದಲ್ಲಿ ಕೆಲವರು ಧರ್ಮದ್ವೇಷಿಗಳು ಸಾಮಾಜಿಕ ಜಾಲತಾಣದಲ್ಲಿ “www.dainikjagran.com” ಎಂಬ ಹೆಸರನ್ನು ಉಪಯೋಗಿಸಿಕೊಂಡು ಶೃಂಗೇರಿ ಶಾರದಾಪೀಠದ ಪ್ರಸ್ತುತ ಅಧಿಪತಿಗಳಾದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಛಾಯಾಚಿತ್ರದ ಜೊತೆಗೆ ಶ್ರೀಗಳು ಈ ಪವಿತ್ರ ಪ್ರಾಣಪ್ರತಿಷ್ಠಾ ಮಹೋತ್ಸವವನ್ನು ವಿರೋಧಿಸುತ್ತಿದ್ದಾರೆ ಎಂಬ ಅರ್ಥವು ಬರುವ ಹಾಗೆ ಸಂದೇಶವನ್ನು ಹಾಕಿ ಪ್ರಚಾರ ಮಾಡುತ್ತಿದ್ದಾರೆ. ಆದರೆ ಜಗದ್ಗುರು ಶ್ರೀ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರು ಇಂತಹ ಯಾವುದೇ ಸಂದೇಶವನ್ನು ನೀಡಿರುವುದಿಲ್ಲ. ಇದು ಕೇವಲ ಧರ್ಮದ್ವೇಷಿಗಳಾದ ಕೆಲವರು ಮಾಡುತ್ತಿರುವ ಮಿಥ್ಯಾ ಪ್ರಚಾರವೇ ಸರಿ. ಆದ್ದರಿಂದ ಆಸ್ತಿಕ ಮಹಾಜನರು ಯಾವುದೇ ಕಾರಣಕ್ಕೆ ಇಂತಹ ಅಪಪ್ರಚಾರಗಳಿಗೆ ಬೆಲೆಯನ್ನು ಕೊಡಬಾರದು. ಹಾಗೆಯೇ ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ ಅಧಿಕೃತವಾದ www.sringeri.net ಎಂಬ ವೆಬ್‌ಸೈಟಿನಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾದ ವಿಷಯಗಳನ್ನು ಮಾತ್ರವೇ ಪ್ರಾಮಾಣಿಕವಾಗಿ ಪರಿಗಣಿಸಬೇಕೆಂದು ಈ ಮೂಲಕ ನಿವೇದಿಸುತ್ತಿದ್ದೇವೆ.
“sharadapeetham” ಯೂಟ್ಯೂಬ್ ಚ್ಯಾನೆಲ್ ಮೂಲಕ ಕಳೆದ ದೀಪಾವಳಿಯ (12-11-2023) ಸಂದರ್ಭದಲ್ಲಿ ಈ ಪವಿತ್ರ ಪ್ರಾಣಪ್ರತಿಷ್ಠಾ ಮಹೋತ್ಸವವನ್ನು ಮನಸ್ಸಿನಲ್ಲಿಟ್ಟುಕೊಂಡು ಶ್ರೀರಾಮತಾರಕ ಮಹಾಮಂತ್ರವನ್ನು ಜಪಿಸುವಂತೆ ಎಲ್ಲಾ ಆಸ್ತಿಕರಿಗೂ ಶೃಂಗೇರಿ ಜಗದ್ಗುರುಗಳು ಸಂದೇಶವನ್ನು ನೀಡಿದ್ದರು. ಅದನ್ನ ಅನುಸರಿಸಿ ಆಸ್ತಿಕರು ಅತ್ಯಧಿಕ ಸಂಖ್ಯೆಯಲ್ಲಿ ಮಂತ್ರಜಪವನ್ನು ಮಾಡುತ್ತಿರುವುದು ಈ ಸಂದರ್ಭದಲ್ಲಿ ಗಮನಾರ್ಹವಾಗಿದೆ. ಹಾಗೆಯೇ ಅತ್ಯಂತ ಪವಿತ್ರವೂ ಅಪರೂಪವು ಆದ ಈ ಪ್ರಾಣಪ್ರತಿಷ್ಠಾ ಮಹೋತ್ಸವದ ಸುಸಂದರ್ಭದಲ್ಲಿ ಎಲ್ಲಾ ಆಸ್ತಿಕರು ಯಥಾಯೋಗ್ಯವಾಗಿ ಭಾಗವಹಿಸಿ ಶ್ರೀರಾಮನ ಪರಿಪೂರ್ಣ ಕೃಪೆಗೆ ಪಾತ್ರರಾಗಿ ಕೃತಾರ್ಥರಾಗಬೇಕೆಂದು ಜಗದ್ಗುರು ಮಹಾಸ್ವಾಮಿಗಳವರು ಆಶೀರ್ವದಿಸಿದ್ದಾರೆ.