ಹೈದರಾಬಾದ್: ದೇಶಾದ್ಯಂತ ಸುದ್ದಿಯಾಗಿದ್ದ ಪ್ರಣಯ್ ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ತೆಲಂಗಾಣ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ನ್ಯಾಯಾಲಯವು ಮಾರುತಿ ರಾವ್, ಶ್ರಾವಣ್ ಮತ್ತು ಮತೊಬ್ಬ ಆರೋಪಿ ಕರೀಂನಗೆ ಜಾಮೀನು ನೀಡಿದೆ. ಇಂದು ವಾರಂಗಲ್ ಕೇಂದ್ರ ಜೈಲಿನಿಂದ ಆರೋಪಿಗಳು ಬಿಡುಗಡೆಯಾಗುವ ಸಾಧ್ಯತೆಯಿದೆ.
Advertisement
ಈ ಹಿಂದೆ ಆರೋಪಿಗಳು ತೆಲಂಗಾಣದ ನಾಲ್ಗೊಂಡ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಾದ-ವಿವಾದ ಆಲಿಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.
Advertisement
Advertisement
ಮೃತ ಪ್ರಣಯ್ ಪತ್ನಿ ಅಮೃತಾ ತನ್ನ ಪತಿಯ ಸಾವಿನ ನ್ಯಾಯಕ್ಕಾಗಿ ತಂದೆ ಟಿ. ಮಾರುತಿ ರಾವ್, ಚಿಕ್ಕಪ್ಪ ಟಿ. ಶ್ರಾವಣ್, ಅಸ್ಗರ್ ಅಲಿ, ಮೊಹಮ್ಮದ್ ಅಬುಲ್ ಬಾರಿ ಮತ್ತು ಎಸ್. ಶಿವಗೆ ವಿರುದ್ಧ ಹೋರಾಟ ಮಾಡುತ್ತಿದ್ದಾರೆ.
Advertisement
ಪ್ರಣಯ್ ಕೊಲೆ ಮರ್ಯಾದಾ ಹತ್ಯೆ ಎಂದು ಪೊಲೀಸರು ಸ್ಪಷ್ಟ ಪಡಿಸಿದ್ದರು. ಪೊಲೀಸರು ಕೊಲೆಗಾರನನ್ನು ಬಿಹಾರ್ ಮೂಲದ ಸುಭಾಷ್ ಶರ್ಮಾ ಎಂದು ಗುರುತಿಸಿದ್ದಾರೆ. ಈತನನ್ನು ಆರೋಪಿ ಮೊಹಮ್ಮದ್ ಅಬುಲ್ ರಾಜಮಂಡ್ರಿ ಕೇಂದ್ರ ಜೈಲಿನಲ್ಲಿ ಭೇಟಿಯಾಗಿದ್ದ ವಿಚಾರ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.
ಏನಿದು ಪ್ರಕರಣ?
ಪ್ರಣಯ್ ಮತ್ತು ಅಮೃತ ಹೈಸ್ಕೂಲ್ ನಲ್ಲಿಯೇ ಪ್ರೇಮಪಾಶಕ್ಕೆ ಸಿಲುಕಿದ್ದರು. ಮುಂದೆ ಕಾಲೇಜಿನಲ್ಲಿಯೂ ಇಬ್ಬರ ಪ್ರೇಮ ಮುಂದುವರಿದಿತ್ತು. ಆದ್ರೆ ಎರಡೂ ಕುಟುಂಬಗಳ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದವು. ಇಬ್ಬರ ಜಾತಿ ಬೇರೆಯಾಗಿದ್ದರಿಂದ ಅಮೃತಾ ಮನೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರೂ ಯುವ ಜೋಡಿ ಮನೆಯವರ ವಿರೋಧದ ನಡುವೆಯೂ ಮದುವೆ ಆಗಿದ್ದರು.
2018ರ ಸೆಪ್ಟಂಬರ್ 15 ಶನಿವಾರದಂದು ಪ್ರಣಯ್ ಮತ್ತು ಅಮೃತಾ ಆಸ್ಪತ್ರೆ ಮುಂದೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಮಚ್ಚಿನಿಂದ ಪ್ರಣಯ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದನು. ಆದರೆ ಪ್ರಣಯ್ ಕೊಲೆಗೆ ಆತ ಮಾವ ಮಾರುತಿ ರಾವ್ ಬರೋಬ್ಬರಿ ಒಂದು ಕೋಟಿ ಹಣವನ್ನು ಹಂತಕರಿಗೆ ನೀಡಿದ್ದ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿತ್ತು.