ಸ್ಯಾಂಡಲ್‌ವುಡ್ ನಟಿ ಪ್ರಣಿತಾ ಸುಭಾಷ್ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇಂದು ಹೆಣ್ಣು ಮಗುವಿಗೆ ನಟಿ ಪ್ರಣಿತಾ ತಾಯಿಯಾಗಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ.
Advertisement
`ಪೊರ್ಕಿ’ ಚಿತ್ರದ ಮೂಲಕ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದ ಪ್ರಣಿತಾ ಸುಭಾಷ್, ಈಗ ಸಿನಿಮಾಗಳಿಂದ ಕೊಂಚ ಬ್ರೇಕ್ ತೆಗೆದುಕೊಂಡು, ತಮ್ಮ ತಾಯ್ತನದ ಖುಷಿಯಲ್ಲಿದ್ದರು. ಇದೀಗ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇಂದು ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ನಟಿ ಪ್ರಣಿತಾ ಹೆಣ್ಣು ಮಗುವಿಗೆ ತಾಯಿಯಾಗಿದ್ದಾರೆ. ಆಸ್ಟರ್ ಆರ್‌ವಿ ಆಸ್ಪತ್ರೆಯಲ್ಲಿ ಪ್ರಣಿತಾ ಹೆರಿಗೆಯಾಗಿದ್ದು, ಇಬ್ಬರು ಆರೋಗ್ಯವಾಗಿದ್ದಾರೆ. ಈ ಕುರಿತು ನಟಿ ಪ್ರಣಿತಾ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ:ಸರಕಾರಕ್ಕೆ ಟೀಸರ್ ಮೂಲಕ ಟಾಂಗ್ ಕೊಟ್ಟ ಟಾಲಿವುಡ್ ಬಾಲಕೃಷ್ಣ
Advertisement
View this post on Instagram
Advertisement
ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿರುವ ಪ್ರತಿಭಾವಂತ ನಟಿ ಪ್ರಣಿತಾ, ಬೇಡಿಕೆ ಇರುವಾಗಲೇ ಹಸೆಮಣೆ ಏರಿದ್ದರು. ಒಬ್ಬರನೋಬ್ಬರು ಪ್ರೀತಿಸಿ ಗುರು ಹಿರಿಯರ ಸಮ್ಮುಖದಲ್ಲಿ ಕಳೆದ ವರ್ಷ ನಿತಿನ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದೀಗ ತಾವು ತಾಯಿಯಾಗಿರುವ ಖುಷಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಪ್ರಣಿತಾ ಮತ್ತು ಅವರ ಕುಟುಂಬ ಮುದ್ದು ಹೆಣ್ಣು ಮಗುವಿನ ಆಗಮನ ಖುಷಿಯಲ್ಲಿದ್ದಾರೆ. ಅಭಿಮಾನಿಗಳು ನೆಚ್ಚಿನ ನಟಿಗೆ ಶುಭ ಹಾರೈಸುತ್ತಿದ್ದಾರೆ.