ನವದೆಹಲಿ: ಐದು ರಾಜ್ಯಗಳಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಮುಂಬರುವ ವಿಧಾನಸಭೆ ಚುನಾವಣೆಗಳಲ್ಲಿ ಉತ್ತಮ ಸಾಧನೆ ಮಾಡಲು ಪ್ರಯತ್ನ ಆರಂಭಿಸಿದೆ. ಗುಜರಾತ್ ವಿಧಾನಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಕಾಂಗ್ರೆಸ್ ಹೈಕಮಾಂಡ್ ತನ್ನ ಉನ್ನತ ನಾಯಕರ ಸಭೆ ನಡೆಸಿದೆ.
Advertisement
ನವದೆಹಲಿ 10 ಜನಪಥ್‍ನಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ ನಡೆಯಿತು. ಸಭೆಯಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಎ.ಕೆ ಆ್ಯಂಟನಿ, ಅಜಯ್ ಮಾಕನ್, ದಿಗ್ವಿಜಯ ಸಿಂಗ್ ಮತ್ತು ಅಂಬಿಕಾ ಸೋನಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಭಾಗಿಯಾಗಿದ್ದರು. ಇದನ್ನೂ ಓದಿ: ಈಶ್ವರಪ್ಪ ಬಿಜೆಪಿಯಿಂದ ಹಲಾಲ್ ಆದ ಮೊದಲ ವ್ಯಕ್ತಿ: ಸತೀಶ್ ಜಾರಕಿಹೊಳಿ ವ್ಯಂಗ್ಯ
Advertisement
ಈ ಸಭೆಯ ವೇಳೆ ಚುನಾವಣಾ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ ಕೂಡಾ ಸೋನಿಯಾಗಾಂಧಿ ನಿವಾಸದಲ್ಲಿ ಉಪಸ್ಥಿತರಿದ್ದರು. ಅವರು ಈ ಮಹತ್ವದ ಸಭೆಯಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿದೆ.
Advertisement
Advertisement
ಸಭೆಯಲ್ಲಿ ಗುಜರಾತ್‍ನ ರಾಜಕೋಟ್ ಖೋಡಿಯಾರ್ ದೇವಿಯ ಭವ್ಯ ದೇವಾಲಯದ ಉಸ್ತುವಾರಿ ನೋಡಿಕೊಳ್ಳುತ್ತಿರುವ, ಖೋಡಲ್ಧಾಮ್ ಟ್ರಸ್ಟ್‌ನ ಅಧ್ಯಕ್ಷ ನರೇಶ್ ಪಟೇಲ್ ಅವರನ್ನು ಕಾಂಗ್ರೆಸ್‍ಗೆ ಸೇರ್ಪಡೆ ಮಾಡಿಕೊಳ್ಳುವ ಬಗ್ಗೆ ಚರ್ಚೆ ನಡೆದಿದೆ. ಲೆಯುವಾ ಪಾಟೀದಾರ್ ಸಮುದಾಯದ ಪ್ರಮುಖ ನಾಯಕರಾಗಿರುವ ಹಿನ್ನಲೆ ಕಾಂಗ್ರೆಸ್ ಬಲ ಬರಲಿದೆ ಎನ್ನುವುದು ಕಾಂಗ್ರೆಸ್ ನಾಯಕರ ಲೆಕ್ಕಚಾರವಾಗಿದೆ. ಇದನ್ನೂ ಓದಿ: ಮೇ 15ರಿಂದ ರಷ್ಯಾದ ಕಚ್ಚಾತೈಲ ಆಮದು ಕಡಿತ
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಾಟೀದಾರ್ ಸಮುದಾಯವನ್ನು ವಿಶೇಷವಾಗಿ ಕೇಂದ್ರಿಕರಿಸಬೇಕು ಅದಕ್ಕಾಗಿ ಪಕ್ಷದಲ್ಲಿ ಪಾಟೀದಾರ್ ಸಮುದಾಯದ ನಾಯಕರ ಅವಶ್ಯಕತೆ ಇದೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದರು. ಇದಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಸೋನಿಯಾ ಗಾಂಧಿ ಜೊತೆಗೆ ಚರ್ಚಿಸಿದ್ದರು.