ಪಾಟ್ನಾ: ಒಂದು ಚುನಾವಣೆಗೆ ಸಲಹೆ ನೀಡಲು 100 ಕೋಟಿ ರೂ. ಪಡೆಯುತ್ತೇನೆ ಎಂದು ರಾಜಕೀಯ ಕಾರ್ಯತಂತ್ರ ನಿಪುಣ ಪ್ರಶಾಂತ್ ಕಿಶೋರ್ (Prashant Kishor) ಬಹಿರಂಗಪಡಿಸಿದ್ದಾರೆ.
ತಮ್ಮ ನೇತೃತ್ವದ ಜನ ಸುರಾಜ್ ಪಕ್ಷ (ಜೆಎಸ್ಪಿ)ದ ಪರ ಬಿಹಾರ ಉಪಚುನಾವಣೆ ಪ್ರಚಾರ ವೇಳೆ ಮಾತನಾಡಿದ ಅವರು, ರಾಜಕೀಯ ಪಕ್ಷಗಳು ಅಥವಾ ನಾಯಕರಿಗೆ ಚುನಾವಣಾ ಕಾರ್ಯತಂತ್ರದ ಸೇವೆಗಳನ್ನು ಒದಗಿಸುವಾಗ 100 ಕೋಟಿಗಿಂತ ಹೆಚ್ಚು ಶುಲ್ಕ ವಿಧಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಕೇರಳ ಪಾಲಕ್ಕಾಡ್ನಲ್ಲಿ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಕಾರ್ಮಿಕರು ಸಾವು
Advertisement
Advertisement
ವಿವಿಧ ರಾಜ್ಯಗಳಲ್ಲಿ ಹತ್ತು ಸರ್ಕಾರಗಳು ನನ್ನ ಕಾರ್ಯತಂತ್ರದ ಮೇಲೆ ನಡೆಯುತ್ತಿವೆ. ನನ್ನ ಪ್ರಚಾರಕ್ಕಾಗಿ ಟೆಂಟ್ಗಳನ್ನು ಸ್ಥಾಪಿಸಲು ನನ್ನ ಬಳಿ ಸಾಕಷ್ಟು ಹಣವಿಲ್ಲ ಎಂದು ನೀವು ಭಾವಿಸುತ್ತೀರಾ? ನಾನು ಅಷ್ಟು ದುರ್ಬಲ ಎಂದು ನೀವು ಭಾವಿಸುತ್ತೀರಾ? ಬಿಹಾರದಲ್ಲಿ ನನ್ನಷ್ಟು ಶುಲ್ಕವನ್ನು ಯಾರೂ ಕೇಳಿಲ್ಲ. ನಾನು ಕೇವಲ ಒಂದು ಚುನಾವಣೆಯಲ್ಲಿ ಯಾರಿಗಾದರೂ ಸಲಹೆ ನೀಡಲು, 100 ಕೋಟಿ ಅಥವಾ ಅದಕ್ಕಿಂತ ಹೆಚ್ಚು ಶುಲ್ಕ ಪಡೆಯುತ್ತೇನೆ. ಮುಂದಿನ ಎರಡು ವರ್ಷಗಳವರೆಗೆ, ನಾನು ಅಂತಹ ಒಂದು ಚುನಾವಣಾ ಸಲಹೆಯೊಂದಿಗೆ ನನ್ನ ಪ್ರಚಾರವನ್ನು ಮುಂದುವರಿಸಬಹುದು ಎಂದು ತಿಳಿಸಿದ್ದಾರೆ.
Advertisement
ಬಿಹಾರದ ಬೆಳಗಂಜ್, ಇಮಾಮ್ಗಂಜ್, ರಾಮಗಢ ಮತ್ತು ತರಾರಿ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಈ ವರ್ಷದ ಆರಂಭದಲ್ಲಿ ಲೋಕಸಭೆಗೆ ಆಯ್ಕೆಯಾದ ನಂತರ ತೆರವಾದ ಶಾಸಕ ಸ್ಥಾನಗಳಿಗೆ ಉಪಚುನಾವಣೆ ನಡೆಯುತ್ತಿದೆ.
Advertisement
ಪ್ರಶಾಂತ್ ಕಿಶೋರ್ ಅವರು ಭಾರತದ ಹಲವಾರು ಪ್ರಮುಖ ರಾಜಕೀಯ ಪಕ್ಷಗಳೊಂದಿಗೆ ರಾಜಕೀಯ ತಂತ್ರಗಾರರಾಗಿ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: ನಾಲಗೆ ಬಿಗಿ ಹಿಡಿದು ಮಾತನಾಡಬೇಕಾದ ದೊಡ್ಡ ಜವಾಬ್ದಾರಿ ಮೋದಿಯವರ ಮೇಲಿದೆ: ಹೆಚ್.ಕೆ.ಪಾಟೀಲ್