ಪಾಟ್ನಾ: ಚುನಾವಣಾ ಚಾಣಕ್ಯ, ರಾಜಕೀಯ ತಂತ್ರಗಾರ ಎಂದೇ ಗುರುತಿಸಿಕೊಂಡಿದ್ದ ಪ್ರಶಾಂತ್ ಕಿಶೋರ್ (Prashant Kishor) ನೇತೃತ್ವದ ʻಜನ್ ಸೂರಜ್ʼ (Jan Suraaj) ಪಕ್ಷವು ಈ ಬಾರಿ ಬಿಹಾರ ಉಪ ಚುನಾವಣೆಯಲ್ಲಿ ಖಾತೆ ತೆರೆಯಲು ವಿಫಲವಾಗಿದೆ.
ಈ ಬಾರಿ ಒಟ್ಟು 14 ರಾಜ್ಯಗಳ 48 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ (Bihar Bypolls) ನಡೆಯಿತು. ಅದರಂತೆ ಬಿಹಾರದ ತರಾರಿ, ರಾಮಗಢ, ಬೆಳಗಂಜ್ ಮತ್ತು ಇಮಾಮ್‌ಗಂಜ್ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಜನ್ ಸೂರಜ್ ಅಭ್ಯರ್ಥಿಗಳು ಗೆಲುವು ಸಾಧಿಸುವಲ್ಲಿ ವಿಫಲರಾಗಿದ್ದಾರೆ. ಚುನಾವಣಾ ತಂತ್ರಗಾರ ಎಂದೇ ಹೆಸರು ಪಡೆದಿದ್ದ ಪ್ರಶಾಂತ್ ಕಿಶೋರ್‌ಗೆ ಇದು ಭಾರಿ ಮುಖಭಂಗ ತರಿಸಿದೆ. ಇದನ್ನೂ ಓದಿ: ಒಂದು ಚುನಾವಣಾ ಕಾರ್ಯತಂತ್ರಕ್ಕೆ 100 ಕೋಟಿ ಶುಲ್ಕ ಪಡೆಯುತ್ತೇನೆ: ಪ್ರಶಾಂತ್ ಕಿಶೋರ್
ತರಾರ್‌ನಲ್ಲಿ ಜನ್ ಸೂರ್ಜ್‌ನಿಂದ ಸ್ಪರ್ಧಿಸಿದ್ದ ಕಿರಣ್ ದೇವಿ ಕೇವಲ 5,622 ಮತಗಳನ್ನು ಪಡೆದು ಬಿಜೆಪಿಯ ಪ್ರತಿಸ್ಪಧಿ ವಿಶಾಲ್ ಪ್ರಶಾಂತ್ ( ಪಡೆದ ಮತ 78,755) ವಿರುದ್ಧ 73,133 ಮತಗಳ ಅಂತರದಿಂದ ಹೀನಾಯ ಸೋಲು ಕಂಡರು. ಇನ್ನೂ ರಾಮಗಢದ ಜನ್ ಸೂರಜ್ ಅಭ್ಯರ್ಥಿ ಸುಶೀಲ್ ಕುಮಾರ್ ಸಿಂಗ್ 6,513 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ ಅಶೋಕ್ ಕುಮಾರ್ ಸಿಂಗ್ ವಿರುದ್ಧ 60,895 ಮತಗಳ ಅಂತರದಿಂದ ಸೋತು ಸುಣ್ಣವಾಗಿದ್ದಾರೆ. ಇದನ್ನೂ ಓದಿ: ಯುಪಿಯ ಕುಂದರ್ಕಿಯಲ್ಲಿ 11 ಮುಸ್ಲಿಮರನ್ನು ಸೋಲಿಸಿದ ಏಕೈಕ ಹಿಂದೂ ಅಭ್ಯರ್ಥಿ
ಮೋದಿ ಕ್ಯಾಂಪ್ನಲ್ಲಿ ಗುರುತಿಸಿಕೊಂಡಿದ್ದ ಪ್ರಶಾಂತ್ ಕಿಶೋರ್:
2014ರ ಲೋಕಸಭಾ ಚುನಾವಣೆಯಲ್ಲಿ ಮೋದಿ (Narendra Modi) ಕ್ಯಾಂಪ್ನಲ್ಲಿ ಗುರುತಿಸಿಕೊಂಡಿದ್ದ ಪ್ರಶಾಂತ್ ಕಿಶೋರ್ ನಂತರ ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ಕ್ಯಾಂಪ್‍ನಲ್ಲಿ ಗುರುತಿಸಿಕೊಂಡು ಗೆಲುವಿನ ರೂವಾರಿಯಾಗಿದ್ದರು. ಈ ಕಾರಣಕ್ಕಾಗಿ ಪ್ರಶಾಂತ್ ಕಿಶೋರ್ ಅವರಿಗೆ ರಾಹುಲ್ ಗಾಂಧಿ ಉತ್ತರ ಪ್ರದೇಶ ಚುನಾವಣೆ ಉಸ್ತುವಾರಿ ವಹಿಸಿದ್ದರು. ಆದರೆ ಉತ್ತರ ಪ್ರದೇಶದಲ್ಲಿ ಪ್ರಶಾಂತ್ ಕಿಶೋರ್ ತಂತ್ರಗಾರಿಕೆಗೆ ಸೋಲಾಗಿತ್ತು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಎನ್‌ಡಿಎ ‘ಮಹಾ’ ಸುನಾಮಿ- ಕಾಂಗ್ರೆಸ್ ‘ಆಘಾಡಿ’ ಕೂಟ ಛಿದ್ರ ಛಿದ್ರ – ಯಾರಿಗೆ ಎಷ್ಟು ಸ್ಥಾನ?
ಮೇಲ್ವರ್ಗದ ಮತಗಳನ್ನು ಸೆಳೆಯುವ ಉದ್ದೇಶ ಮತ್ತು ಕಾಂಗ್ರೆಸ್ ಯಾವಾಗಲೂ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಪಕ್ಷ ಎನ್ನುವ ಕಲ್ಪನೆಯಿಂದ ಹೊರಬರಲು ಪ್ರಶಾಂತ್ ಕಿಶೋರ್ ಅವರು ಈ ಬಾರಿ ಬ್ರಾಹ್ಮಣ ಸಮುದಾಯ ವ್ಯಕ್ತಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಲು ಶೀಲಾ ದೀಕ್ಷಿತ್ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸುವಂತೆ ಸಲಹೆ ನೀಡಿದ್ದರು. ಈ ಸಲಹೆಗೆ ಕಾಂಗ್ರೆಸ್ ವಲಯದಲ್ಲಿ ವಿರೋಧ ವ್ಯಕ್ತವಾಗಿತ್ತು.
2014ರ ಚುನಾವಣೆಯ ವೇಳೆ ಪ್ರಶಾಂತ್ ಕಿಶೋರ್ ಸಲಹೆಯಂತೆ ಚಾಯ್‍ಪೇ ಚರ್ಚಾ ಬಿಜೆಪಿಗೆ ಭಾರೀ ಯಶಸ್ಸನ್ನು ತಂದುಕೊಟ್ಟಿತ್ತು. ಇದಾದ ಬಳಿಕ ಅಮಿತ್ ಶಾ ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ಪ್ರಶಾಂತ್ ಕಿಶೋರ್ ಬಿಜೆಪಿ ಪಾಳೆಯವನ್ನು ತೊರೆದಿದ್ದರು. ಬಿಹಾರದಲ್ಲಿ ಮಹಾಘಟ್‍ಬಂಧನ್ ಮೈತ್ರಿಕೂಟ ನಡೆಸಿ ನಿತೀಶ್ ಕುಮಾರ್ ಅವರನ್ನು ಪ್ರಶಾಂತ್ ಕಿಶೋರ್ ಗೆಲ್ಲಿಸಿದ್ದರು. 2017ರ ಪಂಜಾಬ್ ವಿಧಾನಸಭಾ ಚುನಾವಣೆ ವೇಳೆ ಪ್ರಶಾಂತ್ ಕಿಶೋರ್ ತಂಡ ಕಾಂಗ್ರೆಸ್‍ನೊಂದಿಗೆ ಕೈಜೋಡಿಸಿತ್ತು. ಆಗಲೂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಎದುರಾಳಿಯನ್ನ ಮಣಿಸಿ ಅಧಿಕಾರ ಹಿಡಿದರು. ಹಲವು ವರ್ಷಗಳಿಂದ ಚುನಾವಣೆಯಲ್ಲಿ ಸತತ ಸೋಲು ಕಂಡಿದ್ದ ಕಾಂಗ್ರೆಸ್‍ಗೆ ಈ ಗೆಲುವು ಸಮಾಧಾನ ತಂದುಕೊಟ್ಟಿತ್ತು. 2019 ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ತಂತ್ರಗಾರಿಗೆ ಯಶಸ್ಸು ಸಿಕ್ಕಿತ್ತು. ಚಂದ್ರಬಾಬು ನಾಯ್ಡು ಅವರನ್ನು ಸೋಲಿಸಿ ವೈಎಸ್‌ಆರ್ ಕಾಂಗ್ರೆಸ್‌ನ ಜಗನ್ ಅಧಿಕಾರಕ್ಕೆ ಏರಿದ್ದರು.
2018ರಲ್ಲಿ ಜೆಡಿಯು ಸೇರಿದ್ದ ಪ್ರಶಾಂತ್ ಕಿಶೋರ್ 2022 ರಲ್ಲಿ ಜನ್ ಸೂರಜ್ ಹೆಸರಿನಲ್ಲಿ ಬಿಹಾರದಲ್ಲಿ ಪಕ್ಷವನ್ನು ಸ್ಥಾಪಿಸಿದ್ದರು.