ಬೆಂಗಳೂರು: ಗಣಪತಿ (Ganapathi) ದೇವರ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿದ ಸಾಣೇಹಳ್ಳಿಯ (Sanehalli) ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ (Sri Panditharadhya Shivacharya Swamiji) ವಿರುದ್ಧ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ (Prashanth Sambargi) ದೂರು ನೀಡಿದ್ದಾರೆ.
ಗಣೇಶನ ಆರಾಧನೆ, ಆರಾಧಕರ ಆಚಾರ ವಿಚಾರಗಳ ಬಗ್ಗೆ ಸಾಣೇಹಳ್ಳಿ ಸ್ವಾಮೀಜಿಯವರು ಬಹಳ ತುಚ್ಚ ಮಾತುಗಳಿಂದ ನಿಂದಿಸಿರುವುದು ಅಕ್ಷಮ್ಯ. ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Advertisement
Advertisement
ದೂರಿನಲ್ಲಿ ಏನಿದೆ?
ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು, ಸಮಾಜದ ಒಂದು ವರ್ಗವನ್ನು ಓಲೈಸುವ ಭರದಲ್ಲಿ, ದೇಶದ ಬಹುಸಂಖ್ಯಾತರ ಆರಾಧನೆಯ, ನಂಬಿಕೆಯ ಕೇಂದ್ರ ಬಿಂದುವಾಗಿರುವ, ಶತಮಾನಗಳಿಂದ ಪೂಜಿಸಲ್ಪಡುತ್ತಿರುವ ಗಣಪತಿ ದೇವರ ಕುರಿತು ಅತ್ಯಂತ ಕೀಳು ಹೇಳಿಕೆ ನೀಡಿದ್ದಾರಲ್ಲದೇ, ಭಕ್ತವರ್ಗದ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ. ಇದನ್ನೂ ಓದಿ: ನರಕ ಚತುರ್ದಶಿ ಏಕೆ ಆಚರಿಸ್ತಾರೆ?
Advertisement
ನವೆಂಬರ್ 2ರ ಗುರುವಾರದಂದು ಸಾಣೇಹಳ್ಳಿಯಲ್ಲಿ ನಡೆದ ರಾಷ್ಟ್ರೀಯ ನಾಟಕೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಶಿವಧ್ವಜಾರೋಹಣ ನೆರವೇರಿಸಿ ಮಾತನಾಡುವಾಗ “ಗಣಪತಿಯನ್ನು ಸ್ತುತಿಸುವುದು ಮೌಡ್ಯದ ಆಚರಣೆ, ಗಣಪತಿ ಕಾಲ್ಪನಿಕ ದೇವರು. ಸ್ವಾತಂತ್ರ್ಯ ಚಳವಳಿಯ ಸಂದರ್ಭಕ್ಕೆ ನೆಪಮಾತ್ರಕ್ಕೆ ಹುಟ್ಟಿಕೊಂಡ ದೇವರು. ಬಾಹ್ಯವಸ್ತುಗಳಿಂದ ಮಾಡಿದ ದೇವರು ದೇವರಲ್ಲ” ಎನ್ನುವ ಮೂಲಕ ಬಹುದೊಡ್ಡ ಸಮುದಾಯವೊಂದರ ಸುದೀರ್ಘ ನಂಬಿಕೆಗಳಿಗೆ ಉದ್ದೇಶಪೂರ್ವಕ ಧಕ್ಕೆ ತರುವ ಹುನ್ನಾರ ಮಾಡಿದ್ದಾರೆ. ಮಾತ್ರವಲ್ಲ, ಇಂಥ ಭಕ್ತ ಸಮುದಾಯದ ವಿರುದ್ಧ ಸಮಾಜದ ಇನ್ನೊಂದು ವರ್ಗವನ್ನು ಎತ್ತಿಕಟ್ಟುವ ಪ್ರಚೋಧಾನತ್ಮಕ ಕೆಲಸವನ್ನು ಮಾಡಿದ್ದಾರೆ.
Advertisement
ಹಿಂದೂ ಧರ್ಮದ ಪ್ರಮುಖ ದೇವತೆಗಳಲ್ಲಿ ಅಗ್ರ ಸ್ಥಾನ ಪಡೆದಿರುವ ವಿಘ್ನ ನಿವಾರಕನ ಬಗ್ಗೆ, ಹಾಗೂ ಹಿಂದೂ ಧರ್ಮದ ನಂಬಿಕೆಗಳನ್ನು ಅವಹೇಳನ ಮಾಡಿದ್ದು, ಇದರಿಂದ ಭಕ್ತರ ಧಾರ್ಮಿಕ ಭಾವನೆಗಳಿಗೆ ತೀವ್ರ ಕುಂದುಂಟಾಗಿದೆ. ಸಾರ್ವಜನಿಕವಾಗಿ ಹೀಗೆ ಹಿಂದೂ ದೇವರ ವ್ಯ೦ಗ್ಯದ ಹಿಂದೆ ಸಮಾಜದ ಸಾಮರಸ್ಯಕ್ಕೆ ಹಾಳು ಮಾಡುವ ಕುತಂತ್ರ ಅಡಗಿರುವುದು ಸ್ಪಷ್ಟ.
ಗಣೇಶನ ಆರಾಧನೆ, ಆರಾಧಕರ ಆಚಾರ ವಿಚಾರಗಳ ಬಗ್ಗೆ ಸಾಣೇಹಳ್ಳಿ ಸ್ವಾಮೀಜಿಯವರು ಬಹಳ ತುಚ್ಚ ಮಾತುಗಳಿಂದ ನಿಂದಿಸಿರುವುದೂ ಅಕ್ಷಮ್ಯ. ಹಿಂದೂ ಧಾರ್ಮಿಕ ಆಚರಣೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ಬಹಿರಂಗವಾಗಿಯೇ ನೀಡಿದ್ದು, ಹಿಂದೂಗಳ ಭಾವನೆಯನ್ನು ಕೆರಳಿಸಲು ಹೊರಟಿರುವ ಸಾಣೇಹಳ್ಳಿ ಸ್ವಾಮೀಜಿಯವರ ವಿರುದ್ಧ ದೂರು ದಾಖಲಿಸಿಕೊಂಡು ಕೂಡಲೇ ಕಾನೂನು ಜರುಗಿಸಬೇಕೆಂದು ಮನವಿ.