Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರತ್ನಮಂಜರಿ: ಸಾಫ್ಟ್‌ವೇರ್ ಜಗತ್ತಿಂದ ಬಣ್ಣದ ಲೋಕಕ್ಕೆ ಬಂದ ಪ್ರತಿಭಾವಂತ ಪ್ರಸಿದ್ಧ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರತ್ನಮಂಜರಿ: ಸಾಫ್ಟ್‌ವೇರ್ ಜಗತ್ತಿಂದ ಬಣ್ಣದ ಲೋಕಕ್ಕೆ ಬಂದ ಪ್ರತಿಭಾವಂತ ಪ್ರಸಿದ್ಧ್!

Bengaluru City

ರತ್ನಮಂಜರಿ: ಸಾಫ್ಟ್‌ವೇರ್ ಜಗತ್ತಿಂದ ಬಣ್ಣದ ಲೋಕಕ್ಕೆ ಬಂದ ಪ್ರತಿಭಾವಂತ ಪ್ರಸಿದ್ಧ್!

Public TV
Last updated: May 5, 2019 11:55 am
Public TV
Share
2 Min Read
Ratnamanjari copy
SHARE

ಬೆಂಗಳೂರು: ಪ್ರತಿಷ್ಠಿತ ಸಾಫ್ಟ್‌ವೇರ್ ಕಂಪೆನಿಯಲ್ಲಿ ಗೌರವಾನ್ವಿತ ಕೆಲಸ. ತಿಂಗ ತಿಂಗಳು ಕೈ ಸೇರೋ ದೊಡ್ಡ ಮೊತ್ತದ ಸಂಬಳ. ಆರ್ಥಿಕವಾಗಿ ಬದುಕಿಗೆ ಯಾವ ತತ್ವಾರವೂ ಇಲ್ಲ ಎಂಬಂಥಾ ನಿರಾಳ ಸ್ಥಿತಿಗತಿ… ಇದು ಬಹುತೇಕರು ಕಲ್ಪಿಸಿಕೊಳ್ಳುವ ಸ್ವರ್ಗದಂಥಾ ಬದುಕಿನ ಚಿತ್ರ. ಆದರೆ ಅದೆಲ್ಲವೂ ದಕ್ಕಿದರೂ ಕೂಡಾ ಬೇರೇನನ್ನೋ ಧ್ಯಾನಿಸುವಂಥಾ ಮನಸುಗಳೂ ನಮ್ಮ ನಡುವಲ್ಲಿವೆ. ಈ ಥರದ ಧ್ಯಾನವೆಲ್ಲ ಬಹುಪಾಲು ಸಿನಿಮಾ ಕೇಂದ್ರಿತವಾದದ್ದೆಂಬುದು ಗೊತ್ತಿರೋ ವಿಚಾರವೇ. ಹಾಗೆ ಸಾಫ್ಟ್‌ವೇರ್ ಲೋಕದಿಂದ ಬಂದು ಚಿತ್ರರಂಗಕ್ಕೆ ಹೊಸಾ ಆಲೋಚನೆಯನ್ನು ಹೊತ್ತುತಂದ ಅನೇಕರಿದ್ದಾರೆ. ಆ ಸಾಲಿನಲ್ಲಿ ಇದೀಗ ಬಿಡುಗಡೆಗೆ ಸಜ್ಜುಗೊಂಡಿರುವ ರತ್ನಮಂಜರಿ ಚಿತ್ರದ ನಿರ್ದೇಶಕ ಪ್ರಸಿದ್ಧ್ ಕೂಡಾ ಅನಾಯಾಸವಾಗಿಯೇ ಸೇರ್ಪಡೆಗೊಳ್ಳುತ್ತಾರೆ.

ratnamanjari 1

ಬೆಂಗಳೂರಿನಲ್ಲಿಯೇ ಹುಟ್ಟಿ ಬೆಳೆದಿರುವ ಪ್ರಸಿದ್ಧ್ ಅವರ ಪಾಲಿಗೆ ಆರಂಭದಿಂದಲೂ ಸಿನಿಮಾ ಅಂದರೆ ಅದೇನೋ ಆಸಕ್ತಿ. ಆದರೆ ಅಲ್ಲಿ ಇಂಥಾದ್ದೇ ಕೆಲಸ ಮಾಡಬೇಕೆಂಬ ಇರಾದೆಯೇನೂ ಇರಲಿಲ್ಲ. ಕರಾಟೆಪಟುವೂ ಆಗಿರೋ ಅವರು ಅದರಲ್ಲಿ ಬ್ಲಾಕ್ ಬೆಲ್ಟ್ ಹಂತವನ್ನೂ ತಲುಪಿಕೊಂಡಿದ್ದವರು. ಅವರು ಡ್ಯಾನ್ಸ್ ಕೊರಿಯೋಗ್ರಾಫರ್ ಕೂಡಾ ಹೌದು. ಅನೇಕರಿಗೆ ನೃತ್ಯ ಹೇಳಿಕೊಟ್ಟ ತೃಪ್ತಿಯೂ ಅವರಲ್ಲಿದೆ. ಸಾಫ್ಟ್ ವೇರ್ ವಲಯದಲ್ಲಿಯೂ ಅವರಿಗೆ ಗ್ರಾಫಿಕ್ಸ್, ಆನಿಮೇಷನ್ ವಿಭಾಗದ ಕೆಲಸವೇ ಸಿಕ್ಕಿತ್ತು. ಇದು ಅವರೊಳಗೆ ಸುಪ್ತವಾಗಿದ್ದ ಸಿನಿಮಾ ಕನಸನ್ನು ಮತ್ತಷ್ಟು ನಿಗಿ ನಿಗಿಸುವಂತೆ ಮಾಡಿದ್ದದ್ದು ಸುಳ್ಳಲ್ಲ.

ratnamanjari 2

ಹೀಗೆಯೇ ಒಳಗೊಳಗೆ ಸಿನಿಮಾ ಕನಸನ್ನು ಸಾಕಿಕೊಂಡಿದ್ದ ಅವರು ಕಡೆಗೂ ದೃಢ ನಿರ್ಧಾರ ಮಾಡಿ ಸ್ಟೋರಿ ರೈಟರ್ ಅವತಾರದಲ್ಲಿ ಚಿತ್ರರಂಗದ ಪಡಸಾಲೆಗೆ ಅಡಿಯಿರಿಸಿದ್ದರು. ಅದಾಗಲೇ ಸಾಕಷ್ಟು ಕಥೆಗಳನ್ನು ಸಿದ್ಧಪಡಿಸಿಕೊಂಡಿದ್ದ ಅವರು ಮೊದಲು ಕಥೆ ಹೇಳಿದ್ದು ನಾದಬ್ರಹ್ಮ ಹಂಸಲೇಖಾ ಅವರ ಮುಂದೆ. ಹಂಸಲೇಖಾ ಕೂಡಾ ಪ್ರಸಿದ್ಧ್ ಒಳಗಿರೋ ಕಥೆಯ ಕಸುವನ್ನು ಗುರುತಿಸಿ ಪ್ರೋತ್ಸಾಹಿಸಿದ್ದರು. ಅವರೇ ಶಿವರಾಜ್ ಕುಮಾರ್ ಅವರಲ್ಲಿಗೂ ಕಳಿಸಿದ್ದರು. ಪ್ರಸಿದ್ಧ್ ಶಿವಣ್ಣನಿಗೂ ಕಥೆ ಹೇಳಿದ್ದರಾದರೂ ಕಾರಣಾಂತರಗಳಿಂದ ಆ ಕನಸು ಕೈಗೂಡಿರಲಿಲ್ಲ.

Ratnamanjarii

ಆ ನಂತರವೂ ಸಿನಿಮಾ ಮಾಡೋ ಗುಂಗಲ್ಲಿ ಅನೇಕರನ್ನು ಸಂಪರ್ಕಿಸಿದ್ದರಾದರೂ ಅದಕ್ಕೆ ಕಾಲ ಕೂಡಿ ಬಂದಿರಲಿಲ್ಲ. ಹೀಗೆಯೇ ನಿರಾಸೆಯಾದರೂ ಸೈರಿಸಿಕೊಂಡು ಮುಂದುವರೆಯುತ್ತಿದ್ದ ಪ್ರಸಿದ್ಧ ಅವರಿಗೆ ಕಡೆಗೂ ಸಿಕ್ಕಿದ್ದವರು ಎನ್ ಆರ್ ಐ ನಟರಾಜ್ ಹಳೆಬೀಡು. ಅವರೊಂದಿಗೆ ಸಿನಿಮಾ ಬಗ್ಗೆ ಚರ್ಚಿಸುತ್ತಾ ರತ್ನಮಂಜರಿ ಕಥೆ ಹುಟ್ಟಿಕೊಂಡಿತ್ತು. ತದನಂತರ ಡಾ. ನವೀನ್ ಮತ್ತು ಸಂದೀಪ್ ಕೂಡಾ ನಿರ್ಮಾಣಕ್ಕೆ ಜೊತೆಯಾಗೋ ಮೂಲಕ ಪ್ರಸಿದ್ಧ್ ಕನಸಿಗೆ ದೊಡ್ಡ ಮಟ್ಟದಲ್ಲಿಯೇ ಶುಭಾರಂಭ ದೊರೆತಿತ್ತು.

ratnamanjari

ಆ ನಂತರದಲ್ಲಿ ಛಾಯಾಗ್ರಾಹಕ ಪ್ರೀತಂ ತೆಗ್ಗಿನ ಮನೆ ಸೇರಿದಂತೆ ತಮ್ಮ ಕನಸಿಗೆ ಪೂರಕವಾದ ತಂತ್ರಜ್ಞರ ತಂಡವೇ ಪ್ರಸಿದ್ಧ್ ಅವರಿಗೆ ಸಿಕ್ಕಿತ್ತು. ನೋಡ ನೋಡುತ್ತಲೇ ಸಿನಿಮಾವನ್ನೇ ಉಸಿರಾಡೋ ಅಚ್ಚುಕಟ್ಟಾದೊಂದು ತಂಡವೂ ಸಾಥ್ ನೀಡಿತ್ತು. ಇದರಿಂದಾಗಿಯೇ ಯಾವ ಅಡೆತಡೆಯೂ ಇಲ್ಲದೇ ಈ ಚಿತ್ರ ಅಂದುಕೊಂಡಂತೆಯೇ ರೂಪುಗೊಂಡಿದೆಯಂತೆ. ಈ ಮೂಲಕ ಪ್ರಸಿದ್ಧ್ ಬಹುಕಾಲದ ಕನಸೊಂದು ಮೋಹಕವಾಗಿಯೇ ನನಸಾದ ಖುಷಿಯಲ್ಲಿದ್ದಾರೆ. ಕಥೆಯ ವಿಚಾರದಲ್ಲಿ, ತಾಂತ್ರಿಕವಾಗಿ ಹೊಸತನ ಹೊಂದಿರೋ ಈ ಚಿತ್ರ ಇದೇ ಮೇ ತಿಂಗಳಲ್ಲಿ ಅದ್ಧೂರಿಯಾಗಿಯೇ ಬಿಡುಗಡೆಯಾಗುತ್ತಿದೆ.

TAGGED:kannada cinemaNataraj Halebidprasidhratnamanjarisandalwoodಕನ್ನಡ ಸಿನೆಮಾನಟರಾಜ್ ಹಳೆಬೀಡುಪ್ರಸಿದ್ಧ್ರತ್ನಮಂಜರಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Maharashtra Man Arrest
Crime

180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ರೆಕಾರ್ಡ್‌ ಮಾಡಿದ್ದ ಆರೋಪಿ ಬಂಧನ

Public TV
By Public TV
14 minutes ago
Vijayapura Murder
Crime

ವಿಜಯಪುರದಲ್ಲಿ ಹಾಡಹಗಲೇ ಶೂಟೌಟ್ – ಗುಂಡಿನ ಸುರಿಮಳೆಗೈದು ರಿಯಲ್ ಎಸ್ಟೇಟ್ ಉದ್ಯಮಿಯ ಹತ್ಯೆ

Public TV
By Public TV
33 minutes ago
chikkamagaluru accident case
Chikkamagaluru

ಅಂಬೇಡ್ಕರ್‌ ಜಯಂತಿ ಮೆರವಣಿಗೆಯಲ್ಲಿದ್ದವರ ಮೇಲೆ ಮದ್ಯ ವ್ಯಸನಿಯಿಂದ ಕಾರು ಚಾಲನೆ – 7 ವರ್ಷದ ಮಗು ಸ್ಥಳದಲ್ಲೇ ಸಾವು

Public TV
By Public TV
41 minutes ago
PM Modi In Mangaluru
Districts

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ – 80 ಕೋಟಿ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 15-04-2026

Public TV
By Public TV
1 hour ago
Sigandur Launch Sagar Shivamogga Sharavati Back Water Siganduru Bridge
Karnataka

55 ವರ್ಷಗಳ ಓಡಾಟ ಬಂದ್‌ – ಇನ್ನೂ ಪ್ರವಾಸೋದ್ಯಮಕ್ಕೆ ಲಾಂಚ್‌ ಬಳಕೆಯಾಗಿಲ್ಲ ಯಾಕೆ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?