– ಪೊಲೀಸರ ಮೇಲೂ ಆಕ್ರೋಶ
ಮೈಸೂರು: ದಸರಾ ಹೊಸ್ತಿಲಲ್ಲಿ ಮೈಸೂರಿನಲ್ಲಿ ಚಾಮುಂಡಿ ದಸರಾ ವರ್ಸಸ್ ಮಹಿಷ ದಸರಾ ಎಂಬ ಸೈದ್ಧಾಂತಿಕ ಸಮರ ಶುರುವಾಗಿದೆ. ಈ ಕಾರಣಕ್ಕಾಗಿ ಚಾಮುಂಡಿ ಬೆಟ್ಟದಲ್ಲಿ ಪೊಲೀಸರಿಗೆ ಸಂಸದ ಪ್ರತಾಪ್ ಸಿಂಹ ತರಾಟೆ ತೆಗೆದುಕೊಂಡಿದ್ದಾರೆ.
ಬೆಟ್ಟದ ಮೇಲಿನ ಮಹಿಷಾಸುರ ಮೂರ್ತಿ ಬಳಿ ಮಹಿಷ ದಸರಾ ನಡೆಸುವ ಸಲುವಾಗಿ ಶಾಮಿಯಾನ, ವೇದಿಕೆ ಹಾಕಿ ತಯಾರಿ ಮಾಡಲಾಗುತ್ತಿತ್ತು. ಈ ಬಗ್ಗೆ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪ್ರತಾಪ್ ಸಿಂಹ, ಇಲ್ಲಿ ವೇದಿಕೆ ಹಾಕೋದಕ್ಕೆ ಯಾರು ನಿಮಗೆ ಅನುಮತಿ ಕೊಟ್ಟರು? ಇದನ್ನು ಮೊದಲು ಇಲ್ಲಿಂದ ತೆಗೆಯಿರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಹಾಕುವಾಗ ನೀವು ಏನು ಮಾಡುತ್ತಿದ್ರಿ ಪೊಲೀಸರೇ, ನಿಮ್ಮಿಂದ ಇಂತಹ ಕೆಲಸ ನಿರೀಕ್ಷೆ ಮಾಡಿರಲಿಲ್ಲ ಎಂದು ಅಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಪೊಲೀಸ್ ಕಮೀಷನರ್ ಹಾಗೂ ಡಿಸಿಪಿ ವಿರುದ್ಧ ಕೂಗಾಡಿದ್ದಾರೆ.
Advertisement
Advertisement
ಆಗ ನಮಗೂ ಇದಕ್ಕೂ ಸಂಬಂಧವಿಲ್ಲ. ಇದು ಗ್ರಾಮ ಪಂಚಾಯಿತಿ ಅವರು ಮಾಡಿರುವ ಕೆಲಸ ಎಂದು ಪೊಲೀಸ್ ಆಯುಕ್ತರು ಸ್ಪಷ್ಟನೆ ನೀಡಿದರು. ದಸರಾ ಉತ್ಸವ ಕಾರ್ಯಕ್ರಮಗಳಿಗೆ ವೇದಿಕೆ ಹಾಕುವ ಶಾಮಿಯಾನ ಮಾಲೀಕ ಶಫಿ ನೇತೃತ್ವದಲ್ಲಿ ಈ ವೇದಿಕೆ ಹಾಕಲಾಗಿತ್ತು. ಹೀಗಾಗಿ ಕೂಡಲೇ ಟ್ರಕ್ ತಂದು ಇದನ್ನು ತೆರವುಗೊಳಿಸಬೇಕು. ಇಲ್ಲವಾದರೆ ಅರಮನೆ ಆವರಣದಿಂದ ನಿನ್ನ ಓಡಿಸುತ್ತೇನೆಂದು ಶಾಮಿಯಾನ ಮಾಲೀಕರಿಗೆ ಪ್ರತಾಪ್ ಸಿಂಹ ಅವಾಜ್ ಹಾಕಿದ್ದಾರೆ.