Connect with us

Corona

ನಂಜನಗೂಡಿನಲ್ಲಿ ಮತ್ತೆ ನಾಲ್ಕು ಮಂದಿಗೆ ಕೊರೊನಾ?

Published

on

ಮೈಸೂರು: ನಂಜನಗೂಡಿನ ಜುಬಿಲೆಂಟ್ಸ್ ಕಾರ್ಖಾನೆಯ ನಾಲ್ಕು ಜನರಿಗೆ ಕೊರೊನಾ ಪಾಸಿಟಿವ್ ಆಗಿದೆ. ವಿಷಯವನ್ನು ಅಧಿಕೃತವಾಗಿ ಪ್ರಕಟವಾಗಬೇಕಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಫೇಸ್‍ಬುಕ್ ಲೈವ್ ಬಂದಿದ್ದ ಸಂಸದರು, ಕೊರೊನಾಗೆ ಸಂಬಂಧಿಸಿದಂತೆ ಸಂಘಟನೆ ಮತ್ತು ಕಾರ್ಯಕರ್ತರ ಕೆಲಸದ ವೈಖರಿ ತಿಳಿಸಿದರು. ಇದೇ ವೇಳೆ ನಂಜನಗೂಡಿನ ಜುಬಿಲೆಂಟ್ಸ್ ಕಾರ್ಖಾನೆಯಲ್ಲಿ ನೌಕರರು ಬಗ್ಗೆ ಮಾಹಿತಿ ನೀಡಿದರು. ಮೊದಲಿಗೆ ಒಬ್ಬರಿಗೆ ಕೊರೊನಾ ಸೋಂಕು ತಗುಲಿತ್ತು. ಮೂರರಿಂದ ಐದು ಆಯ್ತು. ಒಟ್ಟಾರೆ ಜಿಲ್ಲೆಯಲ್ಲಿ ಎಂಟು ಜನ ಸೋಂಕಿತರು ಪತ್ತೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ. ಮತ್ತೆ ನಾಲ್ಕು ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಅಧಿಕೃತ ಪ್ರಕಟನೆ ಹೊರ ಬೀಳಬೇಕಿದೆ ಎಂದಿದ್ದಾರೆ.

ಬಹುತೇಕರಲ್ಲಿ ತಮಗೆ ಕೊರೊನಾ ಇರೋದು ಬಗ್ಗೆಯೂ ಗೊತ್ತಿರಲಿಲ್ಲ. ಅಧಿಕಾರಿಗಳು ಮುಂಜಾಗ್ರತ ಕ್ರಮವಾಗಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಸೋಂಕು ಇರೋದು ದೃಢಪಟ್ಟಿದೆ ಎಂದು ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದಂತೆ ನಂಜನಗೂಡು ಪಟ್ಟಣವನ್ನು ಸಂಪೂರ್ಣ ಲಾಕ್‍ಡೌನ್ ಮಾಡಲಾಗಿದೆ. ಇಷ್ಟಾದ್ರೂ ಮೈಸೂರಿನಲ್ಲಿ ಮಾತ್ರ ಜನ ಜಾಗೃತರಾಗಿಲ್ಲ. ಅಗತ್ಯ ವಸ್ತುಗಳ ಖರೀದಿಗಾಗಿ ಮಾರುಕಟ್ಟೆಯಲ್ಲಿ ಸೇರಿದ್ದಾರೆ.