– 10 ಸಾವಿರ ರೂ. ಶ್ಯೂರಿಟಿ ಪಡೆದು ಜಾಮೀನು ನೀಡಿದ ಕೋರ್ಟ್
ಬೆಂಗಳೂರು: ಬಹುಭಾಷ ನಟ, ರಾಜಕಾರಣಿ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ವಲ್ಪ ರಿಲೀಫ್ ಸಿಕ್ಕಿದೆ.
ಸಂಸದ ಪ್ರತಾಪ್ ಸಿಂಹ ಅವರನ್ನು ಸತತ 7 ಗಂಟೆಗಳ ಕಾಲ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲೇ ಕೂರಿಸಲಾಗಿತ್ತು. ಬಳಿಕ ವಿಚಾರಣೆ ನಡೆಸಿದ ನ್ಯಾಯಾಧೀಶರು, 10 ಸಾವಿರ ರೂ. ಶ್ಯೂರಿಟಿ ಆಧಾರದ ಮೇಲೆ ಪ್ರತಾಪ್ ಸಿಂಹ ಅವರಿಗೆ ಜಾಮೀನು ನೀಡಿದ್ದಾರೆ. ಅಷ್ಟೇ ಅಲ್ಲದೆ ಶ್ಯೂರಿಟಿ ಹಣವನ್ನು ಕೂಡಲೇ ಪಾವತಿ ಮಾಡುವಂತೆ ಸೂಚನೆ ನೀಡಿದ್ದಾರೆ.
Advertisement
Advertisement
ಏನಿದು ಪ್ರಕರಣ?:
ಸಂಸದ ಪ್ರತಾಪ್ ಸಿಂಹ ಟ್ವಿಟ್ಟರ್ ನಲ್ಲಿ ಪ್ರಕಾಶ ರೈ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಪ್ರಕಾಶ್ ರೈ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದರು. ಈ ಹಿಂದೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಂಸದರಿಗೆ ಅನೇಕ ಬಾರಿ ಸಮನ್ಸ್ ನೀಡಲಾಗಿತ್ತು. ಆದರೂ ಪ್ರತಾಪ್ ಸಿಂಹ ಹಲವು ಬಾರಿ ಕೋರ್ಟ್ ಗೆ ಹಾಜರಾಗದೇ ಇದ್ದರು. ಹೀಗಾಗಿ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಹೀಗಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದರು.
Advertisement
Advertisement
ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದರು. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿತ್ತು. ಇದರಿಂದಾಗಿ ಪ್ರತಾಪ್ ಸಿಂಹ ಸತತ 7 ಗಂಟೆಗಳ ಕಾಲ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲೇ ಕುಳಿತಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv