ಬೆಂಗಳೂರು: ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ.
Advertisement
Advertisement
ಪ್ರತಾಪ್ ಸಿಂಹ ಟ್ವಿಟ್ಟರ್ ನಲ್ಲಿ ಪ್ರಕಾಶ ರೈ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಪ್ರಕಾಶ್ ರೈ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದರು. ಇಂದು ಕೋರ್ಟ್ ಗೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿಂದೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಂಸದರಿಗೆ ಅನೇಕ ಬಾರಿ ಸಮನ್ಸ್ ನೀಡಲಾಗಿತ್ತು. ಆದರೂ ಪ್ರತಾಪ್ ಸಿಂಹ ಹಲವು ಬಾರಿ ಕೋರ್ಟ್ ಗೆ ಹಾಜರಾಗದೇ ಇದ್ದರು. ಹೀಗಾಗಿ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv