ಮೈಸೂರು: ಅಧಿಕಾರಕ್ಕಾಗಿ ಸಿದ್ದರಾಮಯ್ಯ ಅವರು ಸಿದ್ದರಹೀಮ್ ಅಯ್ಯ ಎಂದು ಬೇಕಾದರೂ ಹೆಸರು ಬದಲಾಯಿಸಿಕೊಳ್ಳುತ್ತಾರೆ. ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಡಿ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಬ್ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಡಿ. ಗೋರಿಪಾಳ್ಯದ ಜಮೀರ್ ಅಹಮದ್ ಈಗ ಸಿದ್ದರಾಮಯ್ಯ ಅವರನ್ನು ಚಾಮರಾಜ ಪೇಟೆಯಲ್ಲಿ ಚುನಾವಣೆಗೆ ಸ್ಪರ್ಧಿಸಲು ಕರೆಯುತ್ತಿದ್ದಾರೆ. ಅಧಿಕಾರಕ್ಕಾಗಿ ಅವರು ಹೆಸರನ್ನು ಬದಲಾಯಿಸಿಕೊಳ್ಳಲು ಸಿದ್ಧರಿದ್ದಾರೆ ಎಂದು ಕಿಡಿಕಾರಿದರು.
Advertisement
Advertisement
ಎಲ್ಲಾ ರೀತಿಯ ಒತ್ತಡ, ಟೀಕಾಪ್ರಹಾರದ ನಡುವೆಯೂ ಸಮವಸ್ತ್ರ ಕಡ್ಡಾಯಕ್ಕೆ ಸರ್ಕಾರ ಬದ್ಧವಾಗಿರೋದು ಒಳ್ಳೆಯ ಸಂದೇಶ. ಸಮವಸ್ತ್ರ ಎನ್ನುವುದು ಬರೀ ಬಣ್ಣದ ಉಡುಪಲ್ಲ. ಅದು ಎಲ್ಲಾ ಮಕ್ಕಳು ಸಮಾನರು ಎಂದು ಸಾರುವ ಉಡುಪಾಗಿದೆ. ಆದರೆ ಹಿಜಬ್‍ಗಾಗಿ ಇಷ್ಟು ಹಠ ಹಿಡಿದು ಯಾಕಾಗಿ ವಿದ್ಯಾರ್ಥಿಗಳು ಕೂತಿದ್ದಾರೆ ಎಂದು ಪ್ರಶ್ನಿಸಿದ ಅವರು, ಹಿಜಬ್ ಹಾಕಿಕೊಂಡು, ಟೋಪಿ ಹಾಕಿಕೊಂಡು ನೀವು ಕಲಿಯಬೇಕು ಎಂಬುದಾದರೆ ಮದರಸಗೆ ಹೋಗಿ. ಅಲ್ಲಿ ನಿಮ್ಮ ಪ್ರತ್ಯೇಕ ಭಾವನೆ ಕಾಪಾಡಿಕೊಳ್ಳಬಹುದು ಎಂದು ಟೀಕಿಸಿದರು. ಇದನ್ನೂ ಓದಿ: ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ನಿಧನ
Advertisement
Advertisement
ಸರ್ಕಾರಿ ಶಾಲೆಗಳಲ್ಲಿ ಈ ಪ್ರತ್ಯೇಕತೆ ಸಾಧ್ಯವಿಲ್ಲ. ಇದು ಬ್ರಿಟಿಷರ ಭಾರತವಲ್ಲ. ಇದು ಭರತ ಖಂಡ. ಹಿಂದೂ ಧರ್ಮದ ಬುನಾದಿ ಮೇಲೆ ಇರುವ ದೇಶವಿದು. ಇಲ್ಲಿ ಗಣಪತಿ ಪೂಜೆ, ಹೆಣ್ಣು ಮಕ್ಕಳ ಕುಂಕುಮ ಸಂಸ್ಕೃತಿಯ ಭಾಗ. ಇದನ್ನು ಯಾರೂ ಪ್ರಶ್ನಿಸುವಂತಿಲ್ಲ ಎಂದ ಅವರು, ಇಸ್ಲಾಂ, ಕ್ರಿಶ್ಚಿಯನ್ನರು ಮರುಭೂಮಿಯಲ್ಲಿ ಹುಟ್ಟಿ ನೆಲೆಗಾಗಿ ಹುಡುಕಿಕೊಂಡು ಇಲ್ಲಿಗೆ ಬಂದಿದ್ದಾರೆ. ಇಲ್ಲಿಗೆ ಬಂದ ಮೇಲೆ ಹಿಂದೂ ಸಂಸ್ಕೃತಿಯನ್ನು ಒಪ್ಪಿಕೊಳ್ಳಬೇಕು ಎಂದರು. ಇದನ್ನೂ ಓದಿ: ಗೋವಾ ಚುನಾವಣೆಯಲ್ಲಿ ಬಿಜೆಪಿ – ಕಾಂಗ್ರೆಸ್ ನೇರ ಪೈಪೋಟಿ: ರಾಹುಲ್ ಗಾಂಧಿ