ಮಡಿಕೇರಿ: ಕಾಂಗ್ರೆಸ್ಸಿನ ಸರ್ವನಾಶಕ್ಕೆ ಅವರೇ ಎಲ್ಲ ಕೆಲಸಗಳನ್ನು ಮಾಡಿಕೊಳ್ಳುತ್ತಿದ್ದಾರೆ ಎಂದು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.
ಸೋಮವಾರಪೇಟೆ ಬಜೆಗುಂಡಿಯಲ್ಲಿ ಬಡವರಿಗೆ ಹಕ್ಕು ಪತ್ರ ವಿತರಣೆ ಮಾಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಮಾಜಿ ಸಚಿವ ವೀರಪ್ಪ ಮೊಯಿಲಿ ತಮ್ಮ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನೇ ರದ್ದು ಮಾಡಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ನವರು ಕೋವಿಡ್ ನಿಯಮ ಉಲ್ಲಂಘಿಸಿ ಮೇಕೆದಾಟಿಗಾಗಿ ಯಾತ್ರೆ ಮಾಡುತ್ತಿದ್ದಾರೆ. ಕಾಂಗ್ರೆಸ್ಸಿನ ಸರ್ವನಾಶಕ್ಕೆ ಅವರೇ ಎಲ್ಲ ಕೆಲಸಗಳನ್ನು ಮಾಡಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಪಾದಯಾತ್ರೆಯಲ್ಲಿ ಡಿಕೆಶಿ ಓಲಾಡುತ್ತ ಹೊರಟಿದ್ದರು, ವಿಶೇಷ ವರದಿ ಮಾಡಬೇಕಿತ್ತು: ಬಸನಗೌಡ ಯತ್ನಾಳ
ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ಮುಂಖಡರನ್ನು ಅಲ್ಲಿಯ ಅಧಿಕಾರಿಗಳು ಕೋವಿಡ್ ಪರೀಕ್ಷೆ ಮಾಡಲು ಮುಂದಾಗಿದ್ರೆ, ಅದಕ್ಕೂ ಕಾಂಗ್ರೆಸ್ ನವರು ವಿರೋಧ ವ್ಯಕ್ತಪಡಿಸುತ್ತಾರೆ. ರಾಜ್ಯದಲ್ಲಿ ಈಗಾಗಲೇ ಕೋವಿಡ್ ಪ್ರಕರಣ ಪಾಸಿಟಿವ್ ರೇಟ್ ಹೆಚ್ಚಾಗುತ್ತಿದೆ. ಕೋವಿಡ್ ಇಷ್ಟೊಂದು ಉಲ್ಭಣವಾಗುತ್ತಿದೆ. ಇಂತಹ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿ ಯಾತ್ರೆ ಮಾಡುತ್ತಿದ್ದಾರೆ ಎಂದು ವಿರೋಧ ವ್ಯಕ್ತಪಡಿಸಿದರು.
ಕಾಂಗ್ರೆಸ್ಸಿನ ಹಿರಿಯರು ಹಾಕಿಕೊಟ್ಟ ಹಾದಿಯನ್ನು ತುಳಿಯುವುದಕ್ಕೆ ಇವರು ಹಿಂದೇಟು ಹಾಕುತ್ತಿದ್ದಾರೆ. ಕಾಂಗ್ರೆಸ್ಸಿನ ಸ್ಥಿತಿ ಎಂತಹ ಅಧೋಗತಿ ತಲುಪಿದೆ. ಕಾಂಗ್ರೆಸ್ಸಿನ ಸರ್ವನಾಶಕ್ಕೆ ಅವರೇ ಕಾರಣರಾಗುತ್ತಾರೆ ಎಂದು ನುಡಿದರು. ಇದನ್ನೂ ಓದಿ: ನನ್ನನ್ನು ನೋಡಿದ್ರೆ ಕೊರೊನಾ ಇದೆ ಅಂತ ಅನ್ನಿಸುತ್ತಾ?: ಡಿ.ಕೆ. ಶಿವಕುಮಾರ್