ಮೈಸೂರು: ಸಂಸತ್ತಿನಲ್ಲಿ ಸ್ಮೋಕ್ ಬಾಂಬ್ (Smoke Bomb) ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಳಿಕೊರರಿಗೆ ಪಾಸ್ ನೀಡಿದ್ದಕ್ಕೆ ಸಂಸದ ಪ್ರತಾಪ್ ಸಿಂಹ (Pratap Simha) ವಿರುದ್ಧ ಮೈಸೂರಿನಲ್ಲಿ (Mysuru) ವಿವಾದಿತ ಫ್ಲೆಕ್ಸ್ (Flex) ಅಳವಡಿಸಲಾಗಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮೈಸೂರಿನ ಮಹಾರಾಜ ವೃತ್ತದ ಬಳಿ ಫ್ಲೆಕ್ಸ್ ಅಳವಡಿಸಿದ್ದು, ಪ್ರತಾಪ್ ಸಿಂಹ ದೇಶದ್ರೋಹಿ ಎಂದು ಬರೆಯಲಾಗಿದೆ. ಫ್ಲೆಕ್ಸ್‌ನಲ್ಲಿ ಬಾಂಬ್ ಹಾಗೂ ಪಾಸ್ ಹಿಡಿದು ನಿಂತಿರುವ ರೀತಿಯ ತಿರುಚಿದ ಫೋಟೋವನ್ನು ಅಳವಡಿಸಲಾಗಿದೆ.
ಸಂಸದ ಸ್ಥಾನದಿಂದ ಪ್ರತಾಪ್ ಸಿಂಹ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ ಚಳುವಳಿ ನಡೆಸಲಾಗುತ್ತಿದೆ. ಸಂಸತ್ ಭವನಕ್ಕೆ ದುಷ್ಕರ್ಮಿಗಳಿಗೆ ನುಗ್ಗಲು ಪಾಸ್ ನೀಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಪ್ರತಿಭಟಸಿದೆ. ಇದನ್ನೂ ಓದಿ: ಸಂಸತ್ ಸ್ಮೋಕ್ ಬಾಂಬ್ ಕೇಸ್ – ಟಿಎಂಸಿ ಶಾಸಕನ ಜೊತೆ ಆರೋಪಿ – ಫೋಟೋ ಹರಿಬಿಟ್ಟ ಬಿಜೆಪಿ
ವಿಷಯ ತಿಳಿಯುತ್ತಿದ್ದಂತೆ ಪಾಲಿಕೆ ಸಿಬ್ಬಂದಿ ಪ್ರತಾಪ್ ಸಿಂಹ ವಿವಾದಿತ ಫ್ಲೆಕ್ಸ್ ಅನ್ನು ತೆರವುಗೊಳಿಸಲು ಮುಂದಾಗಿದೆ. ಈ ವೇಳೆ ಹಿಂದುಳಿದ ಜಾಗೃತ ವೇದಿಕೆ ಸದಸ್ಯರು ಸಿಬ್ಬಂದಿ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ. ಇದನ್ನೂ ಓದಿ: ಯಾದಗಿರಿಯಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಸದ್ದು – ಪಾಕಿಸ್ತಾನಕ್ಕೆ ಕಾಲ್!