ಮೈಸೂರು: ವಾಲ್ಮೀಕಿ ಹಗರಣದ ವಿರುದ್ಧ ಸರಿಯಾದ ಹೋರಾಟ ನಡೆದರೆ ಸಿಎಂ ಕುರ್ಚಿ ಅಲ್ಲಾಡುತ್ತೆ ಎಂದು ಮಾಜಿ ಸಂಸದ ಪ್ರತಾಪ್ (Prathap Simha) ಸಿಂಹ ಹೇಳಿದ್ದಾರೆ.
ವಾಲ್ಮೀಕಿ ಹಗರಣದ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸೆ.17ಕ್ಕೆ ವಾಲ್ಮೀಕಿ ಹಗರಣ ವಿಚಾರದಲ್ಲಿ ಪಾದಯಾತ್ರೆ ಮಾಡಲು ನಿರ್ಧಾರವಾಗಿದೆ. ಬೆಳಗಾವಿಯಲ್ಲಿ ನಡೆದದ್ದು ಬಿಜೆಪಿ ಅತೃಪ್ತರ ಬಂಡಾಯಗಾರರ ಸಭೆಯಲ್ಲ. ಬಿಜೆಪಿಯ ಜನಪ್ರಿಯ ನೇತಾರ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ನಡೆದ ಸಭೆ ಎಂದರು.
Advertisement
ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಮೊದಲಿಗೆ ಆರೋಪಿ ನಂ-1 ಆಗಿ, ನಂತರ A-17 ಆಗಿ, ಆರೂವರೆ ವರ್ಷ ಜೈಲಿನಲ್ಲಿದ್ದು ಇತ್ತೀಚೆಗೆ ಜಾಮೀನಿನ ಹೊರಬಂದಿರುವ ಸ್ನೇಹಿತ ಮದ್ದೂರು ನವೀನ್ ರನ್ನು ಭೇಟಿಯಾಗಿ ಅರೋಗ್ಯ ವಿಚಾರಿಸಿದೆ. pic.twitter.com/l8lsZBP43M
— Prathap Simha (@mepratap) August 12, 2024
Advertisement
ನಾವು ಮೈಸೂರು ಚಲೋ ಪಾದಯಾತ್ರೆ ಅನುಭವದ ಹಂಚಿಕೊಂಡಿದ್ದೇವೆ. ವಾಲ್ಮೀಕಿ ಹಗರಣದ ವಿರುದ್ಧ ಸರಿಯಾದ ಹೋರಾಟ ನಡೆದರೆ ಸಿಎಂ ಕುರ್ಚಿ ಅಲ್ಲಾಡುತ್ತೆ. ಬಸನಗೌಡ ಪಾಟೀಲ್ ಯತ್ನಾಳ್‌ರಂತ (Basangouda Patil Yatnal) ಬಹು ದೊಡ್ಡ ನಾಯಕರು ಕರೆದ ಕಾರಣ ನಾನು ಹೋಗಿದ್ದೆ ಎಂದು ಹೇಳಿದರು. ಇದನ್ನೂ ಓದಿ: ಜಮ್ಮು-ಕಾಶ್ಮೀರ: ಭಯೋತ್ಪಾದಕರ ವಿರುದ್ಧದ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನಾ ಕ್ಯಾಪ್ಟನ್ ಹುತಾತ್ಮ
Advertisement
ಈ ಪಾದಯಾತ್ರೆ ಯಾರ ಮೇಲಾಟದ ಕಾರ್ಯಕ್ರಮವಲ್ಲ. ಯಾರ ನಾಯಕತ್ವ ಪ್ರದರ್ಶನವೂ ಅಲ್ಲ. ಪಾದಯಾತ್ರೆಗೆ ಹೈಕಮಾಂಡ್ ಅನುಮತಿ ಕೊಡುತ್ತದೆ. ಅನುಮತಿಯೊಂದಿಗೆ ಪಾದಯಾತ್ರೆ ಮಾಡುತ್ತೇವೆ. ಬಿಜೆಪಿ(BJP) ರಾಜ್ಯಾಧ್ಯಕ್ಷರ ಹಾದಿಯಾಗಿ ಎಲ್ಲರನ್ನು ಪಾದಯಾತ್ರೆಗೆ ಕರೆಯುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ಚಿಂತನೆ; ಬಿಪಿಎಲ್ ಮಾನದಂಡ ಫಿಕ್ಸ್?
Advertisement
ದಿನೇಶ್‌ಗೆ ತಿರುಗೇಟು:
ಗೌರಿ ಲಂಕೇಶ್ ಆರೋಪಿಯ ಭೇಟಿಯಾದ ವಿಚಾರದ ಕುರಿತು ದಿನೇಶ್ ಗುಂಡೂರಾವ್ ಟ್ವೀಟ್‌ಗೆ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ರಾಜಕಾರಣಿಗಳ ಮಕ್ಕಳಿಗೆ ಅಪ್ಪಂದಿರ ಪ್ರತಿಭೆ ವರ್ಗಾವಣೆ ಆಗುವುದಿಲ್ಲ. ದಿನೇಶ್ ಗುಂಡೂರಾವ್ (Dinesh Gundu Rao) ವಿಚಾರದಲ್ಲೂ ಅದೇ ಆಗಿದೆ. ಪ್ರಕರಣದ ಆರೋಪಿಯನ್ನು ಮಾತಾಡಿಸುವುದೇ ತಪ್ಪಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮಂಡ್ಯದಲ್ಲಿ ಮೆಡಿಕಲ್ ಮಾಫಿಯಾ; ಲೋಕಾಯುಕ್ತ ದಾಳಿಯಲ್ಲಿ ಲಕ್ಷಾಂತರ ರೂ. ಮೌಲ್ಯದ ಅವಧಿ ಮುಗಿದ ಮೆಡಿಸಿನ್ ಪತ್ತೆ
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹಗರಣದ ವಿಚಾರದಲ್ಲಿ ಸೋನಿಯಾ ಗಾಂಧಿ(Sonia Gandhi), ರಾಹುಲ್ ಗಾಂಧಿ(Rahul Gandhi) ಇಬ್ಬರು ಆರೋಪಿಗಳು. ಕಾಂಗ್ರೆಸ್ ನಾಯಕರು ಯಾಕೆ ಹೋಗಿ ಅವರ ಕಾಲಿಗೆ ಬೀಳುತ್ತಾರೆ? ಅಧಿನಾಯಕ, ಅಧಿನಾಯಕಿ ಅಂತಾ ಕರೆಯುವ ಸೋನಿಯಾ, ರಾಹುಲ್ ಆರೋಪಿ ಸ್ಥಾನದಲ್ಲಿ ಇಲ್ವಾ? ದಿನೇಶ್ ಗುಂಡೂರಾವ್ ತಿಳಿಗೇಡಿ ತನದಲ್ಲಿ ಹೇಳಿಕೆ ಕೊಡುವುದನ್ನು ನಿಲ್ಲಿಸಲಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಕೇಜ್ರಿವಾಲ್‌ಗೆ ಜಾಮೀನು ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್