ಚಾಮರಾಜನಗರ: ಇಲ್ಲದಿರುವ ವಿವಾದ ಸೃಷ್ಟಿಸುವುದೇ ಪ್ರತಾಪ್ ಸಿಂಹ ಕೆಲಸವಾಗಿದೆ ಎಂದು ಹೆಳುವ ಮೂಲಕ ಸಂಸದ ಪ್ರತಾಪ್ ಸಿಂಹಗೆ ತಿರುಗೇಟು ನೀಡಿದ್ದಾರೆ.
ಕೊಡಗಿನ ಜನ ಟಿಪ್ಪು ಸುಲ್ತಾನ್‍ಗೆ ಹೆದರಲಿಲ್ಲ, ಸಿದ್ದು ಸುಲ್ತಾನ್‍ಗೆ ಹೆದರುತ್ತಾರೆ ಎಂಬ ಪ್ರತಾಪ್‍ಸಿಂಹ ಹೇಳಿಕೆ ವಿಚಾರವಾಗಿ ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಚೋದನಾಕಾರಿ ಹೇಳಿಕೆ ಕೊಟ್ಟು ಇಲ್ಲದಿರುವ ವಿವಾದ ಸೃಷ್ಟಿಸುವುದೇ ಪ್ರತಾಪ್ ಸಿಂಹ ಕೆಲಸ. ಕೊಡಗಿನ ಜನ ಧೈರ್ಯವಂತರು, ವೀರರು ಹಾಗೂ ಒಳ್ಳೆಯ ಜನ. ಅಂತಹವರನ್ನು ಬಿಜೆಪಿಯವರು ಹೇಡಿಗಳಾಗಿ ಕಲ್ಲರಸೆಯುವ ಮಟ್ಟಕ್ಕೆ ತಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರ್‍ಎಸ್‍ಎಸ್ ಸಂಚಾಲಕ ಹಾಗೂ ಬಿಜೆಪಿ ಕಾರ್ಯಕರ್ತನ ಮೂಲಕ ಮೊಟ್ಟೆ ಎಸೆಸಿದ್ದಾರೆ. ಕೊನೆಗೆ ಆತ ನಮ್ಮ ಕಾರ್ಯಕರ್ತನೇ ಅಲ್ಲ. ಕಾಂಗ್ರೆಸ್ ಕಾರ್ಯಕರ್ತ ಅಂತ ಸುಳ್ಳು ಹೇಳಿ ಬಿಜೆಪಿಯವರು ಹೇಡಿತನ ತೋರಿಸುತ್ತಿದ್ದಾರೆ. ಬಿಜೆಪಿಯವರ ರಾಜಕೀಯ ಅಸಹ್ಯ ಹುಟ್ಟಿಸುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ನಾಟಿ ಕೋಳಿ ಊಟ ಮಾಡಿ ಅಂಬಾರಿಗೆ ಪುಷ್ಪಾರ್ಚನೆ: ಸಿದ್ದು ವಿರುದ್ಧ ಪ್ರತಾಪ್ ಸಿಂಹ ಕಿಡಿ
ಸಿದ್ದರಾಮಯ್ಯ ಹತ್ಯೆಗೆ ಸಂಚು ಮಾಡಲಾಗಿದೆ ಎಂಬ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ಆರೋಪ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು, ಆ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ಬಿಜೆಪಿಯವರ ಹಾಗೂ ಹಿಂದುತ್ವವಾದಿ ಸಂಘಟನೆಗಳ ಇತಿಹಾಸ ಗಮನಿಸಿದಾಗ ಹಿಂಸಾಚಾರದಲ್ಲಿ ತೊಡಗಿರುವುದು ಕಂಡುಬಂದಿದೆ. ಅವರು ಏನು ಮಾಡಲು ಹೇಸುವವರಲ್ಲ. ನಾವು ಯಾವುದಕ್ಕೂ ಹೆದರುವುದಿಲ್ಲ, ನಮ್ಮ ಹೋರಾಟ ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದಿನೇಶ್ ಗುಂಡೂರಾವ್ ವಾಹನದ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ದಾಳಿ