ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ರವೀಣ್ ಹತ್ಯೆಗೈದು ಪ್ರಮುಖ ಮೂವರು ಆರೋಪಿಗಳು ಕೇರಳಕ್ಕೆ ಪರಾರಿಯಾಗಿದ್ದರು. ಆ ಬಳಿಕ ಪೊಲೀಸರು ಆರೋಪಿಗಳ ಪತ್ತೆಗಾಗಿ ಕೇರಳದಲ್ಲಿ ಬೀಡುಬಿಟ್ಟಿದ್ದರು. ಇದೀಗ ಕೇರಳದಲ್ಲಿ ಮೂವರು ಆರೋಪಿಗಳಾದ ಶಿಯಾಬ್, ರಿಯಾಝ್, ಬಶೀರ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಆಸ್ತಿ ಸೀಜ್: ಅಲೋಕ್ ಕುಮಾರ್
ಪೊಲೀಸರು ಕೇರಳದಲ್ಲಿ ಆರೋಪಿಗಳನ್ನು ಬಂಧಿಸಿರುವ ಬಗ್ಗೆ ಮಾಹಿತಿ ಇದ್ದು, ಗೌಪ್ಯ ಸ್ಥಳದಲ್ಲಿರಿಸಿ ಮೂವರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಪ್ರವೀಣ್ ಹತ್ಯೆಗೈದ ಪ್ರಮುಖ ಆರೋಪಿಗಳ ಬಂಧನದ ಬಗ್ಗೆ ಇಂದು ಮಧ್ಯಾಹ್ನ 12.30ಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಇದನ್ನೂ ಓದಿ: ಸೇನಾ ಶಿಬಿರದೊಳಗೆ ನುಗ್ಗಲು ಯತ್ನಿಸಿದ್ದ ಇಬ್ಬರು ಉಗ್ರರ ಹತ್ಯೆ- ಮೂವರು ಯೋಧರು ಹುತಾತ್ಮ
ಏನಿದು ಘಟನೆ:
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.